ಬೆಂಗಳೂರು: ವಾರ್ಷಿಕ 40 ಲಕ್ಷ ರೂ. ವಹಿವಾಟು ನಡೆಸಿರುವ ಸಣ್ಣ ಉದ್ದಿಮೆದಾರರಿಗೆ ಏಕಾಏಕಿ ನೋಟಿಸ್ ಜಾರಿಗೊಳಿಸಿದ ವಾಣಿಜ್ಯ ತೆರಿಗೆ ಇಲಾಖೆ ಕ್ರಮವನ್ನು ವಿರೋಧಿಸಿ ಜು.23 ರಿಂದ 2 ದಿನ ಬಂದ್ ಆಚರಿಸಲು ರಾಜ್ಯ ಕಾರ್ಮಿಕ ಪರಿಷತ್ತು ನಿರ್ಧರಿಸಿದ್ದು, ಹಾಲು, ಬೇಕರಿ ಉತ್ಪನ್ನಗಳು, ಬೀಡಿ, ಸಿಗರೇಟು ಮಾರಾಟವನ್ನು ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದೆ.
ನಗರದಲ್ಲಿ ಮಂಗಳವಾರ ( ಜುಲೈ 15 ) ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ಅಧ್ಯಕ್ಷ ರವಿ ಶೆಟ್ಟಿ ಬೈಂದೂರು ಮಾತನಾಡಿ, ಜು.23 ಮತ್ತು 24ರಂದು ಕೇಂದ್ರದ ವಿರುದ್ಧ ಇಡೀ ರಾಜ್ಯದಲ್ಲಿ ದೊಡ್ಡಮಟ್ಟದ ಹೋರಾಟ ನಡೆಸುತ್ತೇವೆ. ನಂತರ 25ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಸುತ್ತೇವೆ. ಯಾವುದೇ ಮುನ್ಸೂಚನೆ ನೀಡದೆ ನೋಟಿಸ್ ನೀಡಿರುವುದು ಸರಿಯಲ್ಲ. ನಮ್ಮ ಅಂಗಡಿ ಎರಡರಿಂದ ಹತ್ತು ಲಕ್ಷ ರೂ. ಬೆಲೆ ಬಾಳುತ್ತದೆ. ಆದರೆ ಕೋಟ್ಯಂತರ ತೆರಿಗೆ ಪಾವತಿಸುವಂತೆ ಸೂಚಿಸಿರುವುದು ಸರಿಯಲ್ಲ ಎಂದರು.
ಚಾಲಕರ ಸಂಘದ ಅಧ್ಯಕ್ಷ ಗಂಡಸಿ ಸದಾನಂದ ಸ್ವಾಮಿ ಮಾತನಾಡಿ, ಜಿ.ಎಸ್.ಟಿ. ಮಂಡಳಿ ಅಧ್ಯಕ್ಷರೂ ಆಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೂಡಲೇ ಮಧ್ಯಪ್ರವೇಶಿಸಿ ನೋಟಿಸ್ ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಕನ್ನಡ ಒಕ್ಕೂಟದ ಅಧ್ಯಕ್ಷ ನಟರಾಜ್ ಬೊಮ್ಮಸಂದ್ರ, ಕನ್ನಡ ಭೂಷಣ, ತೆರಿಗೆ ಮಾಹಿತಿದಾರ ಸುಬ್ರಮಣ್ಯ, ಗೋವಿಂದ ಬಾಬು ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಡಿ ಬಾಸ್ ಕೈನಲ್ಲಿನ ಮೊಬೈಲ್ ಬೆಲೆ ಕಂಡು ಹೌಹಾರಿದ ನೆಟ್ಟಿಗರು
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


