Tuesday, March 24, 2026
spot_img
More
    spot_img
    HomeLatest news2023ರಂತೆ 2028ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ: ಸಿಎಂ ಸಿದ್ದರಾಮಯ್ಯ

    2023ರಂತೆ 2028ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ: ಸಿಎಂ ಸಿದ್ದರಾಮಯ್ಯ

    ಬೆಳಗಾವಿ: 2023ರಂತೆ 2028ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

    ಅವರು ಇಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ, ವಿರೋಧಪಕ್ಷದವರ ಪ್ರಶ್ನೆಗೆ ಉತ್ತರಿಸುತ್ತಾ ಮಾತನಾಡಿದರು.

    ಉರಿಯುವುದರ ಮೇಲೆ ಉಪ್ಪು ಹಾಕಬಾರದೆಂಬ ಎಂಬ ಗಾದೆ ಮಾತಿದೆ. ವಿರೋಧಪಕ್ಷದವರು ಇರುವುದೇ ಉರಿಯುವುದರ ಮೇಲೆ ಉಪ್ಪು ಸುರಿಯಲು ಎಂದರು. ವಿರೋಧಪಕ್ಷದವರು ಏನೇ ಪ್ರಚೋದನೆ ಮಾಡಿದರೂ, ನಮ್ಮ ಶಾಸಕರಾರೂ ಪ್ರಚೋದಿತರಾಗುವುದಿಲ್ಲ. ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿರಬೇಕೆಂದು ಜನರು ಆಶೀರ್ವಾದ ಮಾಡಿ ಕಳಿಸಿದ್ದಾರೆ. 140 ಶಾಸಕರು ನಮ್ಮೊಂದಿಗಿದ್ದಾರೆ. ವಿರೋಧಪಕ್ಷದವರು ಇದರಲ್ಲಿ ಹುಳಿ ಹಿಂಡುವ ಅಗತ್ಯವಿಲ್ಲ ಎಂದರು.

    2023ರಲ್ಲಿ ಜನರು ಆಶೀರ್ವಾದ ಮಾಡಿದಂತೆ 2028ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಆಡಳಿತಕ್ಕೆ ಬರಲಿದೆ. ಜನರ ನಾಡಿಮಿಡಿತ ಸರ್ಕಾರಕ್ಕೆ ತಿಳಿದಿದೆ. ಕರ್ನಾಟಕದ ಜನ ಬಿಜೆಪಿಗೆ ಎಂದಿಗೂ ಅಧಿಕಾರಕ್ಕೆ ತರುವುದಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಎರಡು ಬಾರಿ ಅಧಿಕಾರ ನಡೆಸಿದರೂ, ಒಂದು ಬಾರಿಯೂ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿಲ್ಲ. 2008, 2018ರಲ್ಲಿ ಆಪರೇಷನ್ ಕಮಲ ಮಾಡಿ, ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದಾರೆ. ರಾಜ್ಯದ ಜನ ಬಿಜೆಪಿಗೆ ಆಶೀರ್ವಾದ ಮಾಡುವುದಿಲ್ಲ ಎಂಬುದು ಸ್ಪಷ್ಟವಾಗಿದೆ. 2019ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬಾರದೆಂಬ ಉದ್ದೇಶದಿಂದ ಜೆಡಿಎಸ್ ನೊಂದಿಗೆ ಸರ್ಕಾರ ರಚಿಸಲಾಯಿತು. ಆದರೆ ಬಿಜೆಪಿಯವರು, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಉದ್ದೇಶದ ಬಗ್ಗೆ ಪ್ರಶ್ನಿಸಿದರು.

    ಕಾಂಗ್ರೆಸ್ ಪಕ್ಷದಲ್ಲಿ ಹೈಕಮಾಂಡ್ ಮಾತು ಅಂತಿಮವಾಗಿರುತ್ತದೆ. ಆದರೆ ಬಿಜೆಪಿಯ ಅಧ್ಯಕ್ಷಗಿರಿ ಆಯ್ಕೆಯಲ್ಲಿ ಒಮ್ಮತ ಸಾಧಿಸಿಲ್ಲ. ಬಿಜೆಪಿಯವರಿಗೆ ಅಸೂಯೆ ಕಾಡುತ್ತಿದೆ. ಐದು ವರ್ಷ ಸುಭದ್ರ ಸರ್ಕಾರ ನೀಡುತ್ತೇವೆ ಹಾಗೂ ಮತ್ತೆ ಚುನಾವಣೆ ಎದುರಿಸಿ 2028ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. 2013ರಲ್ಲಿ 2023ರಲ್ಲಿಯೂ ಕಾಂಗ್ರೆಸ್‌ಗೆ ಜನರು ಆಶೀರ್ವಾದ ಮಾಡಿದ್ದಾರೆ, ಆದರೆ ಬಿಜೆಪಿಯವರಿಗೆ ಒಮ್ಮೆಯೂ ಜನಾದೇಶ ದೊರೆತಿಲ್ಲ ಹಾಗೂ ಭವಿಷ್ಯದಲ್ಲಿಯೂ ದೊರೆಯುವುದಿಲ್ಲ. ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದೆ. “ನಾನು’ ಹೋದರೆ ಹೋದೇನು” ಅಂತ ಕನಕದಾಸರು ಹೇಳಿದ್ದರು. “ಇದು ನನ್ನ ಸರ್ಕಾರವಲ್ಲ, ನಮ್ಮ ಸರ್ಕಾರ”. ಈಗಲೂ ನಾನೇ ಮುಖ್ಯಮಂತ್ರಿ. ಹೈಕಮಾಂಡ್ ಹೇಳುವ ತನಕವೂ ನಾನೇ ಮುಖ್ಯಮಂತ್ರಿ ಎಂದು ತಿಳಿಸಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಬ್ರೇಕಿಂಗ್! ರೂಪಾಯಿ ಕುಸಿತ—ಮೊದಲ ಬಾರಿಗೆ ₹93 ದಾಟಿದ ಡಾಲರ್, ಆರ್ಥಿಕತೆಗೆ ಶಾಕ್!

    “ರೂಪಾಯಿ ಕುಸಿತ 93” ಇದೀಗ ದೇಶದ ಆರ್ಥಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪಶ್ಚಿಮ ಏಷ್ಯಾದ ಉದ್ವಿಗ್ನತೆ ಹೆಚ್ಚಾಗುತ್ತಿರುವ ಹಿನ್ನೆಲೆ, ಭಾರತೀಯ ರೂಪಾಯಿ ಇತಿಹಾಸದಲ್ಲೇ ಮೊದಲ ಬಾರಿಗೆ ಡಾಲರ್ ಎದುರು ₹93 ಗಡಿ...

    ತೆಲಂಗಾಣ ಬಜೆಟ್ 2026: ಆರೋಗ್ಯ ಕ್ಷೇತ್ರಕ್ಕೆ ಭಾರೀ ಉತ್ತೇಜನ—₹1286 ಕೋಟಿ ಹೆಚ್ಚಳ!

    “ತೆಲಂಗಾಣ ಆರೋಗ್ಯ ಬಜೆಟ್ 2026” ಈಗ ರಾಜ್ಯ ರಾಜಕೀಯ ಹಾಗೂ ಸಾರ್ವಜನಿಕರಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಆರೋಗ್ಯ ಸೇವೆಗಳನ್ನು ಬಲಪಡಿಸಲು ಸರ್ಕಾರ ದೊಡ್ಡ ಮಟ್ಟದ ಹೂಡಿಕೆ ಮಾಡಿದ್ದು, ಹೆಚ್ಚುವರಿ ₹1286 ಕೋಟಿ ಅನುದಾನ...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading