Sunday, November 8, 2026
spot_img
More
    spot_img
    HomeLatest newsಸರ್ಕಾರಿ ನೌಕರರಿಗೆ ಓಬಿಸಿ ಮೀಸಲಾತಿ ಪ್ರಮಾಣ ಪತ್ರ: ಸರ್ಕಾರಕ್ಕೆ ಮನವಿ ಏನು?

    ಸರ್ಕಾರಿ ನೌಕರರಿಗೆ ಓಬಿಸಿ ಮೀಸಲಾತಿ ಪ್ರಮಾಣ ಪತ್ರ: ಸರ್ಕಾರಕ್ಕೆ ಮನವಿ ಏನು?

    ಕರ್ನಾಟಕದ ಸರ್ಕಾರಿ ನೌಕರರು ಸರ್ಕಾರದ ಕಾರ್ಯದರ್ಶಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಪತ್ರವೊಂದನ್ನು ಬರೆದಿದ್ದು, ಆದಾಯ ತೆರಿಗೆ ಮಿತಿಯನ್ನು 8 ರಿಂದ 15 ಲಕ್ಷಕ್ಕೆ ಏರಿಕೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಆದರೆ ಓಬಿಸಿ ಪ್ರಮಾಣ ಪತ್ರವನ್ನು ನೀಡುವಾಗ ವೇತನದ ಆದಾಯವನ್ನು ಪರಿಗಣಿಸಬಾರದು ಎಂದು ಒತ್ತಾಯಿಸಿದ್ದಾರೆ.

    ಈ ಕುರಿತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಪತ್ರವನ್ನು ಬರೆದಿದ್ದಾರೆ. ಈ ಪತ್ರವು ಹಿಂದುಳಿದ ವರ್ಗಗಳ ಮೀಸಲಾತಿ ಸಂಬಂಧ ಕೆನೆಪದರ ವಾರ್ಷಿಕ ಆದಾಯ ಮಿತಿಯನ್ನು ರೂ. 8 ಲಕ್ಷಗಳಿಂದ ರೂ. 15 ಲಕ್ಷಗಳಿಗೆ ಹೆಚ್ಚಿಸುವುದು ಸರ್ಕಾರಿ ನೌಕರರ ಮಕ್ಕಳ ಉನ್ನತ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಓ.ಬಿ.ಸಿ. ಮೀಸಲಾತಿ ಪ್ರಮಾಣ ಪತ್ರ ನೀಡುವಾಗ ವೇತನದ ಆದಾಯವನ್ನು ಪರಿಗಣಿಸದಿರುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.

    ಪತ್ರದ ವಿವರಗಳು: ಈ  ವಿಷಯಕ್ಕೆ ಸಂಬಂಧಿಸಿದಂತೆ ಸಾಮಾಜಿಕವಾಗಿ ಮುಂದುವರೆದ ವ್ಯಕ್ತಿಗಳು ಹಾಗೂ ವರ್ಗಗಳನ್ನು (ಕೆನೆಪದರ) ಹಿಂದುಳಿದ ವರ್ಗಗಳ ಮೀಸಲಾತಿಯಿಂದ ಹೊರತುಪಡಿಸಲು ಸರ್ಕಾರವು ಕೆನೆಪದರ ನೀತಿಯ ವಾರ್ಷಿಕ ಆದಾಯದ ಮಿತಿಯನ್ನು ರೂ. 8 ಲಕ್ಷಗಳಿಗೆ ನಿಗದಿಪಡಿಸಿದೆ.

    ರಾಜ್ಯ 7ನೇ ವೇತನ ಆಯೋಗದ ಶಿಫಾರಸ್ಸುಗಳ ಅನುಷ್ಠಾನದಿಂದಾಗಿ ಸರ್ಕಾರಿ ನೌಕರರ ವಾರ್ಷಿಕ ಆದಾಯ ಮಿತಿ ಹೆಚ್ಚಾಗಿರುವುದರಿಂದ, ರಾಜ್ಯ ಸರ್ಕಾರಿ ನೌಕರರು ತಮ್ಮ ಮಕ್ಕಳ ಶಿಕ್ಷಣ ಮತ್ತು ಉದ್ಯೋಗದಲ್ಲಿ ಕೆನೆಪದರ ನೀತಿಗೆ ಅನುಗುಣವಾಗಿ ಮೀಸಲಾತಿಯನ್ನು ಪಡೆಯಲು ಅನರ್ಹರಾಗುತ್ತಿರುವುದರಿಂದ ಕೆನೆಪದರ ಮಿತಿಯನ್ನು ಪರಿಷ್ಕರಿಸಿ ವಾರ್ಷಿಕ ಆದಾಯ ಮಿತಿಯನ್ನು ರೂ. 8 ಲಕ್ಷಗಳಿಂದ ರೂ. 15 ಲಕ್ಷಗಳಿಗೆ ಹೆಚ್ಚಿಸಲು ಮನವಿ ಮಾಡಲಾಗಿತ್ತು.

    * ಭಾರತ ಸರ್ಕಾರವು ಹಿಂದುಳಿದ ವರ್ಗಗಳಿಗೆ ಕೆನೆಪದರ ನೀತಿಯನ್ನು ಅಳವಡಿಸುವ ಸಂಬಂಧ ಮಾರ್ಗಸೂಚಿ ಹೊರಡಿಸಿದ್ದು, ಆ ಮಾರ್ಗಸೂಚಿಯಂತೆ ರಾಷ್ಟ್ರದ ಬಹುತೇಕ ಎಲ್ಲಾ ರಾಜ್ಯಗಳು ಈಗಾಗಲೇ ಕೇಂದ್ರದ ಮಾರ್ಗಸೂಚಿಯಲ್ಲಿನ ನಿಯಮಗಳಿಗೆ ಯಾವುದೇ ಬದಲಾವಣೆ ಮಾಡಿಕೊಳ್ಳದೇ, ಯಥಾಸ್ಥಿತಿಯನ್ನು ಕಾಯ್ದುಕೊಂಡು ಕೇಂದ್ರ ಸರ್ಕಾರದ ಅಧೀನ ಇಲಾಖೆಗಳು ಹಾಗೂ ಆಯಾ ರಾಜ್ಯಗಳ ಅಧೀನ ಇಲಾಖೆಗಳ ಶಿಕ್ಷಣ ಮತ್ತು ಉದ್ಯೋಗಕ್ಕೆ ಸರ್ಕಾರಿ ನೌಕರರ ವೇತನವನ್ನು ಕುಟುಂಬ ಆದಾಯಕ್ಕೆ ಪರಿಗಣಿಸದೆ ಮೀಸಲಾತಿ ಪ್ರಮಾಣ ಪತ್ರಗಳನ್ನು ನೀಡುತ್ತಿವೆ.

    * ಕರ್ನಾಟಕ ರಾಜ್ಯ ಸರ್ಕಾರವು ತನ್ನ ಅಧೀನ ಸಂಸ್ಥೆಗಳಲ್ಲಿ ಶೈಕ್ಷಣಿಕ ಮತ್ತು ಉದ್ಯೋಗಕ್ಕೆ ಸಂಬಂಧಿಸಿದಂತೆ ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಕೆನೆಪದರ ಮೀಸಲಾತಿಗೆ ಸಂಬಂಧಿಸಿದಂತೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನೀಡುವಾಗ ಸರ್ಕಾರಿ ನೌಕರರ ವೇತನ ಆದಾಯವನ್ನು ಪರಿಗಣಿಸಿ, ಕುಟುಂಬದ ಒಟ್ಟು ವಾರ್ಷಿಕ ಆದಾಯಕ್ಕೆ ಸೇರಿಸಿ ಸಂಪತ್ತಿನ ಲೆಕ್ಕಚಾರ ಮಾಡಿ 8 ಲಕ್ಷಕ್ಕೂ ಹೆಚ್ಚಿನ ಆದಾಯವಿರುವವರಿಗೆ ಮೀಸಲಾತಿ ನಮೂನೆ-ಎಫ್ ಪ್ರಮಾಣ ಪತ್ರವನ್ನು ನೀಡುತ್ತಿಲ್ಲ.

    * ಕೇಂದ್ರ ಸರ್ಕಾರದ ಅಧೀನ ಇಲಾಖೆಗಳ ಶಿಕ್ಷಣ ಮತ್ತು ಉದ್ಯೋಗಕ್ಕೆ ಸಂಬಂಧಿಸಿದಂತೆ ರಾಜ್ಯದ ಕೆಲವು ತಾಲ್ಲೂಕು ಕಛೇರಿಯಿಂದ ನಮೂನೆ-ಎಫ್ ಪ್ರಮಾಣ ಪತ್ರವನ್ನು ವಿತರಿಸಲಾಗುತ್ತಿದೆ.

    * ಕರ್ನಾಟಕ ರಾಜ್ಯ ಸರ್ಕಾರದ ಅಧೀನ ಇಲಾಖೆಗಳಿಗೆ ಉದ್ಯೋಗ ಮತ್ತು ಶಿಕ್ಷಣಕ್ಕೆ ನೌಕರರು ಒಟ್ಟು ವಾರ್ಷಿಕ ಆದಾಯದ ಲೆಕ್ಕಾಚಾರದಲ್ಲಿ ಮಾತ್ರ ವೇತನದ ಆದಾಯವನ್ನು ಪರಿಗಣಿಸುತ್ತಿರುವುದರಿಂದ ಸಾಮಾಜಿಕವಾಗಿ ಹಿಂದುಳಿದ ವರ್ಗಗಳ ಅಧಿಕಾರಿ/ ನೌಕರರ ಮಕ್ಕಳಿಗೆ ಅನ್ಯಾಯವಾಗುತ್ತಿದೆ. ಅದರಲ್ಲೂ ವಿಶೇಷವಾಗಿ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ನೌಕರರು, ಕುಟುಂಬ ವರ್ಗದವರು ಮತ್ತು ಮಕ್ಕಳು ಶೈಕ್ಷಣಿಕ ಹಾಗೂ ಉದ್ಯೋಗ ಮತ್ತಿತರ ಮೀಸಲಾತಿ ಅವಕಾಶಗಳಿಂದ ವಂಚಿತರಾಗುತ್ತಿರುವುದಾಗಿ ರಾಜ್ಯ ಸರ್ಕಾರಿ ನೌಕರರು ಮತ್ತು ವಿವಿಧ ವೃಂದ ಸಂಘಗಳಿಂದ ರಾಜ್ಯ ಸಂಘಕ್ಕೆ ಮನವಿಗಳು ಸಲ್ಲಿಕೆಯಾಗಿರುತ್ತವೆ.

    ಮೇಲಿನ ಅಂಶಗಳ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಹಾಗೂ ಇತರೆ ರಾಜ್ಯಗಳಲ್ಲಿ ಇರುವಂತೆ ಕರ್ನಾಟಕ ರಾಜ್ಯದಲ್ಲಿಯೂ ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ Creamy Layer/ Non Creamy Layer ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನಮೂನೆ-ಎಫ್‌ನಲ್ಲಿ ವಿತರಿಸುವಾಗ ಅಧಿಕಾರಿ/ ನೌಕರರ ವೇತನ ಆದಾಯವನ್ನು ಪರಿಗಣಿಸದೇ ವ್ಯಾಪಾರ, ಕೈಗಾರಿಕೆ ಇತರೆ ಮೂಲಗಳಿಂದ ಬರುವ ಆದಾಯದ ಸಂಪತ್ತು ನಿರೀಕ್ಷೆ ಮಾಡಿಸಿ ಒಟ್ಟು ವಾರ್ಷಿಕ ಆದಾಯದ ಲೆಕ್ಕಾಚಾರವನ್ನು ಮಾಡಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ವಿತರಿಸುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚನೆ ನೀಡಿ ಆದೇಶ ಹೊರಡಿಸಲು ತಮ್ಮಲ್ಲಿ ಕೋರಿದೆ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search