ಕೇಂದ್ರ ಸರ್ಕಾರದ ಮಹತ್ವಕಾಂಕ್ಷೆಯ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ಇಂದು ( ಏಪ್ರಿಲ್ 17 ) ನಡೆಯಿತು.
ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, 2025ರ ವಕ್ಫ್ ಕಾಯ್ದೆಗೆ ಸಂಬಂಧಿಸಿದ ವಿಷಯದಲ್ಲಿ ಕೇಂದ್ರವು ಏಳು ದಿನಗಳಲ್ಲಿ ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸುತ್ತದೆ ಎಂಬ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಹೇಳಿಕೆಯನ್ನು ಸುಪ್ರೀಂಕೋರ್ಟ್ ದಾಖಲಿಸಿಕೊಂಡಿತ್ತು.
ವಕ್ಫ್ ಕಾಯ್ದೆಯ ಸೆಕ್ಷನ್ 9 ಮತ್ತು 14ರ ಅಡಿಯಲ್ಲಿ ಕೇಂದ್ರ ವಕ್ಫ್ ಕೌನ್ಸಿಲ್ ಮತ್ತು ರಾಜ್ಯ ವಕ್ಫ್ ಮಂಡಳಿಗಳಿಗೆ ಯಾವುದೇ ನೇಮಕಾತಿಯನ್ನು ಮಾಡಲಾಗುವುದಿಲ್ಲ ಎಂದು ಹೇಳಿದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸುಪ್ರೀಂಕೋರ್ಟ್ 7 ದಿನಗಳ ನಿಗದಿತ ಸಮಯದೊಳಗೆ ತನ್ನ ಉತ್ತರವನ್ನು ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿ ಮೇ.5ರಂದು ವಿಚಾರಣೆ ನಡೆಯಲಿದೆ ಎಂದು ವಿಚಾರಣೆಯನ್ನು ಮುಂದೂಡಿತು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


