Monday, November 2, 2026
spot_img
More
    spot_img
    HomeBreaking Newsನನ್ನ ಹೇಳಿಕೆಯಿಂದ ಯಾವುದೇ ಹಾನಿ ಇಲ್ಲ, ಯೋಗೇಶ್ವರ್‌ 20 ಸಾವಿರ ಅಂತರದಿಂದ ಗೆಲ್ತಾರೆ: ಜಮೀರ್‌

    ನನ್ನ ಹೇಳಿಕೆಯಿಂದ ಯಾವುದೇ ಹಾನಿ ಇಲ್ಲ, ಯೋಗೇಶ್ವರ್‌ 20 ಸಾವಿರ ಅಂತರದಿಂದ ಗೆಲ್ತಾರೆ: ಜಮೀರ್‌

    ಚನ್ನಪಟ್ಟಣ ಉಪಚುನಾವಣೆ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಸದ್ಯ ಎಲ್ಲರ ಚಿತ್ತ ಫಲಿತಾಂಶದತ್ತ ನೆಟ್ಟಿದೆ. ಕಾಂಗ್ರೆಸ್‌ನಿಂದ ಸಿಪಿ ಯೋಗೇಶ್ವರ್‌ ಹಾಗೂ ಜೆಡಿಎಸ್‌ – ಎನ್‌ಡಿಎ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಕಣಕ್ಕಿಳಿದಿದ್ದರು.

    ಇನ್ನು ಚುನಾವಣೆ ಸಂದರ್ಭದಲ್ಲಿ ಮತಬೇಟೆಗೆ ಇಳಿದ ಎರಡೂ ಪಕ್ಷಗಳ ನಾಯಕರು ಎಂದಿನಂತೆ ಪರಸ್ಪರ ವಾಗ್ದಾಳಿ ಮಾಡಿ ಪ್ರಚಾರ ಮಾಡಿದ್ದರು. ಆದರೆ ಈ ಸಂದರ್ಭದಲ್ಲಿ ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಮತ್ತು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ನಡುವೆ ನಿರೀಕ್ಷೆಗೂ ಮೀರಿದ ವಾಕ್ಸಮರ ನಡೆದಿದೆ.

    ಹೌದು, ಜಮೀರ್‌ ಅಹ್ಮದ್‌ ಖಾನ್‌ ಕುಮಾರಸ್ವಾಮಿ ಅವರನ್ನು ಕರಿಯ ಎಂದಿದ್ದರು, ಅಲ್ಲದೇ ಒಕ್ಕಲಿಗ ಸಮುದಾಯದ ಕುರಿತು ಕೀಳಾಗಿ ಮಾತನಾಡಿದ್ದಾರೆ ಎಂಬ ಆರೋಪವೂ ಕೇಳಿಬಂದಿತ್ತು. ಈ ವಿಚಾರವಾಗಿ ಹಲವು ನಾಯಕರು ಇಂದಿಗೂ ಸಹ ಹೇಳಿಕೆ ನೀಡುತ್ತಲೇ ಇದ್ದಾರೆ ಹಾಗೂ ಚರ್ಚೆಗಳು ನಡೆಯುತ್ತಲೇ ಇವೆ.

    ಇನ್ನು ಜಮೀರ್‌ ಅವರ ಈ ಹೇಳಿಕೆಯಿಂದ ಯೋಗೇಶ್ವರ್‌ ಅವರಿಗೆ ಚುನಾವಣೆಯಲ್ಲಿ ಹಿನ್ನಡೆಯಾಗಬಹುದು ಎಂದು ಕೆಲವರು ಮಾತನಾಡಿಕೊಳ್ಳುತ್ತಿದ್ದಾರೆ. ಈ ಕುರಿತು ಸ್ವತಃ ಜಮೀರ್‌ ಅಹ್ಮದ್ ಖಾನ್‌ ಪ್ರತಿಕ್ರಿಯಿಸಿದ್ದು, ನನ್ನ ಹೇಳಿಕೆಯಿಂದ ಯೋಗೇಶ್ವರ್‌ ಅವರಿಗೆ ಯಾವುದೇ ಹಾನಿಯಾಗಲ್ಲ, ಅವರು 20 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮತ್ತೊಮ್ಮೆ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search