ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಇಲ್ಲಿ ಖಾಲಿ ಇರುವ ಪ್ರೊಬೇಷನರಿ ಇಂಜಿನಿಯರ್ ಹುದ್ದೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಕೇಂದ್ರ ಸರ್ಕಾರದಲ್ಲಿ ಉದ್ಯೋಗ ಬಯಸುವ ಅಭ್ಯರ್ಥಿಗಳು ನಾವು ನೀಡಿರುವ ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಹಾಗೂ ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನ ಓದಿಕೊಂಡು ನಂತರವೇ ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸಿ.ಈ ನೇಮಕಾತಿ ಅಭಿಯಾನದಡಿಯಲ್ಲಿ ಒಟ್ಟು 350 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಇದಕ್ಕಾಗಿ ಅರ್ಜಿ ಪ್ರಕ್ರಿಯೆಯು ಜನವರಿ 10 ರಿಂದ ಪ್ರಾರಂಭವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 31.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು BEL India bel-india.in ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.ಎಲೆಕ್ಟ್ರಾನಿಕ್ಸ್ ಮತ್ತು ಮೆಕ್ಯಾನಿಕಲ್ ವಿಭಾಗಗಳಲ್ಲಿ ಈ ಹುದ್ದೆಗಳಿಗೆ ಅವಕಾಶಗಳನ್ನು ಹುಡುಕುತ್ತಿರುವ ಎಂಜಿನಿಯರಿಂಗ್ ಪದವೀಧರರು ಅರ್ಜಿ ಸಲ್ಲಿಸಬಹುದು.
ಹುದ್ದೆಯ ಹೆಸರು: ಪ್ರೊಬೇಷನರಿ ಇಂಜಿನಿಯರ್
ಒಟ್ಟು ಹುದ್ದೆಗಳು: 350
ಪ್ರೊಬೇಷನರಿ ಇಂಜಿನಿಯರ್ (ಎಲೆಕ್ಟ್ರಾನಿಕ್ಸ್) E-II ಗ್ರೇಡ್ – 200 ಪೋಸ್ಟ್
ಪ್ರೊಬೇಷನರಿ ಇಂಜಿನಿಯರ್ (ಮೆಕ್ಯಾನಿಕಲ್) E-II ಗ್ರೇಡ್ – 150 ಪೋಸ್ಟ್
ಅರ್ಹತಾ ಮಾನದಂಡ;
ಪ್ರೊಬೇಷನರಿ ಆಫೀಸರ್ ಹುದ್ದೆಗೆ, UR/OBC(NCL)/EWS ಅಭ್ಯರ್ಥಿಗಳು AICTE ಅನುಮೋದಿತ ಕಾಲೇಜುಗಳಿಂದ ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್/ಎಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಷನ್/ಕಮ್ಯುನಿಕೇಷನ್/ಟೆಲಿಕಮ್ಯುನಿಕೇಷನ್/ಮೆಕ್ಯಾನಿಕಲ್ ವಿಭಾಗಗಳಲ್ಲಿ BE/B.Tech/BSc ಎಂಜಿನಿಯರಿಂಗ್ ಪದವಿಯಲ್ಲಿ ಪ್ರಥಮ ದರ್ಜೆಯಲ್ಲಿ ಹೊಂದಿರಬೇಕು. ಯೊಂದಿಗೆ ಉತ್ತೀರ್ಣರಾಗುವುದು ಕಡ್ಡಾಯವಾಗಿದೆ. ಪ್ರೊಬೇಷನರಿ ಎಂಜಿನಿಯರ್ ಹುದ್ದೆಗೆ ಮೀಸಲಾತಿ ಇಲ್ಲದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು 01.01.2025 ರಂತೆ 25 ವರ್ಷಗಳಿಗೆ ನಿಗದಿಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆ;
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಶುಲ್ಕ ವಿವರ:
ಸಾಮಾನ್ಯ, EWS ಮತ್ತು OBC ಅಭ್ಯರ್ಥಿಗಳಿಗೆ: ₹1180/-
SC/ST/PwBD/ESM ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ
ಪಾವತಿ ವಿಧಾನ: ಆನ್‌ಲೈನ್ ಮೂಲಕ
ಅರ್ಜಿಸಲ್ಲಿಸುವ ಕ್ರಮಗಳು:
ಮೊದಲಿಗೆ ಅಧಿಕೃತ ವೆಬ್‌ಸೈಟ್ https://bel-india.in/ ಗೆ ಭೇಟಿ ನೀಡಿ.
ನೀವು ಅರ್ಜಿ ಸಲ್ಲಿಸಲಿರುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಉದ್ಯೋಗ ಅಧಿಸೂಚನೆ ಪರಿಶೀಲಿಸಿ.
ಅಧಿಸೂಚನೆ ಲಿಂಕ್‌ನಿಂದ ಪ್ರೊಬೇಷನರಿ ಇಂಜಿನಿಯರ್ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
ನಿಮ್ಮ ಹೆಸರು, ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಬಳಸಿಕೊಂಡು ನೋಂದಾಯಿಸಿ.
ಅರ್ಜಿ ನಮೂನೆಯಲ್ಲಿ ನಿಮ್ಮ ವಿದ್ಯಾರ್ಹತೆಯ ವಿವರಗಳನ್ನು ನಮೂದಿಸಿ.
ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.
ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
31-01-2025 ರೊಳಗೆ ಅರ್ಜಿ ಸಲ್ಲಿಸಿ ಅರ್ಜಿ ನಮೂನೆಯ ಸಂಖ್ಯೆಯನ್ನು ಸುರಕ್ಷಿತವಾಗಿಡಬೇಕು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


