Sunday, September 20, 2026
spot_img
More
    spot_img
    HomeSportsCricketಐಪಿಎಲ್ 2026 ಹರಾಜು: 12 ನಿಮಿಷಗಳಲ್ಲಿ 28.4 ಕೋಟಿಗೆ ಅಂತಾರಾಷ್ಟ್ರೀಯ ಪಂದ್ಯ ಆಡದ ಇಬ್ಬರು ಆಟಗಾರರನ್ನು...

    ಐಪಿಎಲ್ 2026 ಹರಾಜು: 12 ನಿಮಿಷಗಳಲ್ಲಿ 28.4 ಕೋಟಿಗೆ ಅಂತಾರಾಷ್ಟ್ರೀಯ ಪಂದ್ಯ ಆಡದ ಇಬ್ಬರು ಆಟಗಾರರನ್ನು ಖರೀದಿಸಿದ ಚೆನ್ನೈ

    ಅಬುದಾಬಿಯ ಇತಿಹಾದ್ ಏರೆನ ಹೋಟೆಲ್ ನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಆಟಗಾರರ ಮಿನಿ ಹರಾಜು ಪ್ರಕ್ರಿಯೆ ನಡೆದಿದೆ.

    Advertisement

    ಎಲ್ಲಾ ಫ್ರಾಂಚೈಸಿಗಳಿಗೆ ಇದು ಮಿನಿ ಹರಾಜು ಪ್ರಕ್ರಿಯೆಯಾದರೆ, ಕಳೆದ ತಿಂಗಳು ನಡೆದ ರಿಟೆನ್ಷನ್ ಪ್ರಕ್ರಿಯೆಯಲ್ಲಿ ಹೆಚ್ಚು ಆಟಗಾರರನ್ನು ತಂಡದಿಂದ ಕೈಬಿಟ್ಟ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳಿಗೆ ಇದು ಮೆಗ ಹರಾಜು ಪ್ರಕ್ರಿಯೆ ಎಂದೇ ಹೇಳಬಹುದು.

    ಹೌದು, ಕೋಟಿ ಕೋಟಿ ಹಣದೊಂದಿಗೆ ಹರಾಜು ಪ್ರಕ್ರಿಯೆಗೆ ಪ್ರವೇಶ ಪಡೆದುಕೊಂಡ ಈ ಎರಡು ತಂಡಗಳು ಆಟಗಾರರ ಮೇಲೆ ಕೋಟಿ ಕೋಟಿ ಸುರಿದು ಖರೀದಿಸಿವೆ.

    ಅದರಲ್ಲಿಯೂ ಚೆನ್ನೈ ಸೂಪರ್ ಕಿಂಗ್ಸ್ ಅಂತರಾಷ್ಟ್ರೀಯ ಕ್ರಿಕೆಟ್ ಆಡದೆ ಇರುವ ಇಬ್ಬರು ಅನ್ಕ್ಯಾಪ್ಡ್ ಆಟಗಾರರ ಮೇಲೆ ದಾಖಲೆಯ ಬಿಡ್ ಮಾಡಿದೆ.

    ಮೊದಲಿಗೆ 4:56 ಗಂಟೆಗೆ 14.20 ಕೋಟಿ ಖರ್ಚು ಮಾಡಿ ಪ್ರಕಾಶ್ ವೀರ್ ಖರೀದಿಸಿದ ಚೆನ್ನೈ ಸೂಪರ್ ಕಿಂಗ್ಸ್ 5:08 ಗಂಟೆಗೆ ಮತ್ತೆ 14.20 ಕೋಟಿ ನೀಡಿ ಕಾರ್ತಿಕ್ ಶರ್ಮ ಎಂಬ ಆಟಗಾರರನ್ನು ಖರೀದಿಸಿತು.

    ವಿಶೇಷವೆಂದರೆ ಈ ಇಬ್ಬರು ಆಟಗಾರರು ಸಹ ಇದುವರೆಗೂ ಒಂದು ಅಂತರಾಷ್ಟ್ರೀಯ ಪಂದ್ಯವನ್ನಾಡಿಲ್ಲ. ಸರಿಯಾಗಿ ಇಬ್ಬರು ಆಟಗಾರರು ಸಹ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಮೊತ್ತ ಪಡೆದ ಅನ್ಕ್ಯಾಪ್ಡ್ ಆಟಗಾರರು ಎನಿಸಿಕೊಂಡಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading