ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಕರಿಯ ಎಂದಿದ್ದ ಸಚಿವ ಜಮೀರ್ ಅಹಮ್ಮದ್ ಖಾನ್ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಸಮಾಧಾನ ಹೊರಹಾಕಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಜಮೀರ್ ಅವರು ಹೇಳಿಕೆ ನೀಡಿರುವುದನ್ನು ಒಪ್ಪುವುದಿಲ್ಲ. ಅವರ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಸಮಾಜದಲ್ಲಿ ಕಪ್ಪು-ಬಿಳುಪು ಎಂದು ಯಾರನ್ನು ನಿಂದಿಸಬಾರದು. ಕುಮಾರಸ್ವಾಮಿ ಅವರ ಬಗ್ಗೆ ಜಮೀರ್ ಅಹಮ್ಮದ್ ಖಾನ್ ಈ ರೀತಿ ಮಾತನಾಡಬಾರದಿತ್ತು. ಯಾವ ಅರ್ಥದಲ್ಲಿ ಆ ಪದ ಬಳಸಿದ್ದರೂ ಅದು ತಪ್ಪೇ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಜಮೀರ್ ಅಹಮ್ಮದ್‌ಗೆ ಆಂತರಿಕವಾಗಿ ಹೇಳಿದ್ದೇನೆ. ಮುಂದೆ ಜಮೀರ್‌ರನ್ನು ತಿದ್ದುವ ಕೆಲಸ ಮಾಡುತ್ತೇವೆ ಎಂದು ಹೇಳುವ ಮೂಲಕ ಜಮೀರ್ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


