ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಮನೆಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಎಫ್ಐಆರ್ ದಾಖಲಾಗಿದೆ.
ನಿಮ್ಮ ಮನೆಗೆ ಆರ್ಡಿಎಕ್ಸ್ ಬಾಂಬ್ ಇಟ್ಟಿದ್ದೇವೆ. ಅದು ಸ್ಪೋಟಗೊಳ್ಳುತ್ತದೆ ಎಂದು ಇ-ಮೇಲ್ ಕಳುಹಿಸಲಾಗಿದೆ.
ಅರ್ನಾ ಅಶ್ವಿನ್ ಶೇಖರ್ ಎಂಬ ಇಮೇಲ್ ಐಡಿಯಿಂದ ಬೆದರಿಕೆ ಕರೆ ಬಂದಿದೆ. ನಂತರ ಪೊಲೀಸರು ನಿವಾಸಕ್ಕೆ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಬಳಿಕ ಅದು ಹುಸಿ ಬಾಂಬ್ ಸಂದೇಶ ಎಂದು ಗೊತ್ತಾಗಿದೆ.
ಹುಸಿ ಬಾಂಬ್ ಕರೆ ಬಂದ ಹಿನ್ನೆಲೆಯಲ್ಲಿ ಅಶ್ವಥ್ ನಾರಾಯಣಸ್ವಾಮಿ ಎಂಬುವವರು ನೀಡಿದ ದೂರಿನ ಮೇರೆಗೆ ಹಲಸೂರು ಗೇಟ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.
ಚಾಮುಂಡಿಬೆಟ್ಟಕ್ಕೆ ನಟ ರಿಷಬ್ ಶೆಟ್ಟಿ ಭೇಟಿ; ಕಾಂತಾರ ಯಶಸ್ಸನ್ನು ಕನ್ನಡಿಗರಿಗೆ ಅರ್ಪಿಸಿದ ರಿಷಬ್
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


