ಇನ್ಸ್ಟಾಗ್ರಾಮ್ ರೀಲ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಲಾಂಗ್ ಹಿಡಿದು ಶೋ ಕೊಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ರಜತ್‌ನನ್ನು ಬಂಧಿಸಲಾಗಿದೆ.
ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ರಜತ್‌ಗೆ ಪೊಲೀಸರು ನೋಟಿಸ್ ನೀಡಿದ್ದರು.
ರೀಲ್ಸ್‌ಗೆ ಬಳಸಿದ್ದ ಮಚ್ಚು ಸಿಗದ ಹಿನ್ನೆಲೆಯಲ್ಲಿ ಎರಡು ಬಾರಿ ನೋಟಿಸ್ ನೀಡಿದ್ದರು. ಆದರೆ ರಜತ್ ಪೊಲೀಸ್ ವಿಚಾರಣೆಗೆ ಗೈರಾಗಿದ್ದಕ್ಕೆ ಅಸಮಾಧಾನಗೊಂಡಿದ್ದ ಕೋರ್ಟ್ ಎನ್‌ಬಿಡಬ್ಲ್ಯೂ ಜಾರಿ ಮಾಡಿತ್ತು.
ಈ ಹಿನ್ನೆಲೆಯಲ್ಲಿ ಕೋರ್ಟ್ ಸೂಚನೆ ಮೇರೆಗೆ ಬಸವೇಶ್ವರನಗರ ಠಾಣೆ ಪೊಲೀಸರು ರಜತ್‌ನನ್ನು ಬಂಧಿಸಿದ್ದಾರೆ.
ಇನ್ನು ಮಾಹಿತಿಯ ಪ್ರಕಾರ ವಿನಯ್ ಗೌಡಗೂ ಬಂಧನದ ಭೀತಿ ಎದುರಾಗಿದೆ ಎನ್ನಲಾಗಿದ್ದು, ವಿನಯ್‌ರನ್ನು ಬಂಧಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.