Tuesday, November 3, 2026
spot_img
More
    spot_img
    HomeLatest newsಸ್ಥಳೀಯ ಚುನಾವಣೆಯ ಬಗ್ಗೆ ವಿಧಾನಪರಿಷತ್‌ನಲ್ಲಿ ಕೃಷ್ಣ ಬೈರೇಗೌಡ ಮಾಹಿತಿ

    ಸ್ಥಳೀಯ ಚುನಾವಣೆಯ ಬಗ್ಗೆ ವಿಧಾನಪರಿಷತ್‌ನಲ್ಲಿ ಕೃಷ್ಣ ಬೈರೇಗೌಡ ಮಾಹಿತಿ

    ಬೆಳಗಾವಿ: ಮಹಾನಗರ ಪಾಲಿಕೆ, ನಗರ ಸಭೆ, ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಎಷ್ಟು ಸಾಧ್ಯವೋ ಅಷ್ಟು ಬೇಗ ನಡೆಸಲಿದ್ದೇವೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ವಿಧಾನಪರಿಷತ್‍ನಲ್ಲಿ ಹೇಳಿದ್ದಾರೆ.

    ಬಿಜೆಪಿಯ ಪ್ರತಾಪ್‍ಸಿಂಹ ನಾಯಕ್ ಅವರು ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಪೌರಾಡಳಿತ ಸಚಿವ ರಹೀಂಖಾನ್ ಅವರಿಗೆ ಪ್ರಶ್ನಿಸಿದರು. ಇದಕ್ಕೆ ಸಚಿವರು, ಆದಷ್ಟು ಶೀಘ್ರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸತ್ತೆ?ವೆ ಎಂದು ಹೇಳುತ್ತಿದ್ದಂತೆ ಸದಸ್ಯ ಪ್ರತಾಪ್ ಸಿಂಹ ನಾಯಕ್ ಆಕ್ಷೇಪಿಸಿದರು.

    ಪ್ರತಿ ಬಾರಿ ಈ ಪ್ರಶ್ನೆ ಕೇಳಿದಾಗ ಸಚಿವರು ಆದಷ್ಟು ಬೇಗ, ಅತೀ ಶೀಘ್ರದಲ್ಲಿ, ಎಷ್ಟು ಸಾಧ್ಯವೋ ಅಷ್ಟು ಬೇಗ ಎಂಬ ಹಾರಿಕೆ ಉತ್ತರ ಕೊಡುತ್ತಿದ್ದಾರೆ. ಸ್ಥಳೀಯ ಸಂಸ್ಥೆಗಳ ಅವಧಿ ಮುಗಿದು ಹಲವಾರು ವರ್ಷಗಳಾಗಿವೆ. ಚುನಾವಣೆ ನಡೆಸಲು ಸರ್ಕಾರಕ್ಕಿರುವ ಸಮಸ್ಯೆಯಾದರೂ ಏನು ಎಂದು ಪ್ರಶ್ನೆ ಮಾಡಿದರು.

    ಆಗ ಮಧ್ಯಪ್ರವೇಶ ಮಾಡಿದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಕಳೆದ ಐದಾರು ವರ್ಷ ಚುನಾವಣೆಯೇ ನಡೆದಿಲ್ಲ. ನಾವು ಮಾಡಿಲ್ಲ, ನಮ ಸರ್ಕಾರ ಚುನಾವಣೆ ನಡೆಸಲು ಬದ್ಧವಾಗಿದೆ. ನೀವು ಮಾಡಿರುವ ತಪ್ಪನ್ನು ನಮ ಸರ್ಕಾರ ಸರಿಪಡಿಸಿದೆ ಎಂದು ಸಮರ್ಥನೆ ಮಾಡಿಕೊಳ್ಳಲು ಮುಂದಾದರು.

    ಸಚಿವರ ಹೇಳಿಕೆಗೆ ಸಿ.ಟಿ.ರವಿ, ಕೇಶವ್ ಪ್ರಸಾದ್ ಆಕ್ಷೇಪ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು.

    ಇದಕ್ಕೂ ಮುನ್ನ ಸಚಿವ ರಹೀಂಖಾನ್ ಉತ್ತರಿಸಿ ತಾ.ಪಂ., ಜಿಲ್ಲಾ ಪಂಚಾಯಿತಿ ಚುನಾವಣೆ ಅವಧಿ ಮುಗಿದು ಹೋಗಿದೆ. ಅದನ್ನು ನಮ ಸರ್ಕಾರ ಚುನಾವಣೆ ನಡೆಸಲು ಮುಂದಾಗಿದೆ ಎಂದರು.

    ಪ್ರತಾಪ್‍ಸಿಂಹ ನಾಯಕ್ ಅವರು ಚುನಾವಣೆ ಆಯೋಗ ನ್ಯಾಯಾಲಯಕ್ಕೆ ಹೋಗುವ ಪರಿಸ್ಥಿತಿ ಬಂದಿದೆ. ಸ್ಥಳೀಯ ಸಂಸ್ಥೆಗಳಚುನಾವಣೆ ಕಾಲಕಾಲಕ್ಕೆ ನಡೆಯಬೇಕು. ಮಾಧ್ಯಮಗಳಲ್ಲಿ ನಾಯಕತ್ವದ ವಿಚಾರ ಜೋರಾಗಿ ಬರುತ್ತಿದೆ. ರೈತರ ಸಮಸ್ಯೆ ಬಗ್ಗೆ ಚರ್ಚೆ ನಡೆಯುತ್ತಿಲ್ಲ. ಕುರ್ಚಿ ಬಗ್ಗೆ ಚರ್ಚೆ ನಡೆಯುತ್ತಿದೆ. ಜನರು ಗೊಂದಲದಲ್ಲಿದ್ದಾರೆ ಎಂದು ವ್ಯಂಗ್ಯವಾಡಿದರು.

    ಸಚಿವರು ಮಾತ್ರ ಒಳ್ಳೆಯವರಾದರೆ ಸಾಕಾಗುವುದಿಲ್ಲ. ಅಧಿಕಾರಿಗಳ ಬಳಿ ಕೆಲಸ ಮಾಡಿಸಬೇಕೆಂದು ಸಲಹೆ ಮಾಡಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search