ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತೀವ್ರ ಕಾನೂನಿನ ಸಂಕಷ್ಟ ತಂದೊಡ್ಡಿದ್ದ ಮುಡಾ ಪ್ರಕರಣ ಸಂಬಂಧ ಮಾಜಿ ಆಯುಕ್ತ ದಿನೇಶ್‍ಕುಮಾರ್ ವಿರುದ್ಧ ತನಿಖೆಗೆ ಸರ್ಕಾರ ಅಸ್ತು ಎಂದಿದೆ.
ಪ್ರಕರಣದ ಪ್ರಮಖ ರೂವಾರಿ ಎಂದೇ ಹೇಳಲಾಗಿರುವ ದಿನೇಶ್‍ಕುಮಾರ್ ಮತ್ತು ಮುಡಾದ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್‍ವಿರುದ್ದ ತನಿಖೆ ನಡೆಸಲು ಅನುಮತಿ ನೀಡಬೇಕೆಂದು ಕೋರಿ ಲೋಕಾಯುಕ್ತ ತನಿಖಾಧಿಕಾರಿಗಳು ಸರ್ಕಾರಕ್ಕೆ ಮನವಿ ಮಾಡಿದ್ದರು.
ಪ್ರಕರಣದ ಗಂಭೀರತೆ ಅರಿತಿದ್ದ ರಾಜ್ಯ ಸರ್ಕಾರ, ದಿನೇಶ್‍ಕುಮಾರ್ ವಿರುದ್ದ ತನಿಖೆಗೆ ಹಸಿರುನಿಶಾನೆ ತೋರಿದೆ. ಆದರೆ ರಾಜೀವ್ ವಿರುದ್ಧದ ತನಿಖೆ ಬಾಕಿ ಉಳಿಸಿಕೊಂಡಿದೆ. ಈಗಾಗಲೇ ದಿನೇಶ್ ವಿರುದ್ಧ ಮಾತ್ರ ತನಿಖೆಗೆ ಸರ್ಕಾರ ಅನುಮತಿ ನೀಡಿದೆ. ಇ.ಡಿ ಅಧಿಕಾರಿಗಳು ದಿನೇಶ್ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ.
ಜಾರಿನಿರ್ದೇಶನಾಲಯವು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ 100 ಕೋಟಿ ರೂ. ಮೌಲ್ಯದ 92 ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿ ಮಾರುಕಟ್ಟೆ ಮೌಲ್ಯದ ಅಂದಾಜು 100 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಲಾಗಿದೆ ಎಂದು ಇಡಿ ತನ್ನ ಹೇಳಿಕೆಯಲ್ಲಿ ತಿಳಿಸಿತ್ತು.
ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳನ್ನು ವಸತಿ ಸಹಕಾರಿ ಸಂಘ ಮತ್ತು ಮುಡಾ ಅಧಿಕಾರಿಗಳು ಸೇರಿದಂತೆ ಪ್ರಭಾವಿ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿತ್ತು.
ವಿವಿಧ ಕಾನೂನುಗಳು ಮತ್ತು ಸರ್ಕಾರಿ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಮುಡಾ ಸೈಟ್‍ಗಳ ಹಂಚಿಕೆ ಮಾಡಿರುವುದು ತನಿಖೆಯಿಂದ ಬೆಳಕಿಗೆ ಬಂದಿತ್ತು.
ಮಾಜಿ ಆಯುಕ್ತ ಜಿ.ಟಿ.ದಿನೇಶ್‍ಕುಮಾರ್ ಮತ್ತು ಇತರರು ಸೇರಿಕೊಂಡು ಅನರ್ಹ ವ್ಯಕ್ತಿಗಳಿಗೆ ನಿವೇಶನ ಹಂಚಿಕೆ ಮಾಡಿದ್ದಾರೆ. ಅಕ್ರಮವಾಗಿ ಹಂಚಿಕೆ ಮಾಡಲು ನಗದು, ಚರ/ಸ್ಥಿರ ಆಸ್ತಿಗಳ ರೂಪದಲ್ಲಿ ಲಂಚ ಪಡೆದಿದ್ದಕ್ಕೆ ಸಾಕ್ಷ್ಯಗಳು ಲಭ್ಯವಾಗಿದ್ದವು.
ಅಕ್ರಮ ಹಂಚಿಕೆಗಳನ್ನು ಮಾಡಲು ಮುಡಾ ಸಹಕಾರಿ ಸಂಘದ ಅಧಿಕಾರಿಗಳ ಸಂಬಂಧಿಕರು ಸಹವರ್ತಿಗಳ ಬ್ಯಾಂಕ್ ಖಾತೆಗಳ ಮೂಲಕ ಹಣವನ್ನು ರವಾನೆ ಮಾಡಲಾಗಿತ್ತು.
ಈ ಹಿಂದೆ 300 ಕೋಟಿ ರೂ. ಮೌಲ್ಯ 160 ಮುಡಾ ನಿವೇಶನಗಳನ್ನು ಮುಟ್ಟುಗೋಲು ಹಾಕಲಾಗಿತ್ತು. ಇಲ್ಲಿಯವರೆಗೆ ಒಟ್ಟು 400 ಕೋಟಿ ರೂ. ಮೌಲ್ಯದ ಮುಡಾ ನಿವೇಶನಗಳನ್ನು ಮುಟ್ಟುಗೋಲು ಹಾಕಲಾಗಿತ್ತು.
2022ರಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಜಿ.ಟಿ.ದಿನೇಶ್‍ಕುಮಾರ್ ಅವರು ಅಧಿಕಾರ ಸ್ವೀಕರಿಸಿದ್ದರು. ಮುಡಾದಲ್ಲಿ 50:50 ಅನುಪಾತದಡಿ ಸೈಟ್ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದರಿಂದ ರಾಜ್ಯ ಸರ್ಕಾರ ಅವರನ್ನು ವರ್ಗಾವಣೆ ಮಾಡಿದ ಬೆನ್ನಲ್ಲೇ ಅಮಾನತ್ತು ಮಾಡಿತ್ತು.
ಧರ್ಮಸ್ಥಳ: ದೂರು ಕೊಟ್ಟರೂ ತನಿಖೆ ನಡೆಸದ ಎಸ್‌ಐಟಿ; ಹೈಕೋರ್ಟ್ ಮೆಟ್ಟಿಲೇರಿದ ಇಬ್ಬರು ದೂರುದಾರರು!
ಎಐ ಅಡ್ವೋಕೇಟ್ ಅಸಿಸ್ಟೆಂಟ್ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


