ಬೆಳಗಾವಿ: ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ್ದ ನೀಚ ಕೃತ್ಯದ ನೆನಪು ಮಾಸುವ ಮುನ್ನವೇ ಜಿಲ್ಲೆಯಲ್ಲಿ ಅಂತಹದ್ದೇ ಮತ್ತೊಂದು ಅಮಾನವೀಯ ಘಟನೆ ನಡೆದಿದೆ.
ಹೌದು, ವಡ್ಡರವಾಡಿ ಎಂಬ ಮಹಿಳೆಯೊಬ್ಬರ ಮೇಲೆ ವೇಷ್ಯಾವಾಟಿಕೆ ಆರೋಪ ಹೊರಿಸಿ ಹಲ್ಲೆ ನಡೆಸಿದ್ದಾರೆ. ಅಲ್ಲದೇ ಆಕೆಯ ಬಟ್ಟೆಯನ್ನು ಸಾರ್ವಜನಿಕವಾಗಿ ಹರಿದು ಹಾಕಿ ಅಮಾನವೀಯತೆ ಮೆರೆದಿದ್ದಾರೆ. ಇನ್ನು ನೆರೆ ಮನೆಯ ಜನರೇ ಹಲ್ಲೆ ಮಾಡಿದ್ದಾರೆ ಎನ್ನಲಾಗಿದ್ದು, ಮೊಬೈಲ್ ಕ್ಯಾಮೆರಾದಲ್ಲಿ ವಿಕೃತ ದೃಶ್ಯ ಸೆರೆಯಾಗಿದೆ.
ಇನ್ನು ಆರಂಭದಲ್ಲಿ ಈ ಕುರಿತು ದೂರು ದಾಖಲಿಸಿಕೊಳ್ಳಲು ಪೊಲೀಸರು ಹಿಂದೇಟು ಹಾಕಿದ್ದರು ಎಂಬ ಆರೋಪವಿದ್ದು, ಸದ್ಯ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


