Tuesday, September 1, 2026
spot_img
More
    spot_img
    HomeLatest newsಕೆಆರ್‌ಎಸ್‌ ಹಾಗೂ ಕಬಿನಿ ಜಲಾಶಯಗಳ ಇಂದಿನ ನೀರಿನ ಮಟ್ಟ

    ಕೆಆರ್‌ಎಸ್‌ ಹಾಗೂ ಕಬಿನಿ ಜಲಾಶಯಗಳ ಇಂದಿನ ನೀರಿನ ಮಟ್ಟ

    ಮೈಸೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಪಡೆದುಕೊಂಡ ಪರಿಣಾಮ ಹಳೆ ಮೈಸೂರು ಭಾಗದ ಕೆಆರ್‌ಎಸ್‌ ಹಾಗೂ ಕಬಿನಿ ಜಲಾಶಯಗಳ ನೀರಿನ ಮಟ್ಟ ಹೆಚ್ಚಾಗಿದೆ.

    Advertisement

    ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಮತ್ತೆ ಚುರುಕುಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 17,894 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 13,359 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಇಂದಿನ ನೀರಿನ ಮಟ್ಟ 122.90 ಅಡಿಗಳಾಗಿದ್ದು, ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದೆ. 49.452 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿಂದು 46.835 ಟಿಎಂಸಿ ನೀರು ಸಂಗ್ರಹವಾಗಿದೆ.

    ಇನ್ನು ಕೇರಳದ ವಯನಾಡು ಭಾಗದಲ್ಲಿ ಮಳೆ ಮತ್ತೆ ಚುರುಕು ಪಡೆದುಕೊಂಡ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು ಬಂದಿದೆ.

    ಜಲಾಶಯದ ಇಂದಿನ ಒಳಹರಿವು 10,995 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 12,000 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಇಂದಿನ ನೀರಿನ ಮಟ್ಟ 81 ಅಡಿಗಳಾಗಿದ್ದು, ಜಲಾಶಯದ ಗರಿಷ್ಠ ನೀರಿನ ಮಟ್ಟ 84 ಅಡಿಗಳಾಗಿದೆ. ಮಳೆ ಹೀಗೆಯೇ ಮುಂದುವರಿದರೆ ಜಲಾಶಯಕ್ಕೆ ಮತ್ತಷ್ಟು ಒಳಹರಿವು ಹೆಚ್ಚಾಗಲಿದ್ದು, ಹೊರಹರಿವನ್ನು ಹೆಚ್ಚಳ ಮಾಡುವ ಸಾಧ್ಯತೆಯಿದೆ.

    ಈ ಹಿನ್ನೆಲೆಯಲ್ಲಿ ಕಪಿಲಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಬಿಡುಗಡೆ ಮಾಡುವ ಸಾಧ್ಯತೆಯಿದ್ದು, ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

    ರಾಜ್ಯದಲ್ಲಿ ಇರುವುದು ಒಬ್ಬರೇ ಸಿಎಂ ಅದು ಸಿದ್ದರಾಮಯ್ಯ; ನಿಖಿಲ್‌ಗೆ ಮಹದೇವಪ್ಪ ತಿರುಗೇಟು

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading