ಪಾಟ್ನಾ: ಮುಂಬರುವ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಮತದಾರರಿಗೆ ಭರ್ಜರಿ ಉಡುಗೊರೆಗಳನ್ನು ನೀಡುತ್ತಿರುವ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಇದೀಗ ರಾಜ್ಯದ ಜನತೆಗೆ ಮತ್ತೊಂದು ಬಂಪರ್ ಕೊಡುಗೆ ನೀಡಿದ್ದು, ಎಲ್ಲಾ ಗ್ರಾಹಕರಿಗೆ 125 ಯೂನಿಟ್‍ಗಳವರೆಗೆ ಉಚಿತ ವಿದ್ಯುತ್ ಘೋಷಿಸಿದ್ದಾರೆ.
ಈ ವರ್ಷದ ಕೊನೆಯಲ್ಲಿ ಬಿಹಾರ ವಿಧಾನಸಭಾ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನವೇ ಮತದಾರರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಲಾಗಿದೆ. ಆದರೂ ಚುನಾವಣಾ ಆಯೋಗವು ಇನ್ನೂ ಸರಿಯಾದ ದಿನಾಂಕಗಳನ್ನು ಪ್ರಕಟಿಸಿಲ್ಲ.
ನಾವು ಆರಂಭದಿಂದಲೂ ಅಗ್ಗದ ದರದಲ್ಲಿ ವಿದ್ಯುತ್ ಒದಗಿಸುತ್ತಿದ್ದೇವೆ. ಆಗಸ್ಟ್ 1, 2025ರಿಂದ, ಅಂದರೆ ಜುಲೈ ಬಿಲ್‍ನಿಂದಲೇ, ರಾಜ್ಯದ ಎಲ್ಲಾ ಗೃಹ ಬಳಕೆ ಗ್ರಾಹಕರು 125 ಯೂನಿಟ್‍ಗಳವರೆಗಿನ ವಿದ್ಯುತ್‍ಗೆ ಯಾವುದೇ ಹಣವನ್ನು ಪಾವತಿಸಬೇಕಾಗಿಲ್ಲ ಎಂದು ನಾವು ಈಗ ನಿರ್ಧರಿಸಿದ್ದೇವೆ ಎಂದು ನಿತೀಶ್ ಕುಮಾರ್ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಈ ಘೋಷಣೆಯ ಪ್ರಕಾರ ರಾಜ್ಯದ ಒಟ್ಟು 1 ಕೋಟಿ 67 ಲಕ್ಷ ಕುಟುಂಬಗಳಿಗೆ ಪ್ರಯೋಜನ ಲಭಿಸುತ್ತದೆ. ಗೃಹ ಗ್ರಾಹಕರ ಒಪ್ಪಿಗೆಯೊಂದಿಗೆ ಮನೆಗಳ ಮೇಲ್ಛಾವಣಿಗಳಲ್ಲಿ ಅಥವಾ ಹತ್ತಿರದ ಸಾರ್ವಜನಿಕ ಸ್ಥಳಗಳಲ್ಲಿ ಸೌರ ಫಲಕಗಳನ್ನು ಅಳವಡಿಸುವ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆಯೂ ಅವರು ಮಾಹಿತಿ ನೀಡಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ ಈ ನಿರ್ಧಾರವನ್ನು ಜಾರಿಗೆ ತರಲಾಗುವುದು ಎಂದು ಪ್ರಕಟಿಸಿದ್ದಾರೆ.
ಕುಟೀರ ಜ್ಯೋತಿ ಯೋಜನೆಯಡಿ, ಅತ್ಯಂತ ಬಡ ಕುಟುಂಬಗಳಿಗೆ ಸೌರ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸುವ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸುತ್ತದೆ ಮತ್ತು ಉಳಿದ ಕುಟುಂಬಗಳಿಗೆ ಸೂಕ್ತ ಬೆಂಬಲವನ್ನು ನೀಡುತ್ತದೆ. ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಗುರುತಿಸಿ, ಸಾಧ್ಯವಾದಷ್ಟು ಬೇಗ ಶಿಕ್ಷಕರ ನೇಮಕಾತಿ ಪರೀಕ್ಷೆ-4 ಅನ್ನು ನಡೆಸುವ ಪ್ರಕ್ರಿಯೆಯನ್ನು ಪ್ರಾರಂಭಿಸುವಂತೆ ನಿತೀಶ್ ಕುಮಾರ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಟಿಆರ್‍ಇ-1 ಮತ್ತು 2 ರಲ್ಲಿ 1.70 ಲಕ್ಷ 70,000 ಶಿಕ್ಷಕರನ್ನು ನೇಮಿಸಿಕೊಳ್ಳಲಾಯಿತು, ಆದರೆ ಟಿಆರ್‍ಇ-3 ರಲ್ಲಿ 87,774 ಖಾಲಿ ಹುದ್ದೆಗಳಲ್ಲಿ 66,603 ಹುದ್ದೆಗಳನ್ನು ಭರ್ತಿ ಮಾಡಬಹುದು. ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಗುರುತಿಸಿ, ಟಿಆರ್‍ಇ-4 ಪರೀಕ್ಷೆಯನ್ನು ಆದಷ್ಟು ಬೇಗ ನಡೆಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲು ಶಿಕ್ಷಣ ಇಲಾಖೆಗೆ ಸೂಚನೆ ನೀಡಲಾಗಿದೆ. ನೇಮಕಾತಿಗಳಲ್ಲಿ ಮಹಿಳೆಯರಿಗೆ ಶೇ.35ರಷ್ಟು ಮೀಸಲಾತಿಯ ಪ್ರಯೋಜನವನ್ನು ಬಿಹಾರದ ನಿವಾಸಿಗಳಿಗೆ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ ಎಂದು ಮತ್ತೊಂದು ಪೋಸ್ಟ್‌ನಲ್ಲಿ ಬರೆದಿದ್ದಾರೆ.
AIIMS ನಿಂದ ಭರ್ಜರಿ ಉದ್ಯೋಗ ಅವಕಾಶ: 2300 ಹುದ್ದೆಗಳಿಗೆ ಅರ್ಜಿ ಆಹ್ವಾನ
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


