Saturday, November 7, 2026
spot_img
More
    spot_img
    HomeTop Storyಹುಬ್ಬಳ್ಳಿ ಎನ್‌ಕೌಂಟರ್ ಪ್ರಕರಣ ಸಿಐಡಿಗೆ; ತನಿಖೆಯಲ್ಲಿ ಸತ್ಯಾಂಶ ಹೊರಬರಲಿದೆ ಎಂದ ಪರಮೇಶ್ವರ್

    ಹುಬ್ಬಳ್ಳಿ ಎನ್‌ಕೌಂಟರ್ ಪ್ರಕರಣ ಸಿಐಡಿಗೆ; ತನಿಖೆಯಲ್ಲಿ ಸತ್ಯಾಂಶ ಹೊರಬರಲಿದೆ ಎಂದ ಪರಮೇಶ್ವರ್

    ಬೆಂಗಳೂರು: ಹುಬ್ಬಳ್ಳಿ ಎನ್‍ಕೌಂಟರ್ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದ್ದು, ತನಿಖೆಯಲ್ಲಿ ಏನು ಬರುತ್ತದೆ ನೋಡೋಣ. ತನಿಖೆಯಲ್ಲಿ ಸತ್ಯಾಂಶ ಹೊರಬರಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದರು.

    ಸುದ್ದಿಗಾರರೊಂದಿಗೆ ಅವರು ಮಾತನಾಡಿದ ಅವರು, ಒಕ್ಕಲಿಗ ಸಮುದಾಯದ ಸಭೆ ನಡೆದಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಯಿಸಿದ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಒಕ್ಕಲಿಗ ಸಮುದಾಯ ಸಭೆ ನಡೆದಿರುವುದಷ್ಟೆ ಗೊತ್ತು. ಒಳಗಡೆ ಏನೆಲ್ಲ ಚರ್ಚೆಯಾಗಿದೆ ಎಂಬುದು ನಮಗೆ ಮಾಹಿತಿ ಇಲ್ಲ. ಒಕ್ಕಲಿಗ ಸಮುದಾಯವು ತಮಗೆ ಅನ್ಯಾಯ ಆಗಬಾರದು ಎಂಬುದನ್ನು ಪ್ರಸ್ತಾಪ ಮಾಡಿದ್ದಾರೆ. ಇದನ್ನು ಹೊರತುಪಡಿಸಿ ಬೇರೆ ಏನು ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

    ದಾವಣಗೆರೆಯಲ್ಲಿ ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ಪ್ರಕರಣವನ್ನು ಸ್ಥಳೀಯ ಪೊಲೀಸರು ಗಮನಿಸುತ್ತಾರೆ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ. ಇಂತಹ ಘಟನೆಗಳಾದಾಗ ಯಾವುದೇ ರೀತಿಯ ಮುಲಾಜಿಲ್ಲದೆ ಕಾನೂನಿನ ಚೌಕಟ್ಟಿನಲ್ಲಿ ಕಠಿಣವಾದ ಕ್ರಮ ತೆಗೆದುಕೊಳ್ಳುವಂತೆ ಈಗಾಗಲೇ ಸೂಚಿಸಿದ್ದೇನೆ. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಅತ್ಯಾಚಾರ, ಮಹಿಳೆಯರ ಮೇಲೆ ಹಲ್ಲೆ ಪ್ರಕರಣಗಳಾದಾಗ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಕೆಲವು ವಿಶೇಷ ಸೂಚನೆಗಳನ್ನು ನೀಡಿದ್ದೇನೆ. ಅದರ ಪ್ರಕಾರ ಮಾಡಿಕೊಂಡು ಬರುತ್ತಿದ್ದಾರೆ. ಯಾವುದೇ ಪ್ರಕರಣವನ್ನು ಲಘುವಾಗಿ ತೆಗೆದುಕೊಂಡಿಲ್ಲ. ಎಲ್ಲ ಕೇಸ್‍ಗಳಲ್ಲಿಯೂ ಆರೋಪಿಗಳನ್ನು ಬಂಧಿಸಿ, ಕಾನೂನು ಪ್ರಕಾರ ಕ್ರಮ ತೆಗೆದುಕೊಂಡಿದ್ದೇವೆ. ಒಬ್ಬೊಬ್ಬರ ಟೀಕೆಗೆ ಉತ್ತರಿಸಲು ಆಗುವುದಿಲ್ಲ. ಕೋಪ ಬಂದಾಗ, ನೋವಾದಾಗ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಾರೆ. ಅದಕ್ಕೆಲ್ಲ ಉತ್ತರಿಸಲು ಆಗುತ್ತದೆಯೇ? ದೇಶದಲ್ಲಿ ಕಾನೂನು ಇದೆ. ಅದರ ಪ್ರಕಾರ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search