Wednesday, November 4, 2026
spot_img
More
    spot_img
    HomeLatest newsಯುಪಿ ಬಿಜೆಪಿ ರಾಜ್ಯಾಧ್ಯಕ್ಷರು ಬದಲು: ಕರ್ನಾಟಕದಲ್ಲೂ ಅಧ್ಯಕ್ಷರ ಬದಲಾವಣೆ?

    ಯುಪಿ ಬಿಜೆಪಿ ರಾಜ್ಯಾಧ್ಯಕ್ಷರು ಬದಲು: ಕರ್ನಾಟಕದಲ್ಲೂ ಅಧ್ಯಕ್ಷರ ಬದಲಾವಣೆ?

    ಆಡಳಿತ ಪಕ್ಷ  ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ. ಪ್ರತಿಪಕ್ಷ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ. ಬಿಜೆಪಿ ರಾಷ್ಟ್ರೀಯ ಘಟಕ ಉತ್ತರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷರನ್ನು ಬದಲಾಯಿಸಿದೆ. ರಾಷ್ಟ್ರೀಯ ಕಾರ್ಯಾಧ್ಯಕ್ಷ ಹುದ್ದೆಯನ್ನು ಸೃಷ್ಟಿಸಿದೆ. ಆದ್ದರಿಂದ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಮತ್ತೆ ಚರ್ಚೆಗಳು ಆರಂಭವಾಗಿದೆ.

    ಬಿಜೆಪಿ ರಾಜ್ಯಾಧ್ಯಕ್ಷರು ಬಿ.ವೈ.ವಿಜಯೇಂದ್ರ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ, ಶಿಕಾರಿಪುರದ ಶಾಸಕರು. ಇವರನ್ನು ಬದಲಾವಣೆ ಮಾಡಿ ಹೊಸ ಅಧ್ಯಕ್ಷರನ್ನು ನೇಮಕ ಮಾಡಬೇಕು ಎಂದು ರಾಜ್ಯ ಬಿಜೆಪಿ ರೆಬಲ್ ನಾಯಕರ ಗುಂಪು ದೆಹಲಿ ಯಾತ್ರೆ ಮಾಡಿದೆ.

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಬದಲಾವಣೆ ಮಾಡುವ ಮೊದಲು ಒಂದೊಂದು ರಾಜ್ಯದ ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡುತ್ತಿದೆ. ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಎರಡೂವರೆ ವರ್ಷವಿದೆ. ಆದ್ದರಿಂದ ಈಗ ರಾಜ್ಯಾಧ್ಯಕ್ಷರ ಬದಲಾವಣೆ ಮಾಡಲಾಗುತ್ತದೆಯೇ? ಎಂಬುದು ಪ್ರಶ್ನೆ.

    ರೆಬಲ್ ನಾಯಕರ ಆಗ್ರಹ: ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ ಸೇರಿದಂತೆ ಬಿಜೆಪಿಯ ಹಲವು ನಾಯಕರು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಗಾಗಿ ಪಟ್ಟು ಹಿಡಿದಿದ್ದಾರೆ. ಕಳೆದ ವಾರ ದೆಹಲಿಗೆ ಭೇಟಿ ನೀಡಿ ವಿವಿಧ ನಾಯಕರನ್ನು ಭೇಟಿಯಾಗಿ ಈ ಕುರಿತು ಪುನಃ ಮನವಿ ಸಲ್ಲಿಕೆ ಮಾಡಿದ್ದಾರೆ.

    ಆದರೆ ವರಿಷ್ಠರು ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಬಿ.ವೈ.ವಿಜಯೇಂದ್ರ ಮುಂದುವರೆಯಲಿದ್ದಾರೆಯೇ? ಅಥವ ಹೊಸ ನಾಯಕರಿಗೆ ಕರ್ನಾಟಕ ಬಿಜೆಪಿಯ ಸಾರಥ್ಯ ನೀಡಲಾಗುತ್ತದೆಯೇ? ಎಂಬುದು ಸದ್ಯ ಚರ್ಚೆಯ ವಿಚಾರ.

    ಬಿ.ವೈ.ವಿಜಯೇಂದ್ರ ಮತ್ತು ಅವರ ಬೆಂಬಲಿಗರು ಹೈಕಮಾಂಡ್ ರಾಜ್ಯಾಧ್ಯಕ್ಷರ ಬದಲಾವಣೆ ಮಾಡುವುದಿಲ್ಲ ಎಂಬ ಭರವಸೆಯಲ್ಲಿದ್ದಾರೆ. ಅಲ್ಲದೇ ಹಿರಿಯ ನಾಯಕರು ಸೇರಿದಂತೆ ಎಲ್ಲರೂ ತಮ್ಮನ್ನು ಬೆಂಬಲಿಸಲಿದ್ದಾರೆ, ರಾಜ್ಯ ಬಿಜೆಪಿ ಅಸಮಾಧಾನ ಪರಿಹಾರವಾಗಲಿದೆ ಎಂದು ನಿರೀಕ್ಷಿಸಿದ್ದಾರೆ.

    ಸದ್ಯ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಎದುರಾಗುತ್ತಿದೆ. ಈ ಚುನಾವಣೆ ವೇಳೆ ನಾಯಕತ್ವ ಬದಲಾವಣೆ ಮಾಡುವುದಿಲ್ಲ. ಚುನಾವಣೆ ಫಲಿತಾಂಶಗಳ ಬಳಿಕ ಹೈಕಮಾಂಡ್ ನಾಯಕರು ಈ ಕುರಿತು ತೀರ್ಮಾನ ಮಾಡಬಹುದು ಎಂಬುದು ಸದ್ಯದ ಲೆಕ್ಕಾಚಾರವಾಗಿದೆ.

    ವಿ.ಸೋಮಣ್ಣ, ಸಿ.ಟಿ.ರವಿ, ಸುನೀಲ್ ಕುಮಾರ್ ಸೇರಿದಂತೆ ಹಲವು ನಾಯಕರ ಹೆಸರು ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆಗೆ ಕೇಳಿ ಬರುತ್ತಿದೆ. ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ಬಿ.ವೈ.ವಿಜಯೇಂದ್ರ ಬದಲಾವಣೆ ಮಾಡಿದರೆ ಯಾರಿಗೆ ಸಾರಥ್ಯ ಸಿಗಲಿದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

    ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಲಿಂಗಾಯತ ಸಮುದಾಯಕ್ಕೆ, ವಿರೋಧ ಪಕ್ಷದ ನಾಯಕ (ಆರ್.ಅಶೋಕ) ಹುದ್ದೆ ಒಕ್ಕಲಿಗ ಸಮುದಾಯಕ್ಕೆ ಎಂಬ ಲೆಕ್ಕಾಚಾರದಲ್ಲಿ ಬಿಜೆಪಿ ಈ ಹಿಂದೆ ರಾಜ್ಯದಲ್ಲಿ ಸಂಘಟನೆಗೆ ಸಾರಥ್ಯವನ್ನು ನೀಡಿತ್ತು. ಆದರೆ ಈಗ ಬದಲಾವಣೆ  ಮಾಡಬೇಕಾಗಿ ಬಂದರೆ ರಾಜ್ಯಾಧ್ಯಕ್ಷ ಹುದ್ದೆ ಯಾರಿಗೆ? ಎಂಬುದು ಬಹಳ ಗಂಭೀರ ವಿಚಾರವಾಗಲಿದೆ.

    ಬಿ.ಎಸ್.ಯಡಿಯೂರಪ್ಪ ಪುತ್ರ ಎಂಬ ಕಾರಣಕ್ಕೆ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಗಿದೆ. ಯಡಿಯೂರಪ್ಪ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರು, ವಿಜಯೇಂದ್ರ ರಾಜ್ಯಾಧ್ಯಕ್ಷರು, ಬಿ.ವೈ.ರಾಘವೇಂದ್ರ ಸಂಸದರು. ಆದ್ದರಿಂದ ಬೇರೆ ನಾಯಕರಿಗೆ ಅವಕಾಶ ಕೊಡಬೇಕು ಎಂಬುದು ರಾಜ್ಯ ಬಿಜೆಪಿ ರೆಬಲ್ ನಾಯಕರ ವಾದವಾಗಿದೆ.

    ಬಿ.ವೈ.ವಿಜಯೇಂದ್ರ ಬದಲಾವಣೆ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ನಾಯಕರು ಬೆಳಗಾವಿಯಲ್ಲಿ ಭೇಟಿಯಾಗಿದ್ದಾರೆ. ಹೌದು ಗೋಕಾಕ್ ಕ್ಷೇತ್ರದ ಶಾಸಕ  ರಮೇಶ್ ಜಾರಕಿಹೋಳಿ ನಿವಾಸಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ಭೇಟಿ ನೀಡಿದ್ದರು.

    ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಯ ನಡುವೆಯೇ ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ, ಬಸನಗೌಡ ಪಾಟೀಲ್ ಯತ್ನಾಳ್ ಭೇಟಿ ಕುತೂಹಲಕ್ಕೆ ಕಾರಣವಾಗಿದೆ. ಈ ನಾಯಕರ ತಂಡ ಕಳೆದ ವಾರ ದೆಹಲಿಯಲ್ಲಿ ಕೇಂದ್ರ ಸಚಿವರಾದ ವಿ.ಸೋಮಣ್ಣ, ಎಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಿತ್ತು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search