Saturday, August 8, 2026
spot_img
More
    spot_img
    HomeSportsCricketIPL 2025: ಮತ್ತೆ ಮುಗ್ಗರಿಸಿದ ಸನ್‌ರೈಸರ್ಸ್; ಮುಂಬೈಗೆ ಸುಲಭ ಗುರಿ

    IPL 2025: ಮತ್ತೆ ಮುಗ್ಗರಿಸಿದ ಸನ್‌ರೈಸರ್ಸ್; ಮುಂಬೈಗೆ ಸುಲಭ ಗುರಿ

    ಮುಂಬೈ: ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್‌ನ 33ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಿದ್ದು, ಸನ್‌ರೈಸರ್ಸ್ ಹೈದರಾಬಾದ್ ಮೊದಲು ಬ್ಯಾಟಿಂಗ್ ಮಾಡಿದ್ದು, 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 162 ರನ್ ಕಲೆಹಾಕಿ ಮುಂಬೈ ಇಂಡಿಯನ್ಸ್‌ಗೆ 163 ರನ್‌ಗಳ ಗುರಿಯನ್ನು ನೀಡಿದೆ.

    Advertisement

    ಮೊದಲ ಪಂದ್ಯದಲ್ಲಿ ಅಬ್ಬರಿಸಿ ನಂತರದ ಪಂದ್ಯದಲ್ಲಿ ರನ್ ಗಳಿಸಲು ಪರದಾಡಿದ್ದ ಸನ್‌ರೈಸರ್ಸ್ ಹೈದರಾಬಾದ್ ತಂಡ ಕಳೆದ ಪಂದ್ಯದಲ್ಲಿ ಕಮ್‌ಬ್ಯಾಕ್ ಮಾಡಿತ್ತು. ಆದರೆ ಇಂದಿನ ಪಂದ್ಯದಲ್ಲಿ ಆ ಅಬ್ಬರ ಎಲ್ಲಿಯೂ ಕಂಡುಬರಲಿಲ್ಲ. ತಂಡದ ಪರ ಅಭಿಷೇಕ್ ಶರ್ಮಾ 40 (28), ಟ್ರಾವಿಸ್ ಹೆಡ್ 28 (29), ಇಶಾನ್ ಕಿಶನ್ 2 (3), ನಿತಿಶ್‌ ಕುಮಾರ್‌ ರೆಡ್ಡಿ 19 (21), ಹೆನ್ರಿಚ್ ಕ್ಲಾಸೆನ್ 37 (28), ಅನಿಕೇತ್ ಶರ್ಮಾ ಅಜೇಯ 18 (8) ರನ್ ಹಾಗೂ ಪ್ಯಾಟ್ ಕಮಿನ್ಸ್ ಅಜೇಯ 8 (4) ರನ್ ಗಳಿಸಿದರು.

    ಮುಂಬೈ ಇಂಡಿಯನ್ಸ್ ಪರ ವಿಲ್ ಜಾಕ್ಸ್ ಎರಡು ವಿಕೆಟ್, ಟ್ರೆಂಟ್ ಬೌಲ್ಟ್, ಜಸ್‌ಪ್ರೀತ್ ಬುಮ್ರಾ ಹಾಗೂ ಹಾರ್ದಿಕ್ ಪಾಂಡ್ಯ ತಲಾ ಒಂದೊಂದು ವಿಕೆಟ್ ಪಡೆದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading