Saturday, August 8, 2026
spot_img
More
    spot_img
    HomeTop Storyವೃತ್ತಿಪರ ಕೋರ್ಸ್‌ಗಳ ಸಿಇಟಿ ಪರೀಕ್ಷೆ ದಿನಾಂಕ ಪ್ರಕಟ: ಈ ಬಾರಿಯ ವಿಶೇಷತೆಗಳ ಬಗ್ಗೆ ತಿಳಿಯಿರಿ; ಇಲ್ಲಿದೆ...

    ವೃತ್ತಿಪರ ಕೋರ್ಸ್‌ಗಳ ಸಿಇಟಿ ಪರೀಕ್ಷೆ ದಿನಾಂಕ ಪ್ರಕಟ: ಈ ಬಾರಿಯ ವಿಶೇಷತೆಗಳ ಬಗ್ಗೆ ತಿಳಿಯಿರಿ; ಇಲ್ಲಿದೆ ಸಂಪೂರ್ಣ ಪಟ್ಟಿ

    ಬೆಂಗಳೂರು: 2025ನೇ ಸಾಲಿನ ಎಂಜಿನಿಯರಿಂಗ್‌, ಪಶುವೈದ್ಯಕೀಯ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಏಪ್ರಿಲ್‌ 16 ಮತ್ತು 17ರಂದು ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ನಡೆಸಲಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಜನವರಿ 23ರಿಂದ ಫೆಬ್ರುವರಿ 21ರವರೆಗೆ ಅವಕಾಶ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಇಂದು ( ಜನವರಿ 16 ) ಪ್ರಕಟಿಸಿದರು.

    Advertisement

    ಇದೇ ಸಂದರ್ಭದಲ್ಲಿ ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆ (ಡಿಸಿಇಟಿ), ಪಿಜಿಸಿಇಟಿ ಮತ್ತು ಎಂ.ಫಾರ್ಮಾ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗಳ ದಿನಾಂಕಗಳನ್ನೂ ಸಚಿವರು ಘೋಷಣೆ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ವರ್ಷದಲ್ಲಿ ನಡೆಯುವ ಎಲ್ಲ ವೃತಿಪರ ಕೋರ್ಸ್‌ಗಳ ಪ್ರವೇಶ ಪರೀಕ್ಷೆಗಳ ಬಗ್ಗೆ ಒಮ್ಮೆಗೇ ಸಚಿವರು ಮಾಹಿತಿ ನೀಡಿದ್ದು, ಆ ಪ್ರಕಾರ ಎಲ್ಲ ಸಂಬಂಧಪಟ್ಟ ಇಲಾಖೆಗಳೂ ಕೆಲಸ ಮಾಡಬೇಕಾಗುತ್ತದೆ ಎಂದು ಅವರು ಹೇಳಿಕೆಯಲ್ಲಿ ಸೂಚಿಸಿದ್ದಾರೆ.

    ಏಪ್ರಿಲ್‌ 16ರಂದು ಬೆಳಿಗ್ಗೆ 10.30ರಿಂದ ಭೌತವಿಜ್ಞಾನ ಮತ್ತು ಮಧ್ಯಾಹ್ನ 2.30ರಿಂದ ರಸಾಯನ ವಿಜ್ಞಾನ ಹಾಗೂ ಏಪ್ರಿಲ್‌ 17ರಂದು ಬೆಳಿಗ್ಗೆ ಗಣಿತ ಮತ್ತು ಮಧ್ಯಾಹ್ನ ಜೀವವಿಜ್ಞಾನ ವಿಷಯಗಳ ಪರೀಕ್ಷೆಗಳು ನಡೆಯಲಿವೆ. ಏ.18ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ ಎಂದು ಅವರು ವಿವರಿಸಿದ್ದಾರೆ.

    ಯೋಗ ಮತ್ತು ನ್ಯಾಚುರೋಪತಿ, ಬಿ-ಫಾರ್ಮ ಮತ್ತು ಫಾರ್ಮಾ-ಡಿ, ಕೃಷಿ ವಿಜ್ಞಾನ ಕೋರ್ಸ್‌ ಮತ್ತು ಬಿಎಸ್‌ಸಿ (ನರ್ಸಿಂಗ್) ಕೋರ್ಸ್‌ಗಳ ಪ್ರವೇಶಕ್ಕೂ ಇದೇ ಪರೀಕ್ಷೆಯ ಅಂಕಗಳನ್ನು ಪರಿಗಣಿಸಲಾಗುತ್ತದೆ ಎಂದರು ಅವರು ವಿವರಿಸಿದ್ದಾರೆ.

    ಸಿಇಟಿ-2025 ರ ಅರ್ಜಿಯು ಎಲ್ಲಾ ಕೋರ್ಸುಗಳಿಗೆ ಸಾಮಾನ್ಯ ಅರ್ಜಿಯಾಗಿರುವುದರಿಂದ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಪ್ರವೇಶಾತಿಗೂ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನೊಂದಾಯಿಸಿಕೊಂಡು, ಅರ್ಜಿ ಶುಲ್ಕ ಪಾವತಿಸುವುದು ಕಡ್ಡಾಯವಾಗಿರುತ್ತದೆ. ಅದೇ ರೀತಿ ಆರ್ಕಿಟೆಕ್ಚರ್, ಬಿಪಿಟಿ, ಬಿಪಿಒ, ಬಿಎಸ್‌ಸಿ ಅಲೈಡ್ ಹೆಲ್ತ್ ಸೈನ್ಸ್ ಕೋರ್ಸುಗಳ ಪ್ರವೇಶಾತಿಗೆ ಇದೇ ಅರ್ಜಿ ಅನ್ವಯವಾಗುತ್ತಿದ್ದು, ಅವರು ಕೂಡ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

    ಭದ್ರತೆಯ ದೃಷ್ಟಿಯಿಂದ ಸಿಇಟಿ ಅರ್ಜಿಯನ್ನು ಭರ್ತಿ ಮಾಡುವ ಮತ್ತು ದಾಖಲೆಗಳ ಪರಿಶೀಲನೆ ವಿಷಯದಲ್ಲಿ ಈ ಬಾರಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರಿಂದ ಯಾರದ್ದೊ ಅರ್ಜಿಯನ್ನು ಇನ್ಯಾರೊ ಭರ್ತಿ ಮಾಡಲು ಸಾಧ್ಯವೇ ಇರುವುದಿಲ್ಲ. ಪ್ರತಿ ಹಂತದಲ್ಲಿ ಪ್ರಮಾಣಿಕರಿಸಿಯೇ ಮುಂದಿನ ಪ್ರಕ್ರಿಯೆ ನಡೆಸಲಾಗುತ್ತದೆ. ಇದರಿಂದ ಅಕ್ರಮಗಳಿಗೆ ಬ್ರೇಕ್‌ ಹಾಕಿದಂತಾಗಲಿದೆ ಎಂದು ಅವರು ವಿವರಿಸಿದ್ದಾರೆ.

    ಈ ಬಾರಿಯ ವಿಶೇಷ ಏನು?

    • ಲಾಗಿನ್‌ ಸಂದರ್ಭದಲ್ಲಿ ಅಭ್ಯರ್ಥಿಗಳು ನಮೂದಿಸುವ ಮೊಬೈಲ್‌ ಸಂಖ್ಯೆಗೆ ಒಟಿಪಿ (OTP) ಪ್ರಮಾಣೀಕರಿಸಿದ ನಂತರ ಅರ್ಜಿ ಭರ್ತಿ ಮಾಡಲು ಅವಕಾಶ ನೀಡಲಾಗುತ್ತದೆ. ಆದ್ದರಿಂದ ಅಭ್ಯರ್ಥಿಗಳು ಅವರದೇ ಮೊಬೈಲ್ ಸಂಖ್ಯೆಯನ್ನು ಮಾತ್ರ ನೀಡಬೇಕು. ಒಂದು ಮೊಬೈಲ್ ಸಂಖ್ಯೆಯನ್ನು ಒಬ್ಬ ಅಭ್ಯರ್ಥಿ ಮಾತ್ರ ಉಪಯೋಗಿಸಬಹುದು. ಮೊಬೈಲ್ ಸಂಖ್ಯೆ ಬದಲಾವಣೆ ಯಾವುದೇ ಹಂತದಲ್ಲಿ ಪರಿಗಣಿಸುವುದಿಲ್ಲ.
    • ಆನ್‌ಲೈನ್ ಅರ್ಜಿಯಲ್ಲಿ ಅಭ್ಯರ್ಥಿಯು ನಮೂದಿಸುವ ಜಾತಿ / ಜಾತಿ ಆದಾಯ ಪ್ರಮಾಣ ಪತ್ರ 71(ಜೆ) ಆರ್‌ಡಿ ಸಂಖ್ಯೆಯ ಆಧಾರದ ಮೇಲೆ ಅಭ್ಯರ್ಥಿಗಳ ಮೀಸಲಾತಿ ವಿವರಗಳನ್ನು ಪಡೆಯಲಾಗುವುದು.
    • ಅದೇ ರೀತಿ SATS (Students Achievement Tracking System) ಸಂಖ್ಯೆಯ ಆಧಾರದ ಮೇಲೆ ಅಭ್ಯರ್ಥಿಯ ವ್ಯಾಸಂಗದ ವಿವರಗಳನ್ನು ವೆಬ್‌ಸರ್ವೀಸ್ ಮೂಲಕ ಪಡೆಯಲಾಗುವುದು.
    • ನಂತರ ಅಭ್ಯರ್ಥಿಗಳಿಗೆ ಕ್ಲೈಮ್ಸ್‌ ಸರ್ಟಿಫಿಕೇಟ್‌ ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗುವುದು.
    • Claims Certificate ನಲ್ಲಿ Successfully Verified ಎಂದು ನಮೂದಿಸಿದ್ದರೆ ಅಂತಹ ಅಭ್ಯರ್ಥಿಗಳು ದಾಖಲೆ ಪರಿಶೀಲನೆಗೆ ಯಾವುದೇ ಕಚೇರಿಗೆ / ಕಾಲೇಜಿಗೆ ಹೋಗುವ ಅವಶ್ಯಕತೆ ಇರುವುದಿಲ್ಲ. ನಂತರದ ದಿನಗಳಲ್ಲಿ ಸಿಇಟಿ ಫಲಿತಾಂಶದ ನಂತರ ವೆರಿಫಿಕೇಶನ್ ಸ್ಲಿಪ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
    • Claimed Verified Or claimed not verified or not claimed ಎಂದು claims certificate ನಲ್ಲಿ ನಮೂದಾಗಿದ್ದರೆ ಅಭ್ಯರ್ಥಿಗಳು 2ನೆ ಪಿಯುಸಿ / 12ನೇ ತರಗತಿಯನ್ನು ವ್ಯಾಸಂಗ ಮಾಡುತ್ತಿರುವ ಆಯಾ ಕಾಲೇಜಿಗೆ ಭರ್ತಿ ಮಾಡಿದ ಅರ್ಜಿಯನ್ನು ಮತ್ತು ಕ್ಲೇಮ್ಸ್ ಮಾಡಿರುವ ಎಲ್ಲಾ ಮೂಲ ದಾಖಲೆಗಳನ್ನು ಪ್ರಾಂಶುಪಾಲರಿಗೆ ತೋರಿಸಿ ಒಂದು ಸೆಟ್ ಪ್ರತಿಗಳನ್ನು ಕ್ಲೇಮ್ಸ್ ಸರ್ಟಿಫಿಕೇಟ್ ನೊಂದಿಗೆ ಸಲ್ಲಿಸುವುದು ಕಡ್ಡಾಯವಾಗಿದೆ. ಕಾಲೇಜಿನವರು ಕ್ಲೇಮ್ಸ್ ಸರ್ಟಿಫಿಕೇಟ್ ನೊಂದಿಗೆ ಪರಿಶೀಲನೆ ಮಾಡಿದ ನಂತರ ಅಭ್ಯರ್ಥಿಯ ವಿವರಗಳನ್ನು ಅನುಮೋದಿಸುತ್ತಾರೆ.
    • ಪ್ರತಿ ಹಂತದ ಪ್ರಕ್ರಿಯೆ ಕುರಿತು ಅಭ್ಯರ್ಥಿಯ ಮೊಬೈಲ್‌ಗೆ ಸಂದೇಶ ಸ್ವೀಕೃತವಾಗುತ್ತದೆ.
    • ಪ್ರಾಧಿಕಾರವು ರಾಜ್ಯದಲ್ಲಿರುವ ಎಲ್ಲಾ ಪಿಯುಸಿ ಕಾಲೇಜುಗಳಿಗೆ ಲಾಗಿನ್ ನೀಡಿ ಅಭ್ಯರ್ಥಿಗಳಿಂದ ಭರ್ತಿ ಮಾಡಿದ ಅರ್ಜಿಗಳನ್ನು ಪರಿಶೀಲಿಸಲು ಸೂಚಿಸಲಾಗಿದೆ.
    • ಕಾಲೇಜಿನವರು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ವಿವರಗಳನ್ನು ಪಡೆದು, ಪರಿಶೀಲನೆ ಮಾಡಲು ತತ್ರಾಂಶವನ್ನು ಸಿದ್ದಪಡಿಸಿದೆ.
    • ಅಭ್ಯರ್ಥಿಗಳು ಬಿಇಒ ಕಚೇರಿಗೆ ಪರಿಶೀಲನೆಗೆ ಹೋಗುವ ಅವಶ್ಯಕತೆ ಇರುವುದಿಲ್ಲ.
    • ವಿಶೇಷ ಕ್ಯಾಟಗರಿಗಳಾದ ಎನ್‌ಸಿಸಿ, ಕ್ರೀಡೆ, ಸೈನಿಕ, ಮಾಜಿ ಸೈನಿಕ, ಸಿಎಪಿಎಫ್, ಮಾಜಿ ಸಿಎಪಿಎಫ್, ಸ್ಕೌಟ್ಸ್ ಅಂಡ್ ಗೈಡ್ಸ್, ಆಂಗ್ಲೋ ಇಂಡಿಯನ್ಸ್ ಕೋಟದ ಅಡಿಯಲ್ಲಿ ಮೀಸಲಾತಿ ಬಯಸುವ ಅಭ್ಯರ್ಥಿಗಳಿಗೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಕೆಇಎ ನಲ್ಲಿ ಖುದ್ದಾಗಿ ಸಲ್ಲಿಸಲು ಪ್ರತ್ಯೇಕವಾಗಿ ಪರೀಕ್ಷೆ ನಂತರ ದಿನಾಂಕಗಳನ್ನು ನೀಡಲಾಗುವುದು.
    • ಈ ಬಾರಿ ವಿದ್ಯಾರ್ಥಿಗಳು ಯಾವುದೇ ದಾಖಲೆಗಳನ್ನು ಆನ್‌ ಲೈನ್‌ನಲ್ಲಿ ಅಪಲೋಡ್‌ ಮಾಡುವ ಅಗತ್ಯವಿರುವುದಿಲ್ಲ.

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading