ಮಾಜಿ ಸಚಿವ ಹೆಚ್.ಡಿ ರೇವಣ್ಣ ಕಾಲು ಜಾರಿ ಬಿದ್ದು ಪೆಟ್ಟಾಗಿ ಆಸ್ಪತ್ರೆಯಲ್ಲಿ ದಾಖಲು

- Advertisement -

ಹಾಸನದ ಹೊಳೆನರಸೀಪುರದಲ್ಲಿ ದೇವಸ್ಥಾನಕ್ಕೆ ತೆರಳಿದ ಸಂದರ್ಭದಲ್ಲಿ, ಮಾಜಿ ಸಚಿವ ಹೆಚ್.ಡಿ ರೇವಣ್ಣ ಕಾಲು ಜಾರಿ ಬಿದ್ದು ಪಕ್ಕೆಲುಬಿಗೆ ಪೆಟ್ಟಾಗಿದ. ವೈದ್ಯಕೀಯ ಪರೀಕ್ಷೆಯಿಂದ ಅವರ ಪಕ್ಕೆಲುಬಿಗೆ ಪೆಟ್ಟಾಗಿರುವುದು ದೃಢಪಟ್ಟಿದೆ.

ದೇವಸ್ಥಾನಕ್ಕೆ ತೆರಳಿದ ಸಂದರ್ಭದಲ್ಲಿ ಕಾಲು ಜಾರಿ ಬಿದ್ದ ಹಿನ್ನಲೆಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಪಕ್ಕೆಲುಬಿಗೆ ಪೆಟ್ಟಾಗಿದೆ ಎಂಬ ಮಾಹಿತಿ ಲಭಿಸಿದೆ. ಹೀಗಾಗಿ, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

ಪ್ರಸ್ತುತ, ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಹೊಳೆನರಸೀಪುರದಲ್ಲಿನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ದಾಖಲಿಸಲಾಗಿದೆ ಮತ್ತು ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆಷಾಡ ಏಕಾದಶಿ ಪ್ರಯುಕ್ತ ಅವರು ಉಪವಾಸವಿದ್ದರು ಎನ್ನಲಾಗಿದ್ದು, ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.


Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

Subscribe to get the latest posts sent to your email.

- Advertisement -

LEAVE A REPLY