Thursday, May 14, 2026
spot_img
More
    spot_img
    HomeLatest newsಇನ್ಮುಂದೆ ಮೆಟ್ರೋದಲ್ಲಿ ಫುಲ್ ನೆಟ್‌ವರ್ಕ್: ವೈಫೈ ಸೇವೆ ಆರಂಭಕ್ಕೆ ಬಿಎಂಆರ್‌ಸಿಎಲ್ ತೀರ್ಮಾನ

    ಇನ್ಮುಂದೆ ಮೆಟ್ರೋದಲ್ಲಿ ಫುಲ್ ನೆಟ್‌ವರ್ಕ್: ವೈಫೈ ಸೇವೆ ಆರಂಭಕ್ಕೆ ಬಿಎಂಆರ್‌ಸಿಎಲ್ ತೀರ್ಮಾನ

    ಬೆಂಗಳೂರಿನ ಮೆಟ್ರೋ ರೈಲು ಸಂಚರಿಸುವ ಮಾರ್ಗಗಳಲ್ಲಿ ನೆಟ್ವರ್ಕ್ ಸಮಸ್ಯೆಗೆ ಪ್ರಯಾಣಿಕರು ಇದೀಗ ಗುಡ್ ಬೈ ಹೇಳುವ ಟೈಂ ಬಂದಿದೆ. ಹೌದು, ಮೆಟ್ರೋ ಮಾರ್ಗಗಳಲ್ಲಿ ಉಂಟಾಗುವ ನೆಟ್‌ವರ್ಕ್ ಸಮಸ್ಯೆ ನಿವಾರಣೆಗೆ BMRCL, ಮೆಟ್ರೋ ನಿಲ್ದಾಣಗಳಲ್ಲಿ IBS, BTS ಸೆಲ್ಯುಲಾರ್ ಟವರ್ ಮತ್ತು ಪೋಲ್‌ಗಳನ್ನು ಇಟ್ಟು ವೈಫೈ ಮೂಲಕ ಗ್ರಾಹಕರಿಗೆ 4G, 5G ಸೇವೆ ಒದಗಿಸಲು ಮುಂದಾಗಿದೆ. ವಿಶೇಷವಾಗಿ ಸುರಂಗ ಮಾರ್ಗವಿರುವ ಡೈರಿ ವೃತ್ತದಿಂದ ನಾಗವಾರದವರೆಗೆ 12 ನಿಲ್ದಾಣಗಳ ಪ್ರಯಾಣಿಕರಿಗೆ ಅನುಕೂಲ ಆಗಲಿದೆ.ಬೆಂಗಳೂರು ಮೆಟ್ರೋ (ನಮ್ಮ ಮೆಟ್ರೋ) ಎರಡನೇ ಹಂತದ ಮಾರ್ಗಗಳಲ್ಲಿ ನಿರಂತರ ಮತ್ತು ಸುಗಮ ಮೊಬೈಲ್ ಸಂಪರ್ಕವನ್ನು ಒದಗಿಸುವ ಉದ್ದೇಶದಿಂದ ಬಿಎಂಆರ್‌ಸಿಎಲ್ (BMRCL) ಮತ್ತು ಅಡ್ವಾನ್ಸ್ ಕಮ್ಯೂನಿಕೇಷನ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ಸಿಸ್ಟಮ್ಸ್ ಇಂಡಿಯಾ ಪ್ರೈ.ಲಿ. (ACES India Pvt. Ltd.) ಮಧ್ಯೆ 13 ವರ್ಷಗಳ ಬಾಡಿಗೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಈ ಒಪ್ಪಂದದ ಮೂಲಕ, ಎರಡು ಸಂಸ್ಥೆಗಳು ಮೆಟ್ರೋ ಪ್ರಯಾಣಿಕರಿಗೆ ಉತ್ತಮ ಹಾಗೂ ಭರವಸೆ ನೀಡುವ ಮೊಬೈಲ್ ನೆಟ್‌ವರ್ಕ್ ಸೌಲಭ್ಯವನ್ನು ಕಲ್ಪಿಸುವುದು ಮಾತ್ರವಲ್ಲದೆ, ಬಿಎಂಆರ್‌ಸಿಎಲ್‌ಗೆ ಇದೇ ಒಪ್ಪಂದದ ಮೂಲಕ ಹೆಚ್ಚುವರಿ ಆದಾಯವೂ ಒದಗಿಸಲಿದೆ.

    ಈ ಯೋಚನೆಯ ಅಡಿಯಲ್ಲಿ, ಟ್ವಿನ್‌ ಸಂಡರ್‌ಗ್ರಾಉಂಡ್ ಮಾರ್ಗಗಳಲ್ಲಿ ಮೊಬೈಲ್ ಸಂಪರ್ಕ ಸುಧಾರಣೆಗೆ ಸಂಪೂರ್ಣ ಮೂಲಸೌಕರ್ಯವನ್ನು, ಕ್ಲಸ್ಟರ್ ಬೇಸ್ ಟ್ರಾನ್ಸಿವರ್ ಸ್ಟೇಷನ್‌ಗಳು (BTS), ಐನ್-ಬಿಲ್ಡಿಂಗ್ ಸೊಲ್ಯೂಷನ್‌ಗಳು (IBS), ಮತ್ತು ಟೆಲಿಕಾಂ ಟವರ್‌ಗಳು ಇತ್ಯಾದಿಯನ್ನು ಸ್ಥಾಪಿಸಲಾಗಿದೆ. ಈ ಮಾದರಿಯು ಅನೇಕ ಮೊಬೈಲ್ ನೆಟ್ವರ್ಕ್ ಆಪರೇಟರ್‌ಗಳು ಒಂದೇ ಸೌಕರ್ಯದ ಮೂಲಕ ಸೇವೆ ನೀಡಲು ಸಾಧ್ಯವಾಗುತ್ತದೆ.ಈ ಒಪ್ಪಂದಕ್ಕೆ ಸಂಬಂಧಿಸಿದಂತೆ, ಬಿಎಂಆರ್‌ಸಿಎಲ್ ಕಾರ್ಯನಿರ್ವಾಹಕ ನಿರ್ದೇಶಕ (ಸಿಸ್ಟಮ್ಸ್) ಎ.ಎಸ್. ಶಂಕರ್ ಮತ್ತು ಎಸಿಇಎಸ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ಎನ್. ಮಝರ್ ಸಹಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಬಿಎಂಆರ್‌ಸಿಎಲ್ ನಿರ್ದೇಶಕ ಸುಮಿತ್ ಭಟ್ನಾಗರ್ ಮತ್ತು ಎಸಿಇಎಸ್ ಸಿಇಒ ಡಾ. ಅಕ್ರಮ್ ಅಬುರಾಸ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

    5 ವರ್ಷ ದಾಟಿದ ಮಕ್ಕಳ ‘ಆಧಾರ್’ ಅಪ್ ಡೇಟ್ ಮಾಡೋದು ಕಡ್ಡಾಯ, ಇಲ್ಲಿದೆ ಮಾಹಿತಿ

    ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ

    ಎಐ ಅಡ್ವೋಕೇಟ್‌ ಅಸಿಸ್ಟೆಂಟ್‌ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಬೆಂಗಳೂರಿನಲ್ಲಿ ಮುಂಗಾರು ಆರ್ಭಟ: ಆಲಿಕಲ್ಲು ಮಳೆ, ಗುಡುಗು-ಸಿಡಿಲಿಗೆ ನಗರ ತತ್ತರ

    ಬೆಂಗಳೂರು: ಸಂಜೆ ಐಟಿ ರಾಜಧಾನಿ ಬೆಂಗಳೂರಿನ ಮೇಲೆ ಪ್ರಕೃತಿ ತನ್ನ ಕೋಪವನ್ನು ಸಂಪೂರ್ಣವಾಗಿ ತೋರಿಸಿತು. ಕಾರ್ಮೋಡ ಕವಿದ ಆಕಾಶದಿಂದ ಮೊದಲು ಗುಡುಗು-ಸಿಡಿಲಿನ ಆರ್ಭಟ, ಬಳಿಕ ಆಲಿಕಲ್ಲು ಮಳೆ ಮತ್ತು ಜೋರು ಗಾಳಿ ನಗರವನ್ನು...

    ಇಂಡೋನೇಷ್ಯಾದ ಡೇ-ಕೇರ್‌ನಲ್ಲಿ 53 ಮಕ್ಕಳಿಗೆ ನಡೆದ ಅಮಾನವೀಯ ದೌರ್ಜನ್ಯ: ವಿಡಿಯೋ ನೋಡಿ ಜಗತ್ತೇ ಬೆಚ್ಚಿ ಬಿದ್ದಿತು

    ಇಂಡೋನೇಷ್ಯಾದ ಜಾವಾ ದ್ವೀಪದ ಯೋಗ್ಯಕರ್ತ ನಗರದಲ್ಲಿ ನಡೆದ ಒಂದು ಆಘಾತಕಾರಿ ಘಟನೆ ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿದೆ. 'ಲಿಟಲ್ ಅರೇಶಾ' ಎಂಬ ಡೇ-ಕೇರ್ ಕೇಂದ್ರದಲ್ಲಿ ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ 53 ಮಕ್ಕಳನ್ನು...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading