Tuesday, August 4, 2026
spot_img
More
    spot_img
    HomeBreaking Newsನಾನು ಮಠದ ಹುಡುಗ, ಆದಿಚುಂಚನಗಿರಿ ಸ್ವಾಮೀಜಿ ಮಡಿಲಲ್ಲಿ ಬೆಳೆದವನು: ಜಮೀರ್‌

    ನಾನು ಮಠದ ಹುಡುಗ, ಆದಿಚುಂಚನಗಿರಿ ಸ್ವಾಮೀಜಿ ಮಡಿಲಲ್ಲಿ ಬೆಳೆದವನು: ಜಮೀರ್‌

    ಮಂಗಳೂರು: ಕುಮಾರಸ್ವಾಮಿ ಹಾಗೂ ಜಮೀರ್‌ ಅಹ್ಮದ್‌ ನಡುವೆ ಚನ್ನಪಟ್ಟಣ ಉಪಚುನಾವಣೆಯಿಂದಲೂ ವಾಕ್ಸಮರ ನಡೆಯುತ್ತಿದ್ದು, ಚುನಾವಣೆ ಮುಗಿದ ನಂತರವೂ ಇದು ಮುಂದುವರಿದಿದೆ. ಜಮೀರ್‌ ಅಹ್ಮದ್‌ ಖಾನ್‌ ಕುಮಾರಸ್ವಾಮಿ ಹಾಗೂ ಅವರ ಕುಟುಂಬದ ಕುರಿತಾಗಿ ನೀಡಿರುವ ಹೇಳಿಕೆ ಕುರಿತು ಪ್ರತಿಭಟನೆಗಳೂ ಸಹ ನಡೆದಿವೆ.

    Advertisement

    ಸದ್ಯ ಈ ವಿವಾದದ ಕುರಿತು ಪ್ರತಿಕ್ರಿಯಿಸಿರುವ ಜಮೀರ್‌ ಅಹ್ಮದ್‌ ಒಕ್ಕಲಿಗರ ಬಗ್ಗೆ ನನಗೆ ಗೌರವವಿದೆ, ನಾನು ವೈಯಕ್ತಿಕವಾಗಿ ಕುಮಾರಸ್ವಾಮಿಗೆ ಹೇಳಿರುವುದು ಎಂದು ಸ್ಪಷ್ಟನೆ ನೀಡಿದ್ದಾರೆ.

    ಕರಿಯ ಎಂದು ಕುಮಾರಸ್ವಾಮಿ ಅವರನ್ನು ನಿಂದಿಸಿದ್ದರ ಕುರಿತು ಮಾತನಾಡಿದ ಜಮೀರ್‌ ನಾನು ದೇವೇಗೌಡರ ಕುಟುಂಬವನ್ನು ಖರೀದಿ ಮಾಡ್ತೀನಿ ಅಂತ ಹೇಳಿಲ್ಲ. ಕುಮಾರಸ್ವಾಮಿ ಅವರು ಮುಸ್ಲಿಂ ಮತ ನನಗೆ ಬೇಕಾಗಿಲ್ಲ ಎಂದರು. ಈ ಹಿನ್ನಲೆಯಲ್ಲಿ ನಾನು ಹೇಳಿಕೆ ನೀಡಿದ್ದು. ಮುಸ್ಲಿಂ ವೋಟ್‌ ಬೇಡ ಎಂದು ಹೇಳಿಎ ದುಡ್ಡು ಕೊಟ್ಟು ಖರೀದಿ ಮಾಡುತ್ತಿದ್ದೀರಲ್ಲ ಇದು ಎಷ್ಟು ಸರಿ ಅಂತ ಕೇಳಿದ್ದು ಎಂದು ಹೇಳಿದರು.

    ಮುಸ್ಲಿಮರು ಪಂಚರ್‌ ಹಾಕುವವರು, ವೆಲ್ಡಿಂಗ್‌ ಮಾಡುವವರು ಎಂದು ಲಘುವಾಗಿ ಮಾತನಾಡುತ್ತಾರೆ. ಹೀಗಾಗಿ ಯಾಕೆ ಅವರ ಬಳಿ ಬಂದು ವೋಟ್‌ ಕೇಳುತ್ತೀರಿ. ಕುಮಾರಸ್ವಾಮಿಗೆ ಅದೇ ನನ್ನ ಪ್ರಶ್ನೆ. ಕುಮಾರಸ್ವಾಮಿ ಯಾವಾಗ ಸತ್ಯ ಹೇಳಿದ್ದಾರೆ? ಯೂ ಟರ್ನ್‌ ಕುಮಾರಸ್ವಾಮಿ ಅಂತ ಅವರ ಹೆಸರಿದೆ. ಯಾವಾಗ ಬೇಕಾದರೂ ಹೇಗೆ ಬೇಕಾದರೂ ಟರ್ನ್‌ ಮಾಡುತ್ತಾರೆ ಎಂದು ಹೇಳಿಕೆ ನೀಡಿದರು.

    ಇನ್ನು ತಾವು ಜನತಾದಳ ಸೇರಿದ ದಿನಗಳ ಕುರಿತು ಮೆಲುಕು ಹಾಕಿದ ಜಮೀರ್‌ ಅಹ್ಮದ್‌ ನಾನು ಜನತಾದಳಕ್ಕೆ ಬರಲು ಕಾರಣ ಆದಿ ಚುಂಚನಗಿರಿ ಸ್ವಾಮೀಜಿ, ನಾನು ಮಠದ ಹುಡುಗ, ಆದಿಚುಂಚನಗಿರಿ ಮಠದಲ್ಲಿ ಬೆಳದವನು ನಾನು. ಶೇಖರ್‌ ಸ್ವಾಮೀಜಿ ಬಳಿ ಕೇಳಲು ಹೇಳಿ, ಪ್ರತಿ ಶನಿವಾರ ನಾನು ಬೆಳಗ್ಗೆಯಿಂದ ಸಂಜೆವರೆಗೂ ಮಠದಲ್ಲಿಯೇ ಇರುತ್ತೇನೆ. ನಾನು ಸ್ವಾಮೀಜಿ ಮಡಿಲಲ್ಲಿ ಬೆಳೆದವನು ಬೇಕಿದ್ದರೆ ಕುಮಾರಸ್ವಾಮಿ ಅವರನ್ನೇ ಕೇಳಿ ಎಂದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading