Saturday, May 9, 2026
spot_img
More
    spot_img
    HomeLatest newsಕಾಂಗ್ರೆಸ್‌ನದ್ದು ಗುಲಾಮಿ ಸಂಸ್ಕೃತಿ; ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ವಿಜಯೇಂದ್ರ

    ಕಾಂಗ್ರೆಸ್‌ನದ್ದು ಗುಲಾಮಿ ಸಂಸ್ಕೃತಿ; ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ವಿಜಯೇಂದ್ರ

    ಬೆಂಗಳೂರು: ಬ್ರಿಟಿಷ್ ಗುಲಾಮಗಿರಿಯಿಂದ ದೇಶವನ್ನು ಮುಕ್ತಗೊಳಿಸಿದ ಸ್ವಾತಂತ್ರ್ಯ ಸಂಗ್ರಾಮವನ್ನು ಇಂದಿಗೂ ಅಪಮಾನಿಸುತ್ತಿರುವ ಗುಲಾಮಿ ಸಂಸ್ಕೃತಿಯ ಕಾಂಗ್ರೆಸ್ ನೆರಳಿನಲ್ಲಿ ನಿಂತು ಮಾತನಾಡುತ್ತಿರುವ ನಿಮಗೆ ಆರ್‍ಎಸ್‍ಎಸ್ ಹಾಗೂ ಪ್ರಧಾನಿ ನರೇಂದ್ರಮೋದಿ ಅವರ ಕುರಿತು ಮಾತನಾಡುವ ಯಾವ ಅರ್ಹತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

    ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಷ್ಟ್ರೀಯ ಸ್ವಯಂ ಸೇವಕ ಸಂಘ ರಾಜಕೀಯ ಪಕ್ಷವಲ್ಲ, ರಾಷ್ಟ್ರ ನಿರ್ಮಾಣಕ್ಕಾಗಿ ಜನತಾಳಿ ಶತಮಾನ ಕಂಡ ವಿಶ್ವದ ಅತಿದೊಡ್ಡ ರಾಜಕೀಯೇತರ ಸಂಘಟನೆಯಾಗಿ ಸೇವೆ, ಸಮಾನತೆಯ ತತ್ವ ಅಳವಡಿಸಿಕೊಂಡು ದೇಶ ಕಟ್ಟುತ್ತಿರುವ ರಾಷ್ಟ್ರಭಕ್ತ ಸಂಘಟನೆ ಎಂದು ಪ್ರಶಂಸಿದ್ದಾರೆ.

    ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಮೂಲ ಕಾಂಗ್ರೆಸಿಗರಲ್ಲದ ನೀವು ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ ರಾಜಕಾರಣದ ಹಿನ್ನೆಲೆಯಿಂದ ಬಂದವರು. ಕಾಂಗ್ರೆಸ್ ಪಕ್ಷದ ಪರ ತಾವು ಸಮರ್ಥನೆಗೆ ನಿಂತಿರುವುದು ಸ್ವಾತಂತ್ರ್ಯ ಚಳವಳಿಯ ಸಾರ್ಥಕತೆ ಸಾರಲು, ಪ್ರಜಾಪ್ರಭುತ್ವವನ್ನು ಪುನಃ ಪ್ರತಿಷ್ಠಾಪಿಸಲು 70ರ ದಶಕದಲ್ಲಿ ತುರ್ತು ಪರಿಸ್ಥಿತಿಯ ವಿರುದ್ಧ ಹೋರಾಡಿದ ಹಲವಾರು ಮಹನೀಯರನ್ನು ಅವಮಾನಿಸಿದಂತೆ. ಸ್ವಾರ್ಥ ಹಾಗೂ ಅಧಿಕಾರ ರಾಜಕಾರಣಕ್ಕಾಗಿ ಕಾಂಗ್ರೆಸ್ ಸೇರಿರುವ ನೀವು ಸಂವಿಧಾನ, ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ಯಾವ ನೈತಿಕತೆಯನ್ನೂ ಉಳಿಸಿಕೊಂಡಿಲ್ಲ ಎಂದು ವಾಗ್ದಳಿ ನಡೆಸಿದ್ದಾರೆ.

    ಸ್ವಾತಂತ್ರ್ಯೋತ್ಸವದ ವೇದಿಕೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಾಧನೆಯನ್ನು ಉಲ್ಲೇಖಿಸಿದ್ದು ಸಂವಿಧಾನದ ಅಪಚಾರ ಎಂದು ಹೇಳಿರುವ ಸಿದ್ದರಾಮಯ್ಯನವರೇ ತುರ್ತು ಪರಿಸ್ಥಿತಿಯಲ್ಲಿ ಸ್ವಾತಂತ್ರ್ಯ ಹೋರಾಟವನ್ನು ಅನುಮಾನಿಸಿ, ಸಂವಿಧಾನದ ಆಶಯವನ್ನು ಗಾಳಿ ತೂರಿ, ಪ್ರಜಾಪ್ರಭುತ್ವದ ಕತ್ತು ಹಿಸುಕಿ, ಸರ್ವಾಧಿಕಾರತನ ಮೆರೆದ ಕಾಂಗ್ರೆಸ್ ಪಕ್ಷವೇ ರಾಷ್ಟ್ರ ರಾಜಕೀಯದಲ್ಲಿ ಒಂದು ಬಹುದೊಡ್ಡ ಕಪ್ಪು ಚುಕ್ಕೆಯಾಗಿದೆ ಎಂದು ಕಿಡಿಕಾರಿದ್ದಾರೆ.

    ಜಾತಿರಹಿತ ಸಮಾಜಕಟ್ಟುವ ಸಂಘದ ತ್ಯಾಗ, ಸಮರ್ಪಣೆಯ ಅಸಂಖ್ಯಾತ ಕಾರ್ಯಕರ್ತರ ಕ್ರಿಯಾಶೀಲತೆಯನ್ನು ಕಂಡು ¿ಮಹಾತ ಗಾಂಧೀಜಿ ಅವರು ಪ್ರಶಂಶಿಸಿದ ಉಲ್ಲೇಖ ಇತಿಹಾಸದ ಪುಟದಲ್ಲಿದೆ¿. ಚೀನಾ ಯುದ್ಧದ ಸಂದರ್ಭದಲ್ಲಿ ದೇಶ ರಕ್ಷಣೆಗೆ ನಿಂತ ವೀರ ಯೋಧರ ಸೇವೆಗಾಗಿ ಸಮರೋಪಾದಿಯಲ್ಲಿ ತನ್ನನು ತೊಡಗಿಸಿಕೊಂಡ ಹೆಮೆಯ ಸಂಘಟನೆ, ಈ ಹಿನ್ನಲೆಯಲ್ಲಿಯೇ ಅಂದಿನ ಪ್ರಧಾನಿ ನೆಹರು ಅವರು ಆರ್‍ಎಸ್‍ಎಸ್ ಸೇವೆಯನ್ನು ಇಡೀ ದೇಶವೇ ಗುರುತಿಸಲಿ ಎಂಬ ಪ್ರಶಂಸೆಯ ಸಂಕೇತವಾಗಿ ಗಣರಾಜ್ಯೋತ್ಸವದ ಪೆರೇಡ್ ನಲ್ಲಿ ಸಂಘವನ್ನು ಭಾಗವಹಿಸಲು ಆಹ್ವಾನಿಸಿದ್ದರು ಎಂದು ಹೇಳಿದ್ದಾರೆ.

    ಉದಾತ್ತ ಉದ್ದೇಶ, ಧ್ಯೇಯ, ಗುರಿಗಳನ್ನು ಇರಿಸಿಕೊಂಡು ದೇಶದ ಗಡಿಯಾಚೆಗೂ ಸಂಘಟನೆಯ ಚಟುವಟಿಕೆಗಳನ್ನು ವಿಸ್ತರಿಸಿ ಭಾರತೀಯತೆಯನ್ನು ಪ್ರತಿನಿಧಿಸುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಾಧನೆ ಹಾಗೂ ಸೇವೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರೋತ್ಸವದ ತಮ ಭಾಷಣದಲ್ಲಿ ಉಲ್ಲೇಖಿಸಿ ಸ್ವಾತಂತ್ರ್ಯ ಚಳುವಳಿಯ ಉದ್ದೇಶವನ್ನು ಸಾರ್ಥಕಗೊಳಿಸಿ ಮುನ್ನಡೆಯುತ್ತಿರುವುದನ್ನು ಪ್ರಶಂಸಿಸಿರುವುದು ಸಮಯೋಚಿತವಾಗಿದೆಯಲ್ಲದೇ ಶತ ಕೋಟಿ ಭಾರತೀಯರ ಭಾವನೆಯ ಸಂಕೇತವಾಗಿದೆ. ಇದಕ್ಕೆ ಕಾಂಗ್ರೆಸ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಏಕೆ ಇಷ್ಟೋಂದು ವಿಚಲಿತರಾಗಿದ್ದಾರೆ ಎಂಬುದು ಆಶ್ಚರ್ಯ ತಂದಿದೆ ಎಂಧು ಟೀಕಿಸಿದ್ದಾರೆ.

    ಸ್ವಾತಂತ್ರ್ಯ ಚಳುವಳಿಯನ್ನು ದೇಶಾದ್ಯಂತ ಪಸರಿಸುವ ಘನ ಉದ್ದೇಶದಿಂದ ಅಂದು ಚಳುವಳಿಯನ್ನು ಕಾಂಗ್ರೆಸ್ ಹೆಸರಿನಲ್ಲಿ ಸಂಘಟಿಸಲಾಯಿತು, ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ಹೆಸರು ವಿಸರ್ಜಿಸಬೇಕು ಅದನ್ನು ರಾಜಕೀಯ ಪಕ್ಷವಾಗಿ ಬಳಸಿಕೊಳ್ಳಬಾರದು ಎಂಬುದನ್ನು ಸ್ವತಃ ಮಹಾತ್ಮ ಗಾಂಧಿಯವರೂ ಸೇರಿದಂತೆ ಅನೇಕ ಸ್ವಾತಂತ್ರ್ಯ ಸೇನಾನಿಗಳು ಸೂಚಿಸಿದ್ದರು.

    ಇದನ್ನು ಧಿಕ್ಕರಿಸಿ ರಾಜಕೀಯ ಪಕ್ಷವಾಗಿ ಕಾಂಗ್ರೆಸ್ ಅನ್ನು ಉಳಿಸಿಕೊಂಡು ಇವತ್ತಿಗೂ ಒಂದೇ ಕುಟುಂಬ ಅದನ್ನು ಕಪಿಮುಷ್ಠಿಯಲ್ಲಿ ಇರಿಸಿಕೊಂಡು, ದೇಶದ ಹಿತಾಸಕ್ತಿಯ ವಿರುದ್ಧದ ರಾಜಕೀಯ ನಡೆ-ನುಡಿಯನ್ನು ಪ್ರದರ್ಶಿಸುತ್ತಿರುವುದು ರಾಷ್ಟ್ರದ ಜನತೆಗೆ ತಿಳಿದಿದೆ. ಈ ಕಾರಣದಿಂದಲೇ ಸದ್ಯ ಕಾಂಗ್ರೆಸ್ ಪಕ್ಷ ರಾಜಕೀಯ ಭೂಪಟದಲ್ಲಿ ಕುಬ್ಜ ಸ್ಥಾನಕ್ಕೆ ತಳ್ಳಲ್ಪಟ್ಟಿದೆ ಎಂದು ವ್ಯಂಗ್ಯವಾಡಿದ್ದಾರೆ.

    ಈ ದೇಶದಲ್ಲಿ ಲಕ್ಷಾಂತರ ಜನರ ತ್ಯಾಗ ಹೋರಾಟದ ಫಲವಾಗಿ ಭಾರತ ಗಳಿಸಿಕೊಂಡ ಸ್ವಾತಂತ್ರ್ಯವನ್ನು ದೇಶದ ಅಭಿವೃದ್ಧಿಗೆ, ಭಾರತದ ಸುರಕ್ಷತೆಗೆ ಕಾಂಗ್ರೆಸ್ ಎಂದೂ ಬಳಸಿಕೊಳ್ಳಲಿಲ್ಲ. ತನ್ನ ಆಡಳಿತ ಕಾಲದಲ್ಲಿ ದೇಶದಲ್ಲಿ ಭಯೋತ್ಪಾದಕ ಶಕ್ತಿಗಳು ತಲೆ ಎತ್ತಲು,ಭ್ರಷ್ಟಾಚಾರದ ಹಗರಣಗಳು ಈ ದೇಶವನ್ನು ಕಿತ್ತು ತಿನ್ನುವ ಪರಿಸ್ಥಿತಿಗೆ ತಳ್ಳಿದ್ದು ಕಾಂಗ್ರೆಸ್ ಕೊಡುಗೆಯಾಗಿದೆ ಎಂದು ವಿಜಯೇಂದ್ರ ಟೀಕಾ ಪ್ರಹಾರ ನಡೆಸಿದ್ದಾರೆ.

    ರಜನಿಕಾಂತ್ ‘ಕೂಲಿ’ ಬಾಕ್ಸ್ ಆಫೀಸ್‌ ದಾಖಲೆ: ಮೊದಲ ದಿನವೇ ವಿಶ್ವಾದ್ಯಂತ ₹130 ಕೋಟಿ ಕಲೆಕ್ಷನ್

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಬೆಂಗಳೂರಿನಲ್ಲಿ ಮುಂಗಾರು ಆರ್ಭಟ: ಆಲಿಕಲ್ಲು ಮಳೆ, ಗುಡುಗು-ಸಿಡಿಲಿಗೆ ನಗರ ತತ್ತರ

    ಬೆಂಗಳೂರು: ಸಂಜೆ ಐಟಿ ರಾಜಧಾನಿ ಬೆಂಗಳೂರಿನ ಮೇಲೆ ಪ್ರಕೃತಿ ತನ್ನ ಕೋಪವನ್ನು ಸಂಪೂರ್ಣವಾಗಿ ತೋರಿಸಿತು. ಕಾರ್ಮೋಡ ಕವಿದ ಆಕಾಶದಿಂದ ಮೊದಲು ಗುಡುಗು-ಸಿಡಿಲಿನ ಆರ್ಭಟ, ಬಳಿಕ ಆಲಿಕಲ್ಲು ಮಳೆ ಮತ್ತು ಜೋರು ಗಾಳಿ ನಗರವನ್ನು...

    ಇಂಡೋನೇಷ್ಯಾದ ಡೇ-ಕೇರ್‌ನಲ್ಲಿ 53 ಮಕ್ಕಳಿಗೆ ನಡೆದ ಅಮಾನವೀಯ ದೌರ್ಜನ್ಯ: ವಿಡಿಯೋ ನೋಡಿ ಜಗತ್ತೇ ಬೆಚ್ಚಿ ಬಿದ್ದಿತು

    ಇಂಡೋನೇಷ್ಯಾದ ಜಾವಾ ದ್ವೀಪದ ಯೋಗ್ಯಕರ್ತ ನಗರದಲ್ಲಿ ನಡೆದ ಒಂದು ಆಘಾತಕಾರಿ ಘಟನೆ ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿದೆ. 'ಲಿಟಲ್ ಅರೇಶಾ' ಎಂಬ ಡೇ-ಕೇರ್ ಕೇಂದ್ರದಲ್ಲಿ ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ 53 ಮಕ್ಕಳನ್ನು...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading