ಬೆಳಗಾವಿ: ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ಕಿರುಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸರಣಿ ಮುಂದುವರಿದಿದೆ.
ಇಂದು ಮತ್ತೊಂದು ಕೃಷ್ಣಮೃಗ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.
ಇದೇ ನವೆಂಬರ್.13ರಂದು 8 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ನಿನ್ನೆ ಒಂದೇ ದಿನ 20 ಕೃಷ್ಣಮೃಗಗಳು ಸಾವನ್ನಪ್ಪಿದ್ದವು. ಇಂದು ಮತ್ತೊಂದಯ ಕೃಷ್ಣಮೃಗ ಮೃತಪಟ್ಟಿದೆ. ಕೃಷ್ಣಮೃಗಗಳ ನಿಗೂಢ ಸಾವಿನಿಂದ ಮೃಗಾಲಯದಲ್ಲಿ ಆತಂಕ ಮನೆಮಾಡಿದ್ದು, ಇತರ ಪ್ರಾಣಿಗಳ ಮೇಲೆ ತೀವ್ರ ನಿಗಾ ಇಡಲಾಗಿದೆ.
ಮೃಗಾಲಯಕ್ಕೆ ಬನ್ನೇರುಘಟ್ಟ ಪಶು ವಿಜ್ಞಾನ ವಿದ್ಯಾಲಯದ ತಜ್ಞರ ತಂಡ ಭೇಟಿ ನೀಡಿದ್ದು, ಕೃಷ್ಣಮೃಗಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮರಣೋತ್ತರ ಪರೀಕ್ಷಾ ವರದಿ ಬಂದ ಬಳಿಕವಷ್ಟೇ ಕೃಷ್ಣಮೃಗಗಳ ಸಾವಿಗೆ ಖಚಿತ ಮಾಹಿತಿ ಲಭ್ಯವಾಗಲಿದೆ. ಈ ಬೆನ್ನಲ್ಲೇ ಮೃಗಾಲಯದಲ್ಲಿರುವ ಉಳಿದ 9 ಕೃಷ್ಣಮೃಗಗಳಿಗೆ ಮುಂಜಾಗ್ರತಾ ಕ್ರಮವಾಗಿ ತಪಾಸಣೆ, ಚಿಕಿತ್ಸೆ ನೀಡಲಾಗುತ್ತಿದೆ.
ಬಿಹಾರ ಚುನಾವಣೆ ಫಲಿತಾಂಶ: 238 ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಎಲ್ಲಿಯೂ ಗೆಲ್ಲದೇ ಸೊನ್ನೆ ಸುತ್ತಿದ ಪಕ್ಷ!
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


