Friday, November 6, 2026
spot_img
More
    spot_img
    HomeBreaking Newsಪ್ರಧಾನಿ ನರೇಂದ್ರ ಮೋದಿ ಬರ್ತಾರೆ, ಹಸಿ ಸುಳ್ಳು ಹೇಳಿ ಹೋಗ್ತಾರೆ ಎಂದ ಸಿಎಂ ಸಿದ್ದರಾಮಯ್ಯ

    ಪ್ರಧಾನಿ ನರೇಂದ್ರ ಮೋದಿ ಬರ್ತಾರೆ, ಹಸಿ ಸುಳ್ಳು ಹೇಳಿ ಹೋಗ್ತಾರೆ ಎಂದ ಸಿಎಂ ಸಿದ್ದರಾಮಯ್ಯ

    ಮಹಾರಾಷ್ಟ್ರ: ಸುಳ್ಳು ಹೇಳುವುದರಲ್ಲಿ ಪ್ರಧಾನಿ ನರೇಂದ್ರ ಮೋದಿ ನಿಸ್ಸೀಮರು ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

    ಈ ಕುರಿತು ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಪಂಡರಪುರ ಮಂಗಳ್‌ ವೇಡಾದಲ್ಲಿ ಆಯೋಜಿಸಿದ್ದ ರಾಜ್ಯ ಕಾಂಗ್ರೆಸ್‌ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಇಲ್ಲಿ ಕಾಂಗ್ರೆಸ್‌ ಗೆಲ್ಲಿಸಬೇಕು ಎಂದು ಮಹಾರಾಷ್ಟ್ರ ಜನತೆಗೆ ಕರೆ ನೀಡಿದರು.

    ಇನ್ನು ಪ್ರಧಾನಿ ನರೇಂದ್ರ ಮೋದಿಯವರು ಕೇವಲ ಅಂಬಾನಿ, ಅದಾನಿಯವರ ಸಂಪತ್ತು ಹೆಚ್ಚಿಸಲು ಕೆಲಸ ಮಾಡುತ್ತಿದ್ದಾರೆ. ಆದರೆ ಬಡವರ, ರೈತರ, ಕಾರ್ಮಿಕರ, ಶ್ರಮಿಕರ ಬದುಕನ್ನು ಸುಧಾರಿಸಲು ಒಂದೇ ಒಂದು ಕಾರ್ಯಕ್ರಮವನ್ನೂ ಮಾಡಿಲ್ಲ ಎಂದು ಕಿಡಿಕಾರಿದರು.

    ಸ್ವಾತಂತ್ರ್ಯ ಭಾರತದಲ್ಲಿ ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿ ಹಿಂದೆಂದೂ ಬಂದಿರಲಿಲ್ಲ. ಅಬಕಾರಿ ಇಲಾಖೆಯಲ್ಲಿ 700 ಕೋಟಿ ಲಂಚ ಪಡೆದು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಚುನಾವಣೆ ನಡೆಸುತ್ತಿದೆ ಎಂದು ಹಸಿಸುಳ್ಳು ಹೇಳಿದ್ದಾರೆ. ಇದನ್ನು ಸಾಬೀತು ಮಾಡಿದರೆ ನಾನು ಆ ಕ್ಷಣವೇ ರಾಜಕೀಯ ನಿವೃತ್ತಿ ಪಡೆಯಲು ಸಿದ್ಧ ಎಂದು ಸವಾಲು ಹಾಕಿದರು.

    ಇನ್ನು ಮುಂದುವರಿದು ಮಾತನಾಡಿದ ಅವರು, ಭಾರತದ ರೈತರು ಸಾಲ ಮನ್ನಾ ಮಾಡಿ ಎಂದು ಮೋದಿಯವರಿಗೆ ಕೇಳಿದರೆ, ಮೋದಿ ಮಾಡಿದ್ದೇನು? ರೈತರಿಗೆ ಒಂದೇ ಒಂದು ರೂಪಾಯಿ ಸಾಲಮನ್ನಾ ಮಾಡಲಿಲ್ಲ. ಬಿಜೆಪಿಯವರು ರೈತರ ಸಾಲಮನ್ನಾ ಮಾಡಿ ಎಂದರೆ, ನಮ್ಮ ಬಳಿ ನೋಟು ಪ್ರಿಂಟ್‌ ಹಾಕುವ ಯಂತ್ರ ಇಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search