Monday, November 2, 2026
spot_img
More
    spot_img
    HomeLatest newsಡಿಕೆ ಶಿವಕುಮಾರ್ ಮಗನನ್ನು ವಕೀಲನನ್ನಾಗಿ ಮಾಡಿದ್ದು ಯಾಕೆ ?

    ಡಿಕೆ ಶಿವಕುಮಾರ್ ಮಗನನ್ನು ವಕೀಲನನ್ನಾಗಿ ಮಾಡಿದ್ದು ಯಾಕೆ ?

    ಡಿಕೆ ಶಿವಕುಮಾರ್ ಮಗನನ್ನು ವಕೀಲನನ್ನಾಗಿ ಮಾಡಿದ್ದು ಯಾಕೆ ?

    ಡಿ.ಕೆ ಶಿವಕುಮಾರ್ ಇವರು ಭಾರತದ ಶ್ರೀಮಂತ ರಾಜಕಾರಣಿಗಳಲ್ಲಿ ಒಬ್ಬರು. ಡಿ.ಕೆ.ಶಿವಕುಮಾರ್ ಅವರು ಕನಕಪುರದಲ್ಲಿ ಕರಿಯಪ್ಪ ಅವರ ವಿದ್ಯಾಸಂಸ್ಥೆಯಲ್ಲಿ ಶಾಲ ಶಿಕ್ಷಣವನ್ನು ಪೊರೈಸಿದರು. ನಂತರ ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನಲ್ಲಿ ಬಿ.ಎ ಪದವಿಯನ್ನು ಮುಗಿಸಿದ್ದರು. ಮುಕ್ತ ವಿಶ್ವವಿದ್ಯಾನಿಲಯದಲ್ಲಿ ರಾಜ್ಯಶಾಸ್ತ್ರದಲ್ಲಿ ಎಂ.ಎ ಪದವಿಯನ್ನು ಪಡೆದಿದ್ದಾರೆ.

    ಶಿವಕುಮಾರ್ ೧೯೯೩ ರಲ್ಲಿ ಉಷಾ ಅವರನ್ನು ವಿವಾಹವಾದರು. ಇವರಿಗೆ ಐಶ್ವರ್ಯ ಮತ್ತು ಆಭರಣ ಎಂಬ ಇಬ್ಬರು ಹೆಣ್ಣುಮಕ್ಕಳು ಮತ್ತು ಆಕಾಶ್ ಎಂಬ ಒಬ್ಬ ಮಗ. ಡಿ‌ಕೆಶಿ ಯವರ ಮಗ ವಕೀಲ ವೃತ್ತಿಯನ್ನು ಆಯ್ಕೆ ಮಾಡಿಕೊಂಡಿದ್ದು ಲಾ ಓದುತ್ತಿದ್ದಾನೆ .‌ ಡಿಕೆ ಶಿವಕುಮಾರ್ ಮಗನನ್ನು ವಕೀಲನನ್ನಾಗಿ ಮಾಡಿದ್ದು ಯಾಕೆ ಎಂದು ಹೇಳಿದ್ದಾರೆ.‌

    ನಾನು ವಿದ್ಯಾರ್ಥಿಯಾಗಿದ್ದಾಗ ವಕೀಲನಾಗಬೇಕು ಎಂಬ ಆಸೆ ಇತ್ತು. ಆದರೆ ಪದವಿ ಓದುತ್ತಿರುವಾಗಲೇ ನನಗೆ ಪಕ್ಷದ ಟಿಕೆಟ್ ನೀಡಲಾಯಿತು. ಹೀಗಾಗಿ ನಾನು ನನ್ನ ಮಗನನ್ನು ಕಾನೂನು ಓದಿಸುತ್ತಿದ್ದೇನೆ. ನನಗೆ ದಿನ ಬೆಳಗಾದರೆ ನ್ಯಾಯಾಲಯದ ನೋಟೀಸ್ ಬರುತ್ತಿರುತ್ತದೆ. ನೀನಾದರೂ ವಕೀಲನಾಗು ಎಂದು ಆತನಿಗೆ ಹೇಳಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ತಿಳಿಸಿದರು.

    ನನಗೆ ನ್ಯಾಯಾಂಗ ವ್ಯವಸ್ಥೆ ಮೇಲೆ ಅಪಾರ ನಂಬಿಕೆ ಇದೆ. ಜನ ದೇವಾಲಯಕ್ಕೆ ಹೋಗಿ ಪ್ರಾರ್ಥನೆ ಮಾಡಿದಂತೆ ನ್ಯಾಯಾಲಯದಲ್ಲಿ ನ್ಯಾಯ ಸಿಗುತ್ತದೆ ಎಂಬ ನಂಬಿಕೆಯಿಂದ ಬರುತ್ತಾರೆ. ಅಂತಹವರಿಗೆ ವಕೀಲರು ನ್ಯಾಯ ಒದಗಿಸಿಕೊಡುವ ವಿಶ್ವಾಸ ನನಗಿದೆ ಎಂದು ತಿಳಿಸಿದರು.

    ,24 ಗಂಟೆಯಲ್ಲಿ ತುರ್ತು ಬಿಪಿಎಲ್‌ ಕಾರ್ಡ್: ರಾಜ್ಯ ಸರ್ಕಾರದ ಹೊಸ ಪೋರ್ಟಲ್


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search