ಬೆಂಗಳೂರು: ಕೆ.ಎನ್. ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸಿರುವುದು ತೀವ್ರ ಆಘಾತ ಉಂಟು ಮಾಡಿದ್ದು, ಮರಳಿ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಸಿದ್ಧಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗಸ್ವಾಮೀಜಿ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ಜಿಲ್ಲೆಯಿಂದ ಕೆ.ಎನ್. ರಾಜಣ್ಣ ಮತ್ತು ಡಾ. ಜಿ.ಪರಮೇಶ್ವರ್ ಸಚಿವ ಸಂಪುಟದಲ್ಲಿದ್ದರು. ಇಬ್ಬರೂ ಉತ್ತಮ ಕೆಲಸ ಮಾಡುತ್ತಿದ್ದರು. ಏಕಾಏಕಿ ರಾಜಣ್ಣ ಅವರನ್ನು ವಜಾಗೊಳಿಸಿರುವುದು ತೀವ್ರ ಆಘಾತ ತಂದಿದೆ ಎಂದಿದ್ದಾರೆ.
ಸಹಕಾರಿ ಕ್ಷೇತ್ರದಿಂದಲೇ ಮೇಲೆ ಬಂದ ರಾಜಣ್ಣ ರೈತರಿಗೆ, ಜನಸಾಮಾನ್ಯರಿಗೆ ಹಾಗೂ ಸಂಘಟನೆಗಳಿಗೆ ಹೆಚ್ಚು ಸಹಾಯ ಮಾಡಬಹುದು ಎಂಬ ಕಾರಣಕ್ಕಾಗಿ ಸಹಕಾರ ಖಾತೆ ಪಡೆದು ಕೆಲಸ ಮಾಡುತ್ತಿದ್ದರು. ಇದ್ದಕ್ಕಿದ್ದ ಹಾಗೆ ಅಧಿವೇಶನದ ಆರಂಭ ದಿನವೇ ಅವರನ್ನು ಸಂಪುಟದಿಂದ ಕೈಬಿಟ್ಟಿರುವುದನ್ನು ಕೇಳಿ ಆಘಾತವಾಯಿತು. ಪಕ್ಷದ ಹೈಕಮಾಂಡ್‍ನ ನಿರ್ಧಾರದಂತೆ ಸಂಪುಟದಿಂದ ವಜಾಗೊಳಿಸುವುದಾಗಿ ತಿಳಿಸಲಾಗಿದೆ ಎಂದರು.
ರಾಜಣ್ಣ ನೇರ, ನಿಷ್ಠೂರವಾದಿ ಸ್ವಭಾವದವರು. ಅವರ ಒಂದು ಮಾತಿನ ಸಂದರ್ಭವನ್ನು ಬಳಸಿಕೊಂಡು ಸಂಪುಟದಿಂದ ಕೈಬಿಟ್ಟಿರುವುದನ್ನು ಮರು ಚಿಂತನೆ ಮಾಡಬೇಕಾಗಿದೆ. ರಾಜಣ್ಣ ಅವರನ್ನು ಮತ್ತೆ ಸಂಪುಟಕ್ಕೆ ತೆಗೆದುಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.
ಶೀಘ್ರದಲ್ಲೇ ಕಗ್ಗಂಟು ಬಗೆ ಹರಿಯಲಿದೆ. ರಾಜಣ್ಣ ಮತ್ತೆ ಸಚಿವರಾಗಿ ಉತ್ತಮ ಕೆಲಸ ಮಾಡುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಾ ವಿಚಾರಗಳಲ್ಲೂ ಮಾತನಾಡುತ್ತಿದ್ದರು. ಆದರೆ ರಾಜಣ್ಣ ಅವರ ವಿಷಯದಲ್ಲಿ ಮೌನಕ್ಕೆ ಶರಣಾಗಿದ್ದಾರೆ. ಹೈಕಮಾಂಡ್ ನಿರ್ಧಾರವಾಗಿರುವುದರಿಂದ ಯಾರೂ ಮಾತನಾಡಬಾರದು ಎಂದು ಹೇಳುತ್ತಿರುವುದಾಗಿ ತಿಳಿದು ಬಂದಿದೆ.
ಸಿದ್ದರಾಮಯ್ಯ ಹೈಕಮಾಂಡ್ ಅಲ್ಲ. ಹೈಕಮಾಂಡ್‍ನ ನಿರ್ಧಾರವನ್ನು ಅವರು ಒಪ್ಪಿಕೊಂಡಿರಬಹುದು. ಆದರೆ ರಾಜಣ್ಣ ಅವರನ್ನು ಮರಳಿ ಸಂಪುಟಕ್ಕೆ ತೆಗೆದುಕೊಂಡು ಜನ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ನಿನ್ನೆ ಶಾಸಕ ಕೆ.ಎನ್ ರಾಜಣ್ಣ, ತಮ ವಿರುದ್ಧ ದೆಹಲಿಯಲ್ಲಿ ಕುಳಿತ ಮೂವರು ಷಡ್ಯಂತ್ರ ಮಾಡಿದ್ದಾರೆ. ವಿಧಾನಮಂಡಲದ ಅಧಿವೇಶನದ ಬಳಿಕ ದೆಹಲಿಗೆ ತೆರಳಿ ಸತ್ಯಾಂಶಗಳನ್ನು ಮನವರಿಕೆ ಮಾಡಿಕೊಳ್ಳುತ್ತೇನೆ. ಮತ್ತೆ ಸಿದ್ದರಾಮಯ್ಯ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ ಬೆನ್ನಲ್ಲೇ ಶ್ರೀಗಳ ಹೇಳಿಕೆ ಮಹತ್ವ ಪಡೆದುಕೊಂಡಿದ
24 ಗಂಟೆಯಲ್ಲಿ ತುರ್ತು ಬಿಪಿಎಲ್ ಕಾರ್ಡ್: ರಾಜ್ಯ ಸರ್ಕಾರದ ಹೊಸ ಪೋರ್ಟಲ್
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


