ಶ್ರೀನಗರ: ಭಾರೀ ಮಳೆಯಿಂದ ಭೂಕುಸಿತ ಉಂಟಾಗಿ ಓರ್ವ ಮಹಿಳೆ ಸಾವನ್ನಪ್ಪಿದ್ದು, ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ ಅಮರನಾಥ ಯಾತ್ರೆಗೆ ತೆರಳುವ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದ ಅಮರನಾಥ ಯಾತ್ರೆಯನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ.
ಗಂಡೇರ್ಬಾಲ್ ಜಿಲ್ಲೆಯ ಬಾಲ್ಟಾಲ್ ಯಾತ್ರೆಯ ಮಾರ್ಗದಲ್ಲಿ ನೀರಿನ ಜೊತೆ ಕಲ್ಲು ಬಂಡೆಗಳು ಉರುಳಿ ಬಂದಿದ್ದರಿಂದ ಮಹಿಳೆಯೊಬ್ಬರು ಸಿಲುಕಿ ಸಾವನ್ನಪ್ಪಿದ್ದಾರೆ. ಮಾರ್ಗದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಇತರ ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಾಲ್ಟಾಲ್ ಮಾರ್ಗದಲ್ಲಿ ಭೂಕುಸಿತವಾಗಿದೆ. ಭೂಕುಸಿತದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದ್ದು, ವಿಡಿಯೋದಲ್ಲಿ ಇಬ್ಬರು ಯಾತ್ರಿಕರು ಸಿಲುಕಿರುವುದು ಸೆರೆಯಾಗಿದೆ. ಯಾತ್ರಿಕರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
ಇನ್ನು ಈ ಅಪಾಯದಿಂದ ತಪ್ಪಿಸಿಕೊಳ್ಳಲು ಅನೇಕ ಜನರು ಮಾರ್ಗದಲ್ಲಿ ಅಳವಡಿಸಲಾದ ರೇಲಿಂಗ್‌ಗಳನ್ನು ಹಿಡಿದುಕೊಂಡಿರುವುದು ಸಹ ವಿಡಿಯೋದಲ್ಲಿ ಸೆರೆಯಾಗಿದೆ.
ಭೂಕುಸಿತದ ಸ್ಥಳದಲ್ಲಿ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಯಾತ್ರೆಯ ಮಾರ್ಗಗಳ ದುರಸ್ಥಿ ಕಾರ್ಯ ಮುಗಿಯುವವರೆಗೂ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ವರ್ಷ ಇಲ್ಲಿಯವರೆಗೂ ಎರಡು ಲಕ್ಷಕ್ಕೂ ಹೆಚ್ಚು ಯಾತ್ರಿಕರಯ ಅಮರನಾಥನ ದರ್ಶನ ಪಡೆದಿದ್ದು, ಜುಲೈ.3ರಂದು ಆರಂಭಗೊಂಡಿದ್ದ ಯಾತ್ರೆ ಆಗಸ್ಟ್.9ರಂದು ಕೊನೆಗೊಳ್ಳಲಿದೆ.
ಉಡುಪಿ: ಆಟ ಆಡುವಾಗ ಕುತ್ತಿಗೆಗೆ ಬೆಲ್ಟ್ ಸುತ್ತಿಕೊಂಡು ಬಾಲಕ ಸಾವು
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


