Tuesday, November 3, 2026
spot_img
More
    spot_img
    HomeStateDistrictಬೆಳಗಾವಿ ಅಧಿವೇಶನ 1 ವಾರ ವಿಸ್ತರಿಸಲು ಆರ್.ಅಶೋಕ ಪತ್ರ

    ಬೆಳಗಾವಿ ಅಧಿವೇಶನ 1 ವಾರ ವಿಸ್ತರಿಸಲು ಆರ್.ಅಶೋಕ ಪತ್ರ

    ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯುತ್ತಿದೆ.  ಡಿಸೆಂಬರ್ 8ರ ಸೋಮವಾರ ಅಧಿವೇಶನ ಪ್ರಾರಂಭವಾಗಿದೆ. ಡಿಸೆಂಬರ್ 19ರ ತನಕ ಚಳಿಗಾಲದ ಅಧಿವೇಶನ ನಡೆಸಲು ಉದ್ದೇಶಿಸಲಾಗಿದೆ. ಆದರೆ ಈಗ ಅಧಿವೇಶನವನ್ನು ಒಂದು ವಾರ ವಿಸ್ತರಣೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಒತ್ತಾಯಿಸಿದ್ದಾರೆ.

    ಈ ಕುರಿತು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್‌ಗೆ ಅಶೋಕ ಪತ್ರವನ್ನು ಬರೆದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅವರು, ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನವನ್ನು ಒಂದು ವಾರಗಳ ಕಾಲ ವಿಸ್ತರಿಸಬೇಕೆಂದು ಕೋರಿ ಸನ್ಮಾನ್ಯ ಸಭಾಧ್ಯಕ್ಷರಾದ ಶ್ರೀ ಯು.ಟಿ.ಖಾದರ್‌ ಅವರಿಗೆ ಪತ್ರ ಮುಖೇನ ಮನವಿ ಮಾಡಿದ್ದೇನೆ’ ಎಂದು ಹೇಳಿದ್ದಾರೆ.

    ‘ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಮಾನ್ಯ ಸದಸ್ಯರು ಪ್ರಸ್ತಾಪ ಮಾಡಿರುವ ಹಲವು ಗಂಭೀರ ವಿಷಯಗಳಿಗೆ ಮುಖ್ಯಮಂತ್ರಿಗಳು ಮತ್ತು ಸಚಿವರು ಇನ್ನೂ ಉತ್ತರ ನೀಡಬೇಕಿದೆ. ಇದರ ಜೊತೆಗೆ ರಾಜ್ಯದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆ, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅನುದಾನ ಬಳಕೆಯ ಕಳಪೆ ಸಾಧನೆ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಚರ್ಚಿಸಲು ಮಾನ್ಯ ಸದಸ್ಯರುಗಳಿಗೆ ಇನ್ನೂ ಸಾಕಷ್ಟು ಸಮಯಾವಕಾಶದ ಅಗತ್ಯವಿದೆ. ಈ ನಿಟ್ಟಿನಲ್ಲಿ ನನ್ನ ಮನವಿಯನ್ನು ಪರಿಗಣಿಸಿ, ಸನ್ಮಾನ್ಯ ಸಭಾಧ್ಯಕ್ಷರು ವಿಧಾನಮಂಡಲದ ಅಧಿವೇಶನವನ್ನು ಒಂದು ವಾರಗಳ ವಿಸ್ತರಣೆ ಮಾಡುತ್ತಾರೆ ಎನ್ನುವ ವಿಶ್ವಾಸವಿದೆ’ ಎಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

    ಪತ್ರದ ವಿವರ: ವಿರೋಧ ಪಕ್ಷದ ನಾಯಕ ಆರ್.ಅಶೋಕ ಬರೆದಿರುವ ಪತ್ರವು ಚಳಿಗಾಲದ ಅಧಿವೇಶನ ವಿಸ್ತರಿಸುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.

    ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ದಿನಾಂಕ 08.12.2025 ರಿಂದ 19.12.2025ರವರೆಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಲು ನಿರ್ಧರಿಸಲಾಗಿತ್ತು. ಕಾರಣಾಂತರಗಳಿಂದ 10 ದಿನಗಳ ಅಧಿವೇನದಲ್ಲಿ 2 ದಿನದ ಅಧಿವೇಶನದ ಸಮಯವು ಮೊಟುಕುಗೊಂಡಿರುತ್ತದೆ.

    ಈ ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕಾಗಿರುವ ಬಳಷ್ಟು ವಿಷಯಗಳು ಬಾಕಿಯಿದ್ದು, ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಾಗಿರುವ ಹಿನ್ನೆಲೆಯಲ್ಲಿ ತಾವು ಪ್ರಸ್ತುತ ಅಧಿವೇಶನವನ್ನು ಇನ್ನೂ ಒಂದು ವಾರಗಳ ಕಾಲ ವಿಸ್ತರಿಸಬೇಕೆಂದು ಆಗ್ರಹಿಸುತ್ತೇನೆ ಎಂದು ಮನವಿ ಮಾಡಿದ್ದಾರೆ.

    ಡಿಸೆಂಬರ್ 13ರ ಶನಿವಾರ, ಡಿಸೆಂಬರ್ 14ರ ಭಾನುವಾರ ಅಧಿವೇಶನಕ್ಕೆ ಬಿಡುವು ಇತ್ತು. ಡಿಸೆಂಬರ್ 15ರ ಸೋಮವಾರ ಕಲಾಪ ಮತ್ತೆ ಆರಂಭವಾಗಿತ್ತು. ಆದರೆ ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ನಿಧನದ ಹಿನ್ನಲೆಯಲ್ಲಿ ಸಂತಾಪವನ್ನು ಸೂಚಿಸಿದ ಬಳಿಕ ಕಲಾಪವನ್ನು ಮಂಗಳವಾರ ಬೆಳಗ್ಗೆ 9.30ಕ್ಕೆ ಮುಂದೂಡಿಕೆ ಮಾಡಲಾಗಿದೆ.

    ಸಂತಾಪ ಸೂಚನೆ ನಿರ್ಣಯದ ಮೇಲೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ದಾವಣಗೆರೆ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿದ್ದಾರೆ ಅದಕ್ಕೆ ಶಾಮನೂರು ಶಿವಶಂಕರಪ್ಪ ಅವರು ಕಾರಣ. ಶಾಮನೂರು ಶಿವಶಂಕರಪ್ಪ ಅವರು ತಮ್ಮ 63ನೇ ವಯಸ್ಸಿನಲ್ಲಿ ವಿಧಾನಸಭೆ ಪ್ರವೇಶಿಸಿ ಆರು ಬಾರಿ ಶಾಸಕರಾದವರು. ಒಮ್ಮೆ ಸಂಸತ್ ಸದಸ್ಯರಾಗಿದ್ದರು. ದೀರ್ಘ ಕಾಲದ ರಾಜಕೀಯದಲ್ಲಿದ್ದರು ಎಂದು ಹೇಳಿದರು.

    ಹಿಂದೆ ನಾನು ಮುಖ್ಯಮಂತ್ರಿ ಆಗಿದ್ದಾಗ ಮಂತ್ರಿ ಮಂಡಲದಲ್ಲಿ ಶಾಮನೂರು ಶಿವಶಂಕರಪ್ಪ ಅವರು ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 2016ರಲ್ಲಿ ಸಂಪುಟ ಪುನರ್ ರಚನೆಯಾದಾಗ ಅವರ ಪುತ್ರ ಎಸ್ ಎಸ್ ಮಲ್ಲಿಕಾರ್ಜುನ್ ಅವರನ್ನು ಸಚಿವರನ್ನಾಗಿ ಮಾಡಲು ಕೋರಿಕೊಂಡಿದ್ದರು. ಮಲ್ಲಿಕಾರ್ಜುನ್ ಅವರು ನಮ್ಮ ಈಗಿನ ಸಚಿವ ಸಂಪುಟದಲ್ಲಿ ಮಂತ್ರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು.

    ವಿಧಾನಸಭೆ ಅಧಿವೇಶನ ವಿಸ್ತರಣೆ ಮಾಡುವ ಕುರಿತು ಸರ್ಕಾರ ತೀರ್ಮಾನ ಕೈಗೊಳ್ಳಬೇಕಿದೆ. ವಿರೋಧ ಪಕ್ಷದ ನಾಯಕರು, ಮುಖ್ಯಮಂತ್ರಿಗಳು, ಕಾನೂನು ಸಚಿವರು, ಸ್ಪೀಕರ್ ಸೇರಿ ನಡೆಸು ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search