ಬೆಂಗಳೂರು: ನಕಲಿ ದಾಖಲೆಗಳನ್ನು ಸೃಷ್ಠಿಸಿ ನ್ಯಾಯಾಲಯಕ್ಕೆ ನಕಲಿ ಶೂರಿಟಿ ನೀಡುತ್ತಿದ್ದ 8 ಆರೋಪಿಗಳನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ರಫಿ, ಪ್ರವೀಣ್ ಕುಮಾರ್, ಅಭಿಷೇಕ್, ಗೋವಿಂದ ನಾಯ್ಕ ಮತ್ತು ದೊರೆರಾಜು ಹಾಗೂ ಮತ್ತೊಂದು ಪ್ರಕರಣದಲ್ಲಿ ಅಬೀದ್, ವಾಸಿಂ ಅಹಮ್ಮದ್ ಮತ್ತು ಗೋವಿಂದರಾಜು ಎಂಬವರನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದರು.
ಆರೋಪಿಗಳು ವಿವಿಧ ಪ್ರಕರಣಗಳಲ್ಲಿ ಜಾಮೀನು ಪಡೆಯಲು ನಕಲಿ ಶೂರಿಟಿಗಳನ್ನು ನೀಡುತ್ತಿದ್ದರು.
ಭೂಮಿ ಆಪ್ನ ಮೂಲಕ ಬೇರೆ ಬೇರೆಯವರ ಪಹಣಿಯ ವಿವರ ಪಡೆದುಕೊಳ್ಳುತ್ತಿದ್ದ ಇವರು, ಅದರಲ್ಲಿನ ವಿಳಾಸಕ್ಕೆ ಹೊಂದಿಕೆಯಾಗುವಂತೆ ನಕಲಿ ಆಧಾರ್ ಕಾರ್ಡ್ ಮಾದರಿ ಸೃಷ್ಟಿಸುತ್ತಿದ್ದರು. ಆ ಆಧಾರ್ಗೆ ಯಾವುದೋ ಒಂದು ನಂಬರ್ ನಮೂದಿಸಿ, ಶೂರಿಟಿ ನೀಡಲು ಹೋಗುವವರ ಫೋಟೋ ಸೇರಿಸುತ್ತಿದ್ದರು ಎಂದರು.
ಡಿ ಬಾಸ್ ಕೈನಲ್ಲಿನ ಮೊಬೈಲ್ ಬೆಲೆ ಕಂಡು ಹೌಹಾರಿದ ನೆಟ್ಟಿಗರು
ಎಐ ಕನ್ನಡ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


