Tuesday, August 4, 2026
spot_img
More
    spot_img
    HomeStateಮೈಸೂರು ಮುಡಾದಲ್ಲಿ ಕಾನೂನು ಬಾಹಿರ ಖಾತೆ ಕಂದಾಯ ರದ್ದು

    ಮೈಸೂರು ಮುಡಾದಲ್ಲಿ ಕಾನೂನು ಬಾಹಿರ ಖಾತೆ ಕಂದಾಯ ರದ್ದು

    ಮೈಸೂರು: ರಾಜ್ಯದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ದಿನದಿಂದ ದಿನಕ್ಕೆ ಭಾರೀ ಸದ್ದು ಮಾಡುತ್ತಿದ್ದು, ಇದೀಗ ಕಾನೂನು ವಿರುದ್ಧ ಮಾಡುತ್ತಿದ್ದ ಖಾತೆ, ಕಂದಾಯವನ್ನು ರದ್ದುಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

    Advertisement

    ನಗರಾಭಿವೃದ್ಧಿ ಕಾಯ್ದೆಯ ಪ್ರಕಾರ ಕೆಲಸ ಮಾಡಲು ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಸೂಚನೆ ನೀಡಿದ್ದಾರೆ. ನಗರಾಭಿವೃದ್ಧಿ ಕಾಯ್ದೆಯ ಪ್ರಕಾರ ಮುಡಾದಲ್ಲಿ ಖಾತೆ ಕಂದಾಯ ಮಾಡುವಂತಿಲ್ಲ. ಹೀಗಿದ್ದರೂ ಮುಡಾದಲ್ಲಿ ಅಧಿಕಾರಿಗಳು ಖಾತೆ ಕಂದಾಯ ಮಾಡುತ್ತಿದ್ದರು. ಇದೀಗ ಇದನ್ನು ರದ್ದುಗೊಳಿಸಲಾಗಿದೆ.

    ಸದ್ಯ ಕಾರ್ಪೋರೇಷನ್‌, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌ಗೆ ಅಧಿಕಾರ ಹಸ್ತಾಂತರ ಮಾಡಲಾಗಿದ್ದು, ಮುಡಾ ಸೈಟುಗಳ ಖಾತೆ ಕಂದಾಯ ಮಾಡಲು ಸ್ಥಳೀಯ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ.

    ಈ ಮೂಲಕ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಇಷ್ಟು ದಿನ ಮಾಡುತ್ತಿದ್ದ ಖಾತೆ ಕಂದಾಯ ಸೇರಿ ಇತರೆ ಸೇವೆ ಸಂಪೂರ್ಣ ಸ್ಥಗಿತವಾಗಿದ್ದು, ಕೇವಲ ಡೆವಲಪ್ಮೆಂಟ್‌ ವರ್ಕ್‌ ಸೇವೆ ಮಾತ್ರ ಲಭ್ಯವಿರಲಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading