ಭಾರತ ಪ್ರವಾಸವನ್ನು ಕೈಗೊಂಡಿರುವ ದಕ್ಷಿಣ ಆಫ್ರಿಕಾ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಲ್ಗೊಂಡಿದ್ದು, ಮೊದಲ ಪಂದ್ಯದಲ್ಲಿ ಭಾರತ ಹೀನಾಯ ಸೋಲನ್ನು ಕಂಡು ಭಾರೀ ಮುಖಭಂಗಕ್ಕೊಳಗಾಗಿದೆ.
ಕೊಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ದಕ್ಷಿಣ ಆಫ್ರಿಕಾ ಮೊದಲ ಇನ್ನಿಂಗ್ಸ್‌ನಲ್ಲಿ 159 ರನ್‌ಗಳಿಗೆ ಆಲ್‌ಔಟ್ ಆಗಿತ್ತು. ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 189 ರನ್‌ಗಳಿಗೆ ಆಲ್‌ಔಟ್ ಆಗಿ ಮೊದಲ ಇನ್ನಿಂಗ್ಸ್‌ನಲ್ಲಿ 30 ರನ್‌ಗಳ ಮುನ್ನಡೆ ಸಾಧಿಸಿತ್ತು. ಬಳಿಕ ಎರಡನೇ ಇನ್ನಿಂಗ್ಸ್‌ನಲ್ಲಿ 153 ರನ್ ಕಲೆಹಾಕಿದ ಭಾರತ ದಕ್ಷಿಣ ಆಫ್ರಿಕಾಗೆ 124 ರನ್‌ಗಳ ಗುರಿಯನ್ನು ನೀಡಿತ್ತು. ಈ ಸುಲಭ ಗುರಿಯನ್ನು ಬೆನ್ನಟ್ಟಲಾಗದ ಭಾರತ ಆಫ್ರಿಕಾ ಬೌಲಿಂಗ್ ದಾಳಿ ಮುಂದೆ ಮಂಕಾಗಿ ಕೇವಲ 93 ರನ್‌ಗಳಿಗೆ ಆಲ್‌ಔಟ್ ಆಗಿ 30 ರನ್‌ಗಳ ಹೀನಾಯ ಸೋಲನ್ನು ಕಂಡಿದೆ.
ಈ ಮೂಲಕ ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಮುನ್ನಡೆ ಸಾಧಿಸಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


