Friday, September 4, 2026
spot_img
More
    spot_img
    HomeLatest newsಅನ್ನಭಾಗ್ಯ ಫಲಾನುಭವಿಗಳಿಗೆ ಬಂಪರ್; ಮಾರ್ಚ್‌ನಲ್ಲಿ ಸಿಗಲಿಗೆ 15 ಕೆಜಿ ಅಕ್ಕಿ

    ಅನ್ನಭಾಗ್ಯ ಫಲಾನುಭವಿಗಳಿಗೆ ಬಂಪರ್; ಮಾರ್ಚ್‌ನಲ್ಲಿ ಸಿಗಲಿಗೆ 15 ಕೆಜಿ ಅಕ್ಕಿ

    ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಮಾರ್ಚ್ ತಿಂಗಳಲ್ಲಿ ಫಲಾನುಭವಿಗಳಿಗೆ ಬಂಪರ್ ಕೊಡುಗೆ ಸಿಗಲಿದ್ದು, ಬಾಕಿ ಸೇರಿ 15 ಕೆ.ಜಿ. ಅಕ್ಕಿ ಪ್ರತಿ ಫಲಾನುಭವಿಗಳಿಗೆ ಸಿಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

    Advertisement

    ಫೆಬ್ರವರಿ ತಿಂಗಳಲ್ಲಿ ಬಾಕಿಯಿದ್ದ ಹೆಚ್ಚುವರಿ 5 ಕೆ.ಜಿ.ಯನ್ನು ಸೇರಿಸಿ ಈ ತಿಂಗಳು ಒಟ್ಟು 15 ಕೆ.ಜಿ. ಅಕ್ಕಿ ವಿತರಣೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತೀರ್ಮಾನಿಸಿದೆ.

    ಅನ್ನಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗೆ ಹೆಚ್ಚುವರಿ 5 ಕೆ.ಜಿ.ಅಕ್ಕಿಗೆ ಪರ್ಯಾಯವಾಗಿ ನೀಡಲಾಗುತ್ತಿದ್ದ ಹಣದ ಬದಲು ಫೆಬ್ರವರಿ ತಿಂಗಳಿನಿಂದಲೇ ಅನ್ವಯ ಆಗುವಂತೆ ಅಕ್ಕಿ ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿತ್ತು. ಆದರೆ, ಸರ್ಕಾರ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವುದು ವಿಳಂಬವಾದ ಹಿನ್ನೆಲೆ ಫೆಬ್ರವರಿಯಲ್ಲಿ ಫಲಾನುಭವಿಗಳಿಗೆ ಹೆಚ್ಚುವರಿ 5 ಕೆ.ಜಿ. ಅಕ್ಕಿ ಹಂಚಿಕೆ ಆಗಿರಲಿಲ್ಲ. ಡಿಬಿಟಿ ಮೂಲಕ ಹಣವೂ ಜಮಾ ಆಗಿರಲಿಲ್ಲ.

    ಆದ್ದರಿಂದ ಫೆಬ್ರವರಿ ತಿಂಗಳಲ್ಲಿ ಬಾಕಿ ಉಳಿದಿದ್ದಾ ಹೆಚ್ಚುವರಿ 5 ಕೆ.ಜಿ. ಅಕ್ಕಿ ಮತ್ತು ಮಾರ್ಚ್ ತಿಂಗಳ 10 ಕೆ.ಜಿ. ಅಕ್ಕಿ ಸೇರಿಸಿ ಒಟ್ಟು 15 ಕೆ.ಜಿ. ಅಕ್ಕಿಯನ್ನು ನ್ಯಾಯಬೆಲೆ ಅಂಗಡಿಗಳಲ್ಲಿ ಹಂಚಿಕೆ ಮಾಡಬೇಕೆಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಸೂಚನೆ ನೀಡಿದ್ದಾರೆ. ರಾಜ್ಯದ ಪ್ರತಿ ನ್ಯಾಯಬೆಲೆ ಅಂಗಡಿಗಳು ಈ ತಿಂಗಳ 10 ಕೆ.ಜಿ. ಅಕ್ಕಿಯೊಂದಿಗೆ ಬಾಕಿ ಇರುವ 5 ಕೆ.ಜಿ. ಹೆಚ್ಚುವರಿ ಅಕ್ಕಿ ವಿತರಣೆ ಮಾಡಲಿವೆ ಎಂದು ತಿಳಿಸಿದ್ದರು.

    ಇನ್ನು ಮಾರ್ಚ್ 31ರ ವರಗೆ ಬೆಳಗ್ಗೆ 7ರಿಂದ ರಾತ್ರಿ 8ರವರೆಗೆ ಬಾಕಿ ಉಳಿದಿರುವ ಪಡಿತರ ಚೀಟಿಯಲ್ಲಿನ ಸದಸ್ಯರು ಇ-ಕೆವೈಸಿ ಮಾಡುವ ಹಾಗೂ ಪಡಿತರ ವಿತರಣೆ ಕಾರ್ಯ ಮುಂದುವರೆಯಲಿದೆ. ಪಡಿತರ ಚೀಟಿದಾರರು ಬೆರಳಚ್ಚು ನೀಡಿದ ಕೂಡಲೇ ಪಡಿತರ ಪಡೆಯಬಹುದು. ಇ-ಕೆವೈಸಿ ಮಾಡಿಸಲು ಪಡಿತರ ಚೀಟಿದಾರರು ಯಾವುದೇ ಶುಲ್ಕ ಪಾವತಿ ಮಾಡಬೇಕಿಲ್ಲ ಎಂದು ಆಹಾರ ಇಲಾಖೆ ಸೂಚಿಸಿದೆ.

    ಫೆಬ್ರವರಿ ತಿಂಗಳ ಹೆಚ್ಚುವರಿ 5 ಕೆ.ಜಿ. ಅಕ್ಕಿಯನ್ನು ಈ ತಿಂಗಳ ಪಡಿತರದಲ್ಲಿ ವಿತರಣೆ ಮಾಡುವ ಹಿನ್ನೆಲೆ ಮಾರ್ಚ್ ತಿಂಗಳಲ್ಲಿ ಅಂತ್ಯೋದಯ ಪಡಿತರ ಚೀಟಿ ಫಲಾನುಭವಿಗಳಿಗೆ 1ರಿಂದ 3 ಸದಸ್ಯರಿದ್ದರೆ ಪ್ರತಿ ಕಾಡ್ರ್ಗೆ 35 ಕೆ.ಜಿ. ಅಕ್ಕಿ ಸಿಗಲಿದೆ. 4 ಮಂದಿ ಸದಸ್ಯರಿರುವ ಕಾರ್ಡ್‌ಗೆ 45 ಕೆ.ಜಿ., 5 ಮಂದಿ ಸದಸ್ಯರು ಇರುವ ಕಾರ್ಡ್‌ಗೆ 65 ಕೆ.ಜಿ, 10 ಸದಸ್ಯರಿದ್ದರೆ 165 ಕೆ.ಜಿ ಅಕ್ಕಿ ಹಂಚಿಕೆ ಮಾಡಲಾಗುತ್ತದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading