Thursday, September 3, 2026
spot_img
More
    spot_img
    HomeLatest newsಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಆರ್‌ಸಿಬಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ಸಂಪುಟದಲ್ಲಿ ನಿರ್ಧಾರ

    ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಆರ್‌ಸಿಬಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ಸಂಪುಟದಲ್ಲಿ ನಿರ್ಧಾರ

    ಬೆಂಗಳೂರು: ಜೂನ್‌ 4ರಂದು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ( ಜುಲೈ 17 ) ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ದೊಡ್ಡ ಹೆಜ್ಜೆಯನ್ನಿಡಲು ತೀರ್ಮಾನಿಸಿದೆ.

    Advertisement

    ಚಿನ್ನಸ್ವಾಮಿ ಕಾಲ್ತುಳಿತಕ್ಕೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಫ್ರಾಂಚೈಸಿಯೇ ಕಾರಣ ಅದರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು ಎಂದು ನಿವೃತ್ತ ನ್ಯಾಯಮೂರ್ತಿ ಮೈಕೆಲ್‌ ಡಿ ಕುನ್ಹಾ ತಂಡ ಈ ವರದಿಯನ್ನು ಸಿದ್ದಪಡಿಸಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದು, ಈ ವರದಿಯನ್ನು ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಸ್ವಾಗತಿಸಿದೆ.

    ಇನ್ನು ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಮಾತ್ರವಲ್ಲದೇ ಕೆಎಸ್‌ಸಿಎ ವಿರುದ್ಧವೂ ಸಹ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ನಿರ್ಧರಿಸಲಾಗಿದ್ದು, ಪೊಲೀಸ್‌ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಸೂಚಿಸಲು ತೀರ್ಮಾನಿಸಲಾಗಿದೆ.

    ಕಾಲ್ತುಳಿತಕ್ಕೆ ಆರ್‌ಸಿಬಿ, ಡಿಎನ್‌ಎ ಹಾಗೂ ಕೆಎಸ್‌ಸಿಎ ನೇರ ಹೊಣೆ ಎಂದು ಉಲ್ಲೇಖಿಸಲಾಗಿದ್ದು, ಪೊಲೀಸರು ಸಹ ನೇರ ಹೊಣೆ ಎನ್ನಲಾಗಿದೆ. ಕಾರ್ಯಕ್ರಮ ನಡೆಸುವುದು ಅಸಾಧ್ಯವೆಂದು ಗೊತ್ತಿದ್ದರೂ ಸಹ ಕಾರ್ಯಕ್ರಮ ಮಾಡಿದ್ದಾರೆ ಹೀಗಾಗಿ ಎಲ್ಲರೂ ನೇರ ಹೊಣೆ, ಬಂದೋಬಸ್ತ್‌ ಇರಲಿಲ್ಲ, ಕ್ರೀಡಾಂಗಣದಲ್ಲಿ ಕೇವಲ 79 ಪೊಲೀಸರಿದ್ದರೆ, ಹೊರಗೆ ಪೊಲೀಸ್‌ ಇರಲಿಲ್ಲ ಹಾಗೂ ಆಂಬುಲೆನ್ಸ್‌ ಸಹ ಇರಲಿಲ್ಲ. ಕಾಲ್ತುಳಿತ 3.25ಕ್ಕೆ ಸಂಭವಿಸಿದೆ, ಕಮಿಷನರ್‌ಗೆ 5.30 ಆದರೂ ವಿಷಯ ತಿಳಿದಿರಲಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

    ದೇಶದ ಸ್ವಚ್ಛ ನಗರಗಳ ಪಟ್ಟಿ ಪ್ರಕಟ; ಟಾಪ್‌ 10ರಲ್ಲಿ ಸ್ಥಾನ ಗಿಟ್ಟಿಸಿದ ಮೈಸೂರು

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading