ಭಾರತದ ಸುಪ್ರೀಂ ಕೋರ್ಟ್‌ನಲ್ಲಿ ಲಾ ಕ್ಲರ್ಕ್ ಕಮ್ ರಿಸರ್ಚ್ ಅಸೋಸಿಯೇಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ,ಸುಪ್ರೀಂ ಕೋರ್ಟ್ ನಲ್ಲಿ ಖಾಲಿ ಇರುವ 90 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು,ಅಧಿಸೂಚನೆ ಪ್ರಕಾರ ಒಟ್ಟು 90 ಹುದ್ದೆಗಳು ಖಾಲಿ ಇದ್ದು ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ,ಅರ್ಜಿ ಪ್ರಕ್ರಿಯೆಯು ಜನವರಿ 14 ರಿಂದ ಪ್ರಾರಂಭವಾಗಿದ್ದು, ಫೆಬ್ರವರಿ 7, 2025 ರವರೆಗೆ ಮುಂದುವರಿಯುತ್ತದೆ. CSI sci.gov.in ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ.ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಹಾಗೂ ವಯೋಮಿತಿ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮುಂತಾದ ವಿವರಗಳ ಬಗ್ಗೆ ಮಾಹಿತಿ
ಹುದ್ದೆಗಳ ನೇಮಕಾತಿ ವಿವರ
ನೇಮಕಾತಿ ಸಂಸ್ಥೆ:- ಸುಪ್ರೀಂ ಕೋರ್ಟ್
ಖಾಲಿ ಹುದ್ದೆಗಳ ಸಂಖ್ಯೆ:- 90 ಹುದ್ದೆಗಳು
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 14/01/2025
ಅರ್ಜಿ ಕೊನೆಯ ದಿನಾಂಕ:- 07/02/2025
ವಯಸ್ಸಿನ ಮಿತಿ:
ಸುಪ್ರೀಂ ಕೋರ್ಟ್ ನಲ್ಲಿ ಖಾಲಿ ಇರುವ 90 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 32 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ ಹಾಗೂ ಮೀಸಲಾತಿ ಆಧಾರದ ಮೇಲೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಲಿಕ್ಕೆ ಮಾಡಲಾಗಿದೆ
ಶೈಕ್ಷಣಿಕ ಅರ್ಹತೆ
ಅಭ್ಯರ್ಥಿಯು ಸಂಶೋಧನೆ ಮತ್ತು ವಿಶ್ಲೇಷಣಾತ್ಮಕ ಕೌಶಲ್ಯಗಳನ್ನು ಹೊಂದಿರಬೇಕು, ಬರವಣಿಗೆಯ ಕೌಶಲ್ಯಗಳು ಮತ್ತು ಇ-ಎಸ್‌ಸಿಆರ್, ಮನುಪತ್ರ, ಎಸ್‌ಸಿಸಿ ಆನ್‌ಲೈನ್, ಲೆಕ್ಸಿಸ್ ನೆಕ್ಸಿಸ್, ವೆಸ್ಟಾಲ್ ಮುಂತಾದ ವಿವಿಧ ಸರ್ಚ್ ಇಂಜಿನ್‌ಗಳು/ಪ್ರಕ್ರಿಯೆಗಳಿಂದ ಬಯಸಿದ ಮಾಹಿತಿಯನ್ನು ಸಂಗ್ರಹಿಸುವುದು ಸೇರಿದಂತೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.ಐದು ವರ್ಷಗಳ ಇಂಟಿಗ್ರೇಟೆಡ್ ಕಾನೂನು ಕೋರ್ಸ್ ಪೂರ್ಣಗೊಳಿಸಿದ ಅಭ್ಯರ್ಥಿಗಳು ಸಹ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ:-
ಸುಪ್ರೀಂ ಕೋರ್ಟ್ ನಲ್ಲಿ ಖಾಲಿ ಇರುವ ಈ 90 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 500 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ.ಪಾವತಿಯನ್ನು ಆನ್‌ಲೈನ್ ಮೋಡ್ ಮೂಲಕ ಮಾತ್ರ ಮಾಡಬೇಕು. ಬೇರೆ ಯಾವುದೇ ಶುಲ್ಕವನ್ನು ಸ್ವೀಕರಿಸಲಾಗುವುದಿಲ್ಲ. ಯಾವುದೇ ಅಂಚೆ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ
ಸಂಬಳ
ಇದು ಅಲ್ಪಾವಧಿಯ ಗುತ್ತಿಗೆ ಆಧರಿತ ಉದ್ಯೋಗವಾಗಿದೆ. ಸುಮಾರು 90 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ. 2025-26ನೇ ಸಾಲಿನಲ್ಲಿ ನೇಮಕ ಮಾಡುವ ಈ ಹುದ್ದೆಗಳಿಗೆ ಪ್ರತಿ ತಿಂಗಳು 80 ಸಾವಿರ ರೂಪಾಯಿ ವೇತನ ನಿಗದಿಪಡಿಸಲಾಗಿದೆ.
ಪರೀಕ್ಷಾ ಕೇಂದ್ರ
ಭಾರತದ ವಿವಿಧೆಡೆ ಪರೀಕ್ಷಾ ಕೇಂದ್ರಗಳು ಇರಲಿವೆ. ಕರ್ನಾಟಕದಲ್ಲಿ ಬೆಂಗಳೂರು ಪರೀಕ್ಷಾ ಕೇಂದ್ರವಾಗಿದೆ.
ಆಯ್ಕೆವಿಧಾನ
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಪರೀಕ್ಷೆಯಲ್ಲಿ ಬಹು ಆಯ್ಕೆಯ ಮಾದರಿಯ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಪರೀಕ್ಷೆಯನ್ನು 9 ಮಾರ್ಚ್ 2025 ರಂದು ನಡೆಸಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಯಶಸ್ವಿಯಾದ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬೇಕು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


