ಬೆಂಗಳೂರು: ರಾಜ್ಯದಲ್ಲಿ ಭಾರೀ ಚರ್ಚೆಯಾಗುತ್ತಿರುವ ಮುಡಾ ಟೆನ್ಷನ್ ಮಧ್ಯೆಯೂ ಸಿಎಂ ಸಿದ್ದರಾಮಯ್ಯ ಅವರು, ಅಹಿಂದ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.
ಮುಂದಿನ ಡಿಸೆಂಬರ್.5ರಂದು ಹಾಸನದಲ್ಲಿ ಅಹಿಂದ ಸಮಾವೇಶ ನಡೆಸಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು, ಚಾಮರಾಜನಗರ, ಕೊಡಗು, ಮಂಡ್ಯ, ಹಾಸನ ಸೇರಿದಂತೆ ಐದು ಜಿಲ್ಲೆಗಳನ್ನೊಳಗೊಂಡಂತೆ ದೊಡ್ಡ ಮಟ್ಟದಲ್ಲಿ ಅಹಿಂದ ಸಮಾವೇಶ ನಡೆಸಲು ಸಿದ್ದರಾಮಯ್ಯ ಮುಂದಾಗಿದ್ದು, ಇದಕ್ಕಾಗಿ ಸರ್ವ ರೀತಿಯಲ್ಲೂ ತಯಾರಿ ನಡೆಸಲಾಗುತ್ತಿದೆ ಎನ್ನಲಾಗಿದೆ.
ಇನ್ನು ಆಪ್ತರೆಲ್ಲರ ಮುಂದೆ ಶಕ್ತಿ ಪ್ರದರ್ಶನ ಮಾಡಲು ಮುಂದಾಗಿರುವ ಸಿಎಂ ಸಿದ್ದರಾಮಯ್ಯ ಅವರು, ಸಚಿವರುಗಳಿಗೆಲ್ಲಾ ಕರೆ ಮಾಡಿ ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಸಮಾವೇಶದ ಉಸ್ತುವಾರಿಯನ್ನು ಸಚಿವರಾದ ಎಚ್.ಸಿ.ಮಹದೇವಪ್ಪ ಹಾಗೂ ಕೆ.ಎನ್.ರಾಜಣ್ಣ ಅವರಿಗೆ ನೀಡಿದ್ದಾರೆ.
ಈ ಮೂಲಕ ಹಳೆ ಮೈಸೂರು ಭಾಗದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತೊಂದು ಸಾಹಸಕ್ಕೆ ಮುಂದಾಗಿದ್ದು, ವಿಪಕ್ಷಗಳ ಆತಂಕಕ್ಕೆ ಗುರಿಯಾಗಿದೆ ಎನ್ನಲಾಗುತ್ತಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


