ದೆಹಲಿ: ಅರುಣ್ ಜೇಟ್ಲಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್‌ನ 32ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಿದ್ದು, ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 188 ರನ್ ಕಲೆಹಾಕಿದ್ದು, ರಾಜಸ್ಥಾನ್ ರಾಯಲ್ಸ್‌ಗೆ 189 ರನ್‌ಗಳ ಗುರಿ ನೀಡಿದೆ.
ಡೆಲ್ಲಿ ಕ್ಯಾಪಿಟಲ್ಸ್ ಪರ ಜೇಕ್ ಫ್ರೇಸರ್ 9 ರನ್, ಅಭಿಷೇಕ್ ಪೊರೆಲ್ 49 (37), ಕರುಣ್ ನಾಯರ್ ಡಕ್‌ಔಟ್, ಕೆಎಲ್ ರಾಹುಲ್ 38 (32), ಅಕ್ಷರ್ ಪಟೇಲ್ 14 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 34, ಅಶುತೋಷ್ ಶರ್ಮಾ ಅಜೇಯ 15 (11) ರನ್ ಹಾಗೂ ಟ್ರಿಸ್ಟನ್ ಸ್ಟಬ್ಸ್ 18 ಎಸೆತಗಳಲ್ಲಿ 2 ಬೌಂಡರಿ ಹಾಗೂ 2 ಸಿಕ್ಸರ್ ಅಜೇಯ 34 ರನ್ ಬಾರಿಸಿದರು.
ರಾಜಸ್ಥಾನ್ ರಾಯಲ್ಸ್ ಪರ ಜೋಫ್ರಾ ಆರ್ಚರ್ ಎರಡು ವಿಕೆಟ್, ತೀಕ್ಷಣ ಹಾಗೂ ವನಿಂದು ಹಸರಂಗ ತಲಾ ಒಂದೊಂದು ವಿಕೆಟ್ ಪಡೆದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


