Tuesday, September 1, 2026
spot_img
More
    spot_img
    HomeTop Storyಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್‌ವೇ: ರಸ್ತೆ ಮಧ್ಯದಲ್ಲಿದ್ದ ಎಂಟ್ರಿ, ಎಕ್ಸಿಟ್ ಬಂದ್; ಸಚಿವರು ಹೇಳಿದ್ದಿಷ್ಟು

    ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇ: ರಸ್ತೆ ಮಧ್ಯದಲ್ಲಿದ್ದ ಎಂಟ್ರಿ, ಎಕ್ಸಿಟ್ ಬಂದ್; ಸಚಿವರು ಹೇಳಿದ್ದಿಷ್ಟು

    ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇಗೆ ಸಂಬಂಧಪಟ್ಟಂತೆ ಬಿಡದಿ, ಮಂಡ್ಯ, ಪಾಂಡವಪುರ ಮತ್ತು ಶ್ರೀರಂಗಪಟ್ಟಣ ತಾಲೂಕಿನ ವಿವಿಧೆಡೆ ನೀಡಲಾಗಿದ್ದ ಪ್ರವೇಶ ಹಾಗೂ ನಿರ್ಗಮನ ಮಾರ್ಗಗಳನ್ನು ಮುಚ್ಚಲಾಗಿಲ್ಲ ಎಂದು ಲೋಕೋಪಯೋಗಿ ಸಚಿವರಾದ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ.

    Advertisement

    ವಿಧಾನ ಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು, ಅಪಘಾತಗಳ ಹಿನ್ನೆಲೆಯಲ್ಲಿ ತೂಬಿನಕೆರೆ ಬಳಿ ಟೋಲ್‌ ಬೈಪಾಸ್‌ ಮಾಡುವ ಸ್ಥಳದಲ್ಲಿ ಟ್ರಕ್‌ಗಳನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

    ಬಿಡದಿ, ಮಂಡ್ಯ, ಪಾಂಡವಪುರ ಮತ್ತು ಶ್ರೀರಂಗಪಟ್ಟಣ ತಾಲೂಕಿನ ಕೇಂದ್ರಗಳಲ್ಲಿ ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇಗೆ ಸಂಬಂಧಿಸಿದ ಆಗಮನ-ನಿರ್ಗಮನ ಪ್ರವೇಶದ್ವಾರಗಳನ್ನು ಯಾವುದೇ ಮುನ್ಸೂಚನೆ ಇಲ್ಲದೆ ಮುಚ್ಚಿರುವುದು ಸಾರ್ವಜನಿಕರಿಗೆ ತೊಂದರೆಯನ್ನುಂಟು ಮಾಡುತ್ತಿದೆ. ಇದು ಸರ್ಕಾರದ ಗಮನಕ್ಕೆ ಬಂದಿದೆಯೇ ಎಂದು ದಿನೇಶ್‌ ಗೂಳಿಗೌಡ ಪ್ರಶ್ನೆ ಮಾಡಿದ್ದರು. ಇದಕ್ಕೆ ಉತ್ತರಿಸಿದ ಸಚಿವರು, ಎನ್‌ಎಚ್‌ -275 ರ ಬೆಂಗಳೂರು – ಮೈಸೂರು ವಿಭಾಗದ ತೂಬಿನಕೆರೆ ಬಳಿ ಬೆಂಗಳೂರಿನಿಂದ ಮೈಸೂರು ಕಡೆಗೆ ಸಂಚರಿಸುತ್ತಿರುವ ಭಾರಿ ವಾಹನಗಳು ಟೋಲ್ ಪ್ಲಾಜಾವನ್ನು ಬೈಪಾಸ್ ಮಾಡುವ ಸರ್ವಿಸ್ ರಸ್ತೆಯಲ್ಲಿ ನಿರ್ಗಮಿಸುತ್ತಿದ್ದವು. ಇಲ್ಲಿ ಪಕ್ಕದ ಹಳ್ಳಿಗರು, ಸ್ಥಳೀಯ ಸಂಚಾರ ಮತ್ತು ದ್ವಿಚಕ್ರ ವಾಹನಗಳು ಸಂಚರಿಸುತ್ತಿದ್ದರಿಂದ ವಾಹನಗಳ ದಟ್ಟಣೆಯಿಂದ ಸರ್ವೀಸ್ ರಸ್ತೆಯಲ್ಲಿ ಅಪಘಾತಗಳಾಗುತ್ತಿದ್ದವು. ಹೀಗಾಗಿ ಇಲ್ಲಿನ ಸೇವಾ ರಸ್ತೆಯಲ್ಲಿ ಸಂಚರಿಸುವ ಭಾರಿ ವಾಹನಗಳನ್ನು ನಿಲ್ಲಿಸುವಂತೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರಿಂದ ರಸ್ತೆ ಸುರಕ್ಷತಾ ಸಮಸ್ಯೆಗಳ ಹಿತದೃಷ್ಟಿಯನ್ನು ಪರಿಗಣಿಸಿ ಬೆಂಗಳೂರಿನಿಂದ ಮೈಸೂರು ಕಡೆಗೆ ಪ್ರಯಾಣಿಸುವ ಭಾರಿ ವಾಹನಗಳ (ಟ್ರಕ್‌ ಇತ್ಯಾದಿ) ನಿರ್ಗಮನಕ್ಕೆ ತೂಬಿನಕೆರೆ ಟೋಲ್ ಬೈಪಾಸ್ ಮಾಡುವ ಸ್ಥಳದಲ್ಲಿ ನಿರ್ಬಂಧಿಸಲಾಗಿದೆ. ಆದರೆ, ಇತರೆ ಎಲ್ಲ ವಾಹನಗಳು (ಕಾರುಗಳು, ಜೀಪುಗಳು ಇತ್ಯಾದಿ) ಪಾಂಡವಪುರ ಒಳಗೊಂಡಂತೆ ಪಕ್ಕದ ಹಳ್ಳಿಗಳನ್ನು ತಲುಪಲು ಸೇವಾ ರಸ್ತೆಗೆ ಪ್ರವೇಶಿಸಲು ಮತ್ತು ನಿರ್ಗಮಿಸಲು ಅನುಮತಿ ನೀಡಲಾಗಿರುತ್ತದೆ. ಸರ್ವೀಸ್ ರಸ್ತೆಯನ್ನು ಸಂಪೂರ್ಣವಾಗಿ ಮುಚ್ಚಿರುವುದಿಲ್ಲ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ವರದಿ ನೀಡಿರುತ್ತಾರೆ ಎಂಬುದಾಗಿ ಸಚಿವರು ಹೇಳಿದ್ದಾರೆ.

    ಇನ್ನು ಎಕ್ಸ್‌ಪ್ರೆಸ್‌ವೇದಲ್ಲಿನ ಎರಡೂ ಬದಿಯ ಕಾಮಗಾರಿಗೆ ಸಂಬಂಧಿಸಿದಂತೆ ಯೋಜನಾ ಒಪ್ಪಂದದ ಪ್ರಕಾರ ಬೆಂಗಳೂರಿನಿಂದ ಮೈಸೂರು ಎನ್‌ಎಚ್‌-275 ರವರೆಗೆ ಸರ್ವೀಸ್ ರಸ್ತೆಯನ್ನು ಪೂರ್ಣಗೊಳಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

    ಬೆಂಗಳೂರಿಂದ ಮೈಸೂರು ಮಾರ್ಗದಲ್ಲಿ ಆಗಮನ-ನಿರ್ಗಮನ
    ಬೆಂಗಳೂರಿನಿಂದ ಮೈಸೂರಿಗೆ ಹೋಗಬೇಕಾದಲ್ಲಿ ವಂಡರ್‌ಲಾ, ಬಿಡದಿ ಬಳಿ ನಿರ್ಗಮನಕ್ಕೆ ದಾರಿ ಇದ್ದರೆ, ಬಿಡದಿಯಲ್ಲಿ ಆಗಮನಕ್ಕೂ ಅವಕಾಶವಿದೆ. ರಾಮನಗರದಲ್ಲಿ ಒಂದು ಕಡೆ, ಚನ್ನಪಟ್ಟಣ, ಮದ್ದೂರು, ಮಂಡ್ಯದಲ್ಲಿ ತಲಾ ಎರಡು ಕಡೆ ಆಗಮನ-ನಿರ್ಗಮನಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ. ಇನ್ನು ತೂಬಿನಕೆರೆ ಇಂಡಸ್ಟ್ರಿಯಲ್‌ ಪ್ರದೇಶದಲ್ಲಿ ಆಗಮನಕ್ಕೆ ಅವಕಾಶವಿದ್ದರೆ, ಭಾರೀ ವಾಹನಗಳಿಗೆ ನಿರ್ಗಮಕ್ಕೆ ಅನುಮತಿಯನ್ನು ನೀಡಲಾಗಿಲ್ಲ. ಶ್ರೀರಂಗಪಟ್ಟಣದ ಎರಡು ಕಡೆ ಆಗಮನ-ನಿರ್ಗಮನಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ.

    ಮೈಸೂರಿಂದ ಬೆಂಗಳೂರಿಗೆ ಆಗಮನ-ನಿರ್ಗಮನ
    ಶ್ರೀರಂಗಪಟ್ಟಣ, ತೂಬಿನಕೆರೆ ಇಂಡಸ್ಟ್ರಿಯಲ್‌ ಏರಿಯಾ, ಮಂಡ್ಯ, ಮದ್ದೂರು, ಚನ್ನಪಟ್ಟಣ, ಬಿಡದಿಗಳಲ್ಲಿ ತಲಾ ಎರಡು ಕಡೆ ಆಗಮನ-ನಿರ್ಗಮನಕ್ಕೆ ಅವಕಾಶವಿದ್ದರೆ, ರಾಮನಗರದಲ್ಲಿ ಒಂದು ಕಡೆ ಅವಕಾಶವನ್ನು ಕಲ್ಪಿಸಲಾಗಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading