ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮತ್ತೆ ಜೈಲು ಪಾಲಾದ ಬಳಿಕ ಪತ್ನಿ ವಿಜಯಲಕ್ಷ್ಮೀ ಮೊದಲ ಬಾರಿಗೆ ಪೋಸ್ಟ್ ಹಂಚಿಕೊಂಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲುಪಾಲಾದ ಬಳಿಕ ಪೋಸ್ಟ್ ಹಂಚಿಕೊಂಡಿದ್ದು, ಫೋಟೋದಲ್ಲಿ ನಟ ದರ್ಶನ್ ಏಕಾಂಗಿಯಾಗಿ ನಿಂತಿದ್ದಾರೆ.
ಇದಕ್ಕೆ ವಿಜಯಲಕ್ಷ್ಮೀ ಹಾರ್ಟ್ ಬ್ರೇಕ್ ಇಮೋಜಿ ಕೂಡ ಹಾಕಿದ್ದಾರೆ. ವಿಜಯಲಕ್ಷ್ಮೀ ಪೋಸ್ಟ್ಗೆ ಅಭಿಮಾನಿಗಳು ವಿವಿಧ ರೀತಿಯಲ್ಲಿ ಕಮೆಂಟ್ ಮಾಡಿದ್ದು, ಮುಂದಿನ ದಿನಗಳಲ್ಲಿ ಅಣ್ಣನಿಗೆ ಒಳ್ಳೆಯ ಕಾಲ ಬರುತ್ತದೆ. ಯೋಚಿಸಬೇಡಿ ಎಂದು ಧೈರ್ಯ ಹೇಳುತ್ತಿದ್ದಾರೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅಂಡ್ ಗ್ಯಾಂಗ್ಗೆ ಸಂಕಷ್ಟ ಎದುರಾಗಿದ್ದು, ಫಾಸ್ಟ್ ಟ್ರ್ಯಾಕ್ ಕೋರ್ಟ್ಗೆ ಮನವಿ ಸಲ್ಲಿಸಲು ಪೊಲೀಸರು ಸಿದ್ದತೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇತ್ತೀಚೆಗೆ ದರ್ಶನ್ ಅಂಡ್ ಗ್ಯಾಂಗ್ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್ ತ್ವರಿತಗತೊಯಲ್ಲಿ ಕೇಸ್ ಇತ್ಯರ್ಥಕ್ಕೆ ಸೂಚನೆ ನೀಡಿತ್ತು. ಆದ್ದರಿಂದ ಫಾಸ್ಟ್ ಟ್ರ್ಯಾಕ್ ಕೋರ್ಟ್ ರಚನೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.
24 ಗಂಟೆಯಲ್ಲಿ ತುರ್ತು ಬಿಪಿಎಲ್ ಕಾರ್ಡ್: ರಾಜ್ಯ ಸರ್ಕಾರದ ಹೊಸ ಪೋರ್ಟಲ್
ಎಐ ಕನ್ನಡ ಕೃಷಿ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


