Saturday, August 8, 2026
spot_img
More
    spot_img
    HomeLatest newsಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ನನ್ನನ್ನು ಮುಂದುವರೆಸಬೇಕಾ, ಇಲ್ವಾ ಎಂದು ಖರ್ಗೆ ಅವರನ್ನು ಹೈಕಮಾಂಡ್ ಪ್ರಶ್ನಿಸುತ್ತಿದೆ: ಡಿಕೆಶಿ

    ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ನನ್ನನ್ನು ಮುಂದುವರೆಸಬೇಕಾ, ಇಲ್ವಾ ಎಂದು ಖರ್ಗೆ ಅವರನ್ನು ಹೈಕಮಾಂಡ್ ಪ್ರಶ್ನಿಸುತ್ತಿದೆ: ಡಿಕೆಶಿ

    ಬೆಂಗಳೂರು: ಸಂಪುಟದ ಕೆಲ ಸಚಿವರು ಪಕ್ಷವಿರೋಧಿ ಹೇಳಿಕೆ ನೀಡುತ್ತಿರುವುದು ನನಗಲ್ಲ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಶ್ನಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

    Advertisement

    ವಿಧಾನಸೌಧದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ನನ್ನನ್ನು ಮುಂದುವರೆಸುವುದು ಅಥವಾ ಬಿಡುವ ಬಗ್ಗೆ ಸ್ಪಷ್ಟನೆ ನೀಡಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಶ್ನೆ ಮಾಡಲಾಗುತ್ತಿದೆ ಎಂದರು.

    ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧಪಕ್ಷದ ನಾಯಕರೂ ಆಗಿದ್ದಾರೆ. ಇದಕ್ಕಾಗಿ ನಮ ಸಚಿವರು ಪ್ರಶ್ನೆ ಮಾಡುತ್ತಿದ್ದಾರೆ. ಈ ರೀತಿ ಮಾಡುವುದು ಸರಿಯಲ್ಲ ಎಂದು ತಿರುಗೇಟು ನೀಡಿದರು.

    ಯಾವುದೇ ವಿಚಾರಗಳಿದ್ದರೂ ನಾನೇ ಮಾಹಿತಿ ನೀಡುತ್ತೇನೆ. ಸದ್ಯಕ್ಕೆ ನಮ ಮುಂದೆ ಪಕ್ಷ ಕಟ್ಟುವ ಜವಾಬ್ದಾರಿ ಇದೆ. ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಸಮಾವೇಶವನ್ನು ಯಶಸ್ಸುಗೊಳಿಸುವುದಷ್ಟೇ ನಮ ಉದ್ದೇಶ. ಪಕ್ಷದ ವಿಚಾರವನ್ನು ಮಾಧ್ಯಮಗಳಲ್ಲಿ ಚರ್ಚಿಸುವುದು ಒಳ್ಳೆಯದಲ್ಲ ಎಂದರು.

    ಯಾವುದೇ ವಿಚಾರಗಳಿದ್ದರೂ ವೈಯಕ್ತಿಕವಾಗಿ ಭೇಟಿ ಮಾಡಿ ತಿಳಿಸಬೇಕು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‍ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲರೂ ಲಭ್ಯವಿದ್ದಾರೆ. ನನ್ನ ಬಳಿಯೂ ಚರ್ಚೆ ಮಾಡಬಹುದು. ಕಾಂಗ್ರೆಸ್ ಅಷ್ಟೇ ಅಲ್ಲ, ಜೆಡಿಎಸ್, ಬಿಜೆಪಿ, ರೈತ ಸಂಘ ಸೇರಿದಂತೆ ಯಾವುದೇ ಪಕ್ಷವಾಗಿದ್ದರೂ ಆಂತರಿಕ ವಿಚಾರವನ್ನು ಬಹಿರಂಗವಾಗಿ ಚರ್ಚೆ ಮಾಡುವುದು ಸೂಕ್ತವಲ್ಲ ಎಂದು ಹೇಳಿದರು.

    ಕಾಂಗ್ರೆಸ್ ಪಕ್ಷವನ್ನು ಸಾವಿರಾರು ಮಂದಿ ಕಟ್ಟಿದ್ದಾರೆ. ಇದು ನಮದು, ಕಾರ್ಯಕರ್ತರ ಪಕ್ಷ. ಈ ಹಿಂದೆ ಮಹಾತಗಾಂಧಿ ಆಸೆ ಪಟ್ಟಿದ್ದರೆ ಪ್ರಧಾನಿಯಾಗಬಹುದಿತ್ತು. ಸಂವಿಧಾನ ಬರೆದ ಅಂಬೇಡ್ಕರ್ ಯಾವುದೇ ಫಲ ತೆಗೆದುಕೊಳ್ಳಲಿಲ್ಲ, ಫಲವನ್ನು ನಮಗೆ ಬಿಟ್ಟುಹೋಗಿದ್ದಾರೆ ಎಂದರು. ಕಾಂಗ್ರೆಸ್ ಯಾರೇ ಇರಲಿ, ಇಲ್ಲದಿರಲಿ ಸಂಘಟನೆ ಉಳಿಯುತ್ತದೆ. ನಾನು ಮನೆಯಲ್ಲಿ ಕುಳಿತಿದ್ದರೂ ಕಾಂಗ್ರೆಸ್ ನಿಲ್ಲುವುದಿಲ್ಲ ಎಂದು ತಿಳಿಸಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading