ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಸಂಬಂಧ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್‌ಗೆ ಬಿಗ್ ಶಾಕ್ ಎದುರಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ನೋಟಿಸ್ ನೀಡಿದೆ.
ಬರುವ ತಿಂಗಳ ಡಿಸೆಂಬರ್.3ರಂದು ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗಲೇಬೇಕೆಂದು ಲೋಕಾಯುಕ್ತ ಖಡಕ್ ಎಚ್ಚರಿಕೆ ನೀಡಿದೆ.
ಕಳೆದ ಮೂರು ವರ್ಷಗಳ ಇ.ಡಿ ವರದಿ ಆಧರಿಸಿ ಜಮೀರ್ ಅಹಮ್ಮದ್‌ಗೆ ನೋಟಿಸ್ ನೀಡಲಾಗಿದ್ದು, ಒಂದು ವೇಳೆ ವಿಚಾರಣೆಗೆ ಹಾಜರಾಗದಿದ್ದರೆ ಸೂಕ್ತ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಕರಣದ ಹಿನ್ನೆಲೆ:
3 ವರ್ಷಗಳ ಹಿಂದಿನ ಇ.ಡಿ ವರದಿ ಆಧರಿಸಿ ಸಚಿವ ಜಮೀರ್ ಅಹಮ್ಮದ್ ಖಾನ್‌ಗೆ ನೋಟಿಸ್ ನೀಡಲಾಗಿದ್ದು, ಜಮೀರ್ ವಿರುದ್ಧ ಇ.ಡಿ ಅಧಿಕಾರಿಗಳು ಎಸಿಬಿಯಲ್ಲಿ ಕೇಸ್ ದಾಖಲಿಸಿದ್ದರು. ಎಸಿಬಿ ರದ್ದಾದ ಬಳಿಕ ಲೋಕಾಯುಕ್ತದಿಂದ ತನಿಖೆ ನಡೆದಿದ್ದು, ಲೋಕಾಯುಕ್ತ ತನಿಖೆ ಮುಗಿದ ಬೆನ್ನಲ್ಲೇ ಇದೀಗ ಡಿಸೆಂಬರ್.3ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.
ಈ ಮೂಲಕ ಉಪಚುನಾವಣೆಗಳಲ್ಲಿ ತನ್ನದೇ ಹೇಳಿಕೆಗಳ ಮೂಲಕ ಭಾರೀ ಸುದ್ದಿಯಲ್ಲಿದ್ದ ಸಚಿವ ಜಮೀರ್ ಅಹಮ್ಮದ್ ಖಾನ್‌ಗೆ ಬಿಗ್ ಶಾಕ್ ಎದುರಾಗಿದ್ದು, ಡಿಸೆಂಬರ್.3ರ ನಂತರ ರಾಜಕೀಯ ಬೆಳವಣಿಗೆ ಮತ್ತೊಂದು ತಿರುವು ಪಡೆದುಕೊಳ್ಳಲಿದೆ ಎನ್ನಲಾಗುತ್ತಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


