Friday, August 7, 2026
spot_img
More
    spot_img
    HomeTop StoryBIG NEWS: ಇಂದು ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಚರ್ಚೆ; ಏನಾಗಲಿದೆ ವಿವಾದದ ಗಣತಿ?

    BIG NEWS: ಇಂದು ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಚರ್ಚೆ; ಏನಾಗಲಿದೆ ವಿವಾದದ ಗಣತಿ?

    ಬೆಂಗಳೂರು: ರಾಜ್ಯದದ್ಯಾಂತ ಭಾರೀ ವಿವಾದದ ಕಿಚ್ಚು ಹಚ್ಚಿರುವ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ಸಲ್ಲಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ(ಜಾತಿ ಜನಗಣತಿ) ವರದಿಯಲ್ಲಿನ ಶಿಫಾರಸ್ಸುಗಳ ಕುರಿತು ಇಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಹೊರ ಬೀಳುವ ಸಾಧ್ಯತೆ ಇದೆ.

    Advertisement

    ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಂಹೆ 4.30 ಕ್ಕೆ ವಿಧಾನಸೌಧದಲ್ಲಿ ನಡೆಯಲಿರುವ ವಿಶೇಚ ಸಚಿವ ಸಂಪುಟ ಸಭೆಯಲ್ಲಿ ಕೇವಲ ಒಂದೇ ಒಂದು ಅಜೆಂಡಾವನ್ನು ಮಾತ್ರ ಚರ್ಚೆ ಮಾಡುವ ವಿಷಯಗಳ ಪಟ್ಟಿಯಲ್ಲಿ ಸೇರಿಸಲಾಗಿದೆ. ಜಾತಿ ಜನಗಣತಿ ವರದಿ ಅನುಷ್ಟಾನ ಕುರಿತು ಚರ್ಚೆಗೆ ಸಭೆಯನ್ನು ಸೀಮಿತಗೊಳಿಸಲಾಗಿದೆ. ಈ ಹಿಂದೆ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಜಾತಿ ಗಣತಿ ವರದಿ ಕುರಿತಾದ ಸಚಿವರ ಕೈ ಸೇರಿದೆ. ಹೀಗಾಗಿ, ಜಾತಿ ಗಣತಿ ವರದಿ ಕುರಿತಾಗಿ ಸರ್ಕಾರ ಯಾವ ತೀರ್ಮಾನ ತೆಗೆದುಕೊಳ್ಳಲಿದೆ ಎಂಬ ಕುತೂಹಲ ಎಲ್ಲರಲ್ಲಿ ಮನೆ ಮಾಡಿದೆ. ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ವರದಿ ಎಂದು ಹೇಳಿದ್ದು,. ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅದರ ಭವಿಷ್ಯ ನಿರ್ಧರಿಸುವ ಸಾಧ್ಯತೆಗಳು ಹೆಚ್ಚಾಗಿವೆ.

    ಈಗಾಗಲೇ ರಾಜ್ಯದ ಎರಡು ಪ್ರಬಲ ಸಮುದಾಯಗಳಾದ ವೀರಶೈವ – ಲಿಂಗಾಯಿತ, ಒಕ್ಕಲಿಗ, ರೆಡ್ಡಿ, ವಿಶ್ವಕರ್ಮ, ಬ್ರಾಹ್ನಣ ಸಮುದಾಯ ಸೇರಿದಂತೆ ಮತ್ತಿತರರು ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿಸಿದ್ದಾರೆ. ಅದರ್ಲಲೂ ಒಕ್ಕಲಿಗರು ಜಾತಿಗಣತಿಯಲ್ಲಿ ಒಕ್ಕಲಿಗ ಸಮುದಾಯದ ಅಂಕಿಸಂಖ್ಯೆ ತಪ್ಪಾಗಿದ್ದು, ವರದಿಯಲ್ಲಿನ ಅಂಕಿ ಸಂಖ್ಯೆ ಬಗ್ಗೆ ಸಮುದಾಯದಲ್ಲಿ ಆಕ್ರೋಶವಿದೆ.

    ಸಮಾಜಕ್ಕೆ ಆದ ಅನ್ಯಾಯದ ಬಗ್ಗೆ ಸಿಎಂಗೆ ಮನವರಿಕೆ ಮಾಡಬೇಕು.ಸಮುದಾಯದ ಜನಸಂಖ್ಯೆ ನಿಖರವಾಗಿ ದಾಖಲಿಸಲು ವ್ಯವಸ್ಥೆ ಮಾಡಿ.ಇದಕ್ಕಾಗಿ ಸಿಎಂ ಸಿದ್ದರಾಮಯ್ಯಗೆ ಒತ್ತಾಯಿಸಲು ಹಲವರಿಂದ ಡಿಸಿಎಂ ಗೆ ಸಲಹೆ ಕೊಡಲಾಗಿದೆ. ಒಂದು ಸಮಿತಿ ಮಾಡಿ ಮೂರು ತಿಂಗಳುಗಳ ಕಾಲಾವಕಾಶ ನೀಡಬೇಕು. ಬಿಜೆಪಿ-ಜೆಡಿಎಸ್ ಸಮುದಾಯದ ಧ್ವನಿ ಎಂಬಂತೆ ಬಿಂಬಿಸುತ್ತಿದ್ದಾರೆ.ಇದಕ್ಕೆ ಸರ್ಕಾರ ಅವಕಾಶ ಮಾಡಿಕೊಡಬಾರದು.ಸಚಿವ ಸಂಪುಟ ಸಭೆಯ ಉಪ ಸಮಿತಿಯಲ್ಲಿ ಅಂಕಿ ಅಂಶ ಕಲೆಹಾಕಲು ಒತ್ತಡ ಹಾಕಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading