ಬೆಂಗಳೂರು: ಚಳಿಗಾಲದ ಅಧಿವೇಶನದ ಕೊನೆಯ ದಿನದಂದು ಬೆಳಗಾವಿ ಸುವರ್ಣ ಸೌಧದಲ್ಲಿ ಸಿಟಿ ರವಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ನಡುವೆ ಮಹಾ ಸಮರವೇ ನಡೆಯಿತು.
ಇಬ್ಬರ ನಡುವಿನ ಮಾತಿನ ಚಕಮಕಿ ಬೈಗುಳಕ್ಕೆ ತಿರುಗಿತ್ತು. ಸಿಟಿ ರವಿ ತನ್ನನ್ನು ವೇಶ್ಯೆ ಎಂಬ ಪದ ಬಳಸಿ ನಿಂದಿಸಿದರು ಎಂದು ಗಂಭೀರ ಆರೋಪ ಮಾಡಿದರು.
ಆದರೆ ಸಿಟಿ ರವಿ ಮಾತ್ರ ತಾನು ಯಾವುದೇ ಕೆಟ್ಟ ಪದ ಬಳಕೆ ಮಾಡಿಲ್ಲ ಎಂದು ವಾದಿಸಿದ್ದರು. ಘಟನೆಯ ಕುರಿತು ಲಕ್ಷ್ಮೀ ಹೆಬ್ಬಾಳ್ಕರ್ ದೂರು ನೀಡಿದ್ದರು. ಪ್ರಕರಣದ ತನಿಖೆಯನ್ನು ಸಿಐಡಿಗೂ ಸಹ ವಹಿಸಲಾಗಿತ್ತು.
ಸದ್ಯ ಈ ಕುರಿತಾದ ಪ್ರಾಥಮಿಕ ತನಿಖೆಯನ್ನು ಸಿಐಡಿ ಪೊಲೀಸರು ನಡೆಸಿದ್ದು ಸಿಟಿ ರವಿ ಅವಾಚ್ಯ ಶಬ್ದ ಬಳಕೆ ಮಾಡಿರುವುದು ಬಹಿರಂಗಗೊಂಡಿದೆ. ರಾಜ್ಯ ಆಡಳಿತ ಮತ್ತು ಸಿಬ್ಬಂಧಿ ಸುಧಾರಣೆ ಇಲಾಖೆ (ಡಿಎಪಿಆರ್) ನೀಡಿದ್ದ ಸದನದ ವಿಡಿಯೋವನ್ನು ಪರೀಕ್ಷೆಗೆ ಒಳಪಡಿಸಿದಾಗ ಸಿಟಿ ರವಿ ಒಮ್ಮೆ ಅವಾಚ್ಯ ಶಬ್ದ ಬಳಸಿರುವುದು ಫೋರೆನ್ಸಿಕ್ ಪರೀಕ್ಷೆಯಲ್ಲಿ ದೃಢವಾಗಿದೆ.
ನಾಲ್ಕು ಗಂಟೆಯ ವಿಡಿಯೋ ರೆಕಾರ್ಡ್ನಲ್ಲಿ ಒಟ್ಟು ಏಳು ಬಾರಿ ಅವಾಚ್ಯ ಶಬ್ದ ಬಳಕೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ತಿಳಿದಬಂದಿದೆ, ಹೀಗಾಗಿ, ಅವಾಚ್ಯ ಶಬ್ದ ಬಳಸಿದ ಧ್ವನಿ ಪತ್ತೆಗೆ ಸಿಟಿ ರವಿ ವಾಯ್ಸ್ ಸ್ಯಾಂಪಲ್ ಪಡೆಯಲು ಸಿಐಡಿ ಮುಂದಾಗಿದೆ. ಆದರೆ ತಾನು ಅವಾಚ್ಯ ಶಬ್ದ ಬಳಸಿಲ್ಲ ಎಂದು ಸಿಟಿ ರವಿ ಹೇಳುತ್ತಿದ್ದಾರೆ. ಜೊತೆಗೆ ವಾಯ್ಸ್ ಸ್ಯಾಂಪಲ್ ನೀಡಲು ನಿರಾಕರಿಸಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


