ನ್ಯೂ ಚಂಡೀಗಢ್: ಇಲ್ಲಿನ ಮಹಾರಾಜ ಯದವೀಂದ್ರ ಸಿಂಗ್ ಕ್ರೀಡಾಂಗಣ ಐಪಿಎಲ್ ಇತಿಹಾಸದಲ್ಲಿ ಹಿಂದೆಂದೂ ನಡೆಯದ ಪಂದ್ಯಕ್ಕೆ ಸಾಕ್ಷಿಯಾಯಿತು. ಪಂಜಾಬ್ ಕಿಂಗ್ಸ್ ಐಪಿಎಲ್‌ನಲ್ಲೇ ಅತಿಕಡಿಮೆ ಮೊತ್ತ ಹಾಕಿಯೂ ಗೆದ್ದ ತಂಡ ಎಂಬ ದಾಖಲೆ ಬರೆಯಿತು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ಕೊಲ್ಕತ್ತಾ ನೈಟ್ ರೈಡರ್ಸ್ ಬೌಲಿಂಗ್ ದಾಳಿಗೆ ತತ್ತರಿಸಿ 15.3 ಓವರ್‌ಗಳಲ್ಲಿ ಕೇವಲ 111 ರನ್‌ಗಳಿಗೆ ಆಲ್‌ಔಟ್ ಆಗಿ ಕೊಲ್ಕತ್ತಾ ನೈಟ್ ರೈಡರ್ಸ್‌ಗೆ 112 ರನ್‌ಗಳ ಸುಲಭ ಗುರಿಯನ್ನು ನೀಡಿತ್ತು.
ಈ ಗುರಿಯನ್ನು ಬೆನ್ನಟ್ಟುಲು ಮುಂದಾದ ಕೊಲ್ಕತ್ತಾ ನೈಟ್ ರೈಡರ್ಸ್ 15.1 ಓವರ್‌ಗಳಲ್ಲಿ ಕೇವಲ 95 ರನ್‌ಗಳಿಗೆ ಔಟ್ ಆಗಿದೆ. ಈ ಮೂಲಕ ಪಂಜಾಬ್ ಕಿಂಗ್ಸ್ 16 ರನ್‌ಗಳ ಗೆಲುವನ್ನು ದಾಖಲಿಸಿತು.
ಈ ಮೂಲಕ ಪಂಜಾಬ್ ಕಿಂಗ್ಸ್ ಐಪಿಎಲ್ ಇತಿಹಾಸದಲ್ಲಿ ತಂಡವೊಂದು ಅತಿಕಡಿಮೆ ಮೊತ್ತ ಕಲೆಹಾಕಿ ಗೆದ್ದ ದಾಖಲೆಯನ್ನು ಬರೆದಿದೆ. ಈ ಹಿಂದೆ ಚೆನ್ನೈ ಸೂಪರ್ ಕಿಂಗ್ಸ್ 2009ರಲ್ಲಿ ನಡೆದಿದ್ದ ಪಂದ್ಯದಲ್ಲಿ 117 ರನ್ ಗುರಿ ನೀಡಿ ಎದುರಾಳಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು 92 ರನ್‌ಗೆ ಆಲ್‌ಔಟ್ ಮಾಡಿ 24 ರನ್‌ಗಳ ಗೆಲುವನ್ನು ಕಂಡಿತ್ತು. ಸದ್ಯ ಈ ದಾಖಲೆಯನ್ನು ಪಂಜಾಬ್ ಕಿಂಗ್ಸ್ ಮುರಿದುಹಾಕಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


