Friday, November 6, 2026
spot_img
More
    spot_img
    HomeLatest newsತಮಿಳುನಾಡು ವಿಧಾನಸಭೆ ಚುನಾವಣೆ 2026: ಮೊದಲ ಹೆಜ್ಜೆ ಇಟ್ಟ ಬಿಜೆಪಿ!

    ತಮಿಳುನಾಡು ವಿಧಾನಸಭೆ ಚುನಾವಣೆ 2026: ಮೊದಲ ಹೆಜ್ಜೆ ಇಟ್ಟ ಬಿಜೆಪಿ!

    ತಮಿಳುನಾಡು ವಿಧಾನಸಭೆ ಚುನಾವಣೆ 2026ಕ್ಕೆ ಬಿಜೆಪಿ ಮೊದಲ ಹೆಜ್ಜೆ ಇಟ್ಟಿದೆ. 234 ಸದಸ್ಯ ಬಲದ ವಿಧಾನಸಭೆಗೆ ಏಪ್ರಿಲ್ ಅಥವ ಮೇ ತಿಂಗಳಿನಲ್ಲಿ ಚುನಾವಣೆ ನಡೆಯಲಿದೆ. ರಾಜ್ಯದ ಆಡಳಿತ ಪಕ್ಷ ಡಿಎಂಕೆ, ಹಾಲಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್.

    ಬಿಜೆಪಿ ತಮಿಳುನಾಡು ವಿಧಾನಸಭೆ ಚುನಾವಣೆ 2026ಯನ್ನು ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ ಚುನಾವಣಾ ಉಸ್ತುವಾರಿ ಮತ್ತು ಸಹ ಉಸ್ತುವಾರಿಗಳನ್ನು ನೇಮಕ ಮಾಡುವ ಮೂಲಕ ಚುನಾವಣಾ ತಯಾರಿಯನ್ನು ಆರಂಭಿಸಿದೆ.

    ಬಿಜೆಪಿ ತಮಿಳುನಾಡು ವಿಧಾನಸಭೆ ಚುನಾವಣೆ 2026ಕ್ಕೆ ಉಸ್ತುವಾರಿಯಾಗಿ ಕೇಂದ್ರ ಸಚಿವ ಪಿಯೂಷ್ ಘೋಯಲ್ ನೇಮಕ ಮಾಡಿದೆ. ಸಹ ಉಸ್ತುವಾರಿಗಳಾಗಿ ಅರ್ಜುನ್ ರಾಮ್ ಮೇಘಾವಾಲ್ ಮತ್ತು ಮುರಳೀಧರ್ ಮೋಹಲ್ ನೇಮಕಗೊಂಡಿದ್ದಾರೆ.

    ತಮಿಳುನಾಡು ವಿಧಾನಸಭೆ ಚುನಾವಣೆಗಾಗಿ ಬಿಜೆಪಿ ದಿ.ಜಯಲಲಿತಾ ನೇತೃತ್ವದ ಎಐಎಡಿಎಂಕೆ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡಿದೆ. ಎರಡೂ ಪಕ್ಷಗಳು ಸೀಟು ಹೊಂದಾಣಿಕೆ ಮಾಡಿಕೊಂಡು ಚುನಾವಣೆಯನ್ನು ಎದುರಿಸಲಿವೆ.

    ರಾಜ್ಯದ ಆಡಳಿ ಪಕ್ಷ ಡಿಎಂಕೆ ಮತ್ತು ಕಾಂಗ್ರೆಸ್ ಮೈತ್ರಿಕೂಟ, ಬಿಜೆಪಿ ಮತ್ತು ಎಐಎಡಿಎಂಕೆ ಮೈತ್ರಿಕೂಟ ಹಾಗೂ ನಟ ವಿಜಯ್ ನೇತೃತ್ವದ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ನಡುವೆ ಚುನಾವಣೆಯಲ್ಲಿ ಭಾರೀ ಪೈಪೋಟಿ ನಿರೀಕ್ಷೆ ಮಾಡಲಾಗಿದೆ. ಆದ್ದರಿಂದ ತಮಿಳುನಾಡು ವಿಧಾನಸಭೆ ಚುನಾವಣೆ ದೇಶದ ಗಮನ ಸೆಳೆದಿದೆ.

    ಡಿಎಂಕೆ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂದು ನಟ ವಿಜಯ್ ನೇತೃತ್ವದ ಟಿವಿಕೆ, ಬಿಜೆಪಿ ಮತ್ತು ಎಐಎಡಿಎಂಕೆ ಪಕ್ಷಗಳು ಕಾರ್ಯತಂತ್ರವನ್ನು ರೂಪಿಸುತ್ತಿವೆ. ಟಿವಿಕೆ ಪಕ್ಷ ಕಾಂಗ್ರೆಸ್ ಮತ್ತು ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಎರಡೂ ಪಕ್ಷಗಳು ನಮಗೆ ಎದುರಾಳಿ ಎಂದು ಹೇಳಿದೆ.

    ಸದ್ಯದ ಮಾಹಿತಿ ಪ್ರಕಾರ ತಮಿಳುನಾಡು ವಿಧಾನಸಭೆ ಚುನಾವಣೆ 2026 ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಜನವರಿಯಲ್ಲಿ ತಮಿಳುನಾಡು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ, ಪೊಂಗಲ್ ಹಬ್ಬವನ್ನು ರಾಜ್ಯದಲ್ಲಿಯೇ ಆಚರಣೆ ಮಾಡಲಿದ್ದಾರೆ.

    ವಿಧಾನಸಭೆ ಚುನಾವಣೆಗೆ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ವಿಜಯ್ ಎಂದು ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಘೋಷಣೆ ಮಾಡಿದೆ. ವಿಜಯ್‌ ಯುವಕರ ಮತಗಳನ್ನು ಸೆಳೆಯುವುದನ್ನು ತಡೆಯಲು ಡಿಎಂಕೆ ಪಕ್ಷ ಸಿಎಂ ಎಂ.ಕೆ.ಸ್ಟಾಲಿನ್ ಪುತ್ರ ನಟ ಉದಯನಿಧಿ ಸ್ಟಾಲಿನ್ ಅವರನ್ನು ತಮ್ಮ ಅಭ್ಯರ್ಥಿ ಎಂದು ಬಿಂಬಿಸುವ ಸಾಧ್ಯತೆ ಇದೆ.

    ತಮಿಳುನಾಡು ಬಿಜೆಪಿಯಲ್ಲಿ ಪ್ರಭಾವಿ ನಾಯಕ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ. ಆದರೆ ಎಐಎಡಿಎಂಕೆ ಪಕ್ಷದ ಜೊತೆಗಿನ ಮೈತ್ರಿಯ ಕಾರಣಕ್ಕೆ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಬಿಡುಗಡೆ ಮಾಡಲಾಗಿದೆ. 2026ರ ಚುನಾವಣೆಗೆ ಸಹ ಅವರು ಸ್ಪರ್ಧೆ ಮಾಡುವುದಿಲ್ಲ ಎಂಬ ಸುದ್ದಿ ಹಬ್ಬಿದೆ.

    ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್‌ ಪಕ್ಷಕ್ಕೆ ಸಹ ತಮಿಳುನಾಡು ಚುನಾವಣೆ ಬಹಳ ಮುಖ್ಯ. ಪಕ್ಷ ಮೈತ್ರಿಕೂಟದ ಜೊತೆ ಅಧಿಕಾರದಲ್ಲಿರುವ ರಾಜ್ಯದಲ್ಲಿ ತಮಿಳುನಾಡು ಸಹ ಒಂದು. ತಮಿಳುನಾಡು ಪಕ್ಕದ ತೆಲಂಗಾಣ, ಕರ್ನಾಟಕದಲ್ಲಿ  ಪಕ್ಷದ ಅಧಿಕಾರದಲ್ಲಿದೆ. ಆದ್ದರಿಂದ ಚುನಾವಣೆಯಲ್ಲಿ ಹೆಚ್ಚಿನ ಸೀಟು ಗೆಲ್ಲುವ ನಿರೀಕ್ಷೆಯಲ್ಲಿ ಪಕ್ಷವಿದೆ.

    2021ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ  ಡಿಎಂಕೆ 133, ಎಐಎಡಿಎಂಕೆ 66, ಕಾಂಗ್ರೆಸ್ 18, ಪಿಎಂಕೆ 5, ವಿಸಿಕೆ 4 ಮತ್ತು ಇತರ ಪಕ್ಷಗಳು 8 ಸೀಟುಗಳಲ್ಲಿ ಜಯಗಳಿಸಿದ್ದವು. ಡಿಎಂಕೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿ ರಾಜ್ಯದಲ್ಲಿ ಸರ್ಕಾರವನ್ನು ರಚನೆ ಮಾಡಿತ್ತು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search