ಬೆಂಗಳೂರು: ಚುನಾವಣೆ ಬಂದಾಗ ಬಿಜೆಪಿಯವರು ನಮ್ಮ ಗ್ಯಾರಂಟಿ ಕಾರ್ಯಕ್ರಮಗಳನ್ನು ಘೋಷಣೆ ಮಾಡುತ್ತಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಆರೋಪಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ 25 ವರ್ಷದಿಂದ ಬಿಹಾರದಲ್ಲಿ ಬಿಜೆಪಿಯ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದೆ. ದೇಶದಲ್ಲಿ ಅತ್ಯಂತ ಭ್ರಷ್ಟ ರಾಜ್ಯ ಬಿಹಾರವಾಗಿದೆ ಎಂದು ಟೀಕಿಸಿದರು.
ಜಿಎಸ್‍ಟಿ ಸಂಗ್ರಹ ಪ್ರಮಾಣ ಅತ್ಯಂತ ಕಡಿಮೆ ಪ್ರಮಾಣವಿದ್ದು, ಶಿಕ್ಷಣ, ಕೈಗಾರಿಕೆಯಲ್ಲೂ ಹಿಂದುಳಿದಿದೆ. ದಕ್ಷಿಣ ರಾಜ್ಯಗಳಿಗೆ ಬಿಜೆಪಿ ಆಡಳಿತವಿರುವ ಯಾವುದೇ ರಾಜ್ಯವನ್ನು ಹೋಲಿಕೆ ಮಾಡಲು ಸಾಧ್ಯವಿಲ್ಲ. ನಮ್ಮ ಪಾಲಿನ ಜಿಎಸ್‍ಟಿ ಹಣವು ಅಲ್ಲಿಗೆ ಹೋಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಇಷ್ಟೆಲ್ಲಾ ಹಣ ಹೋದರೂ 15 ಸೇತುವೆಗಳು ಕುಸಿದುಬಿದ್ದಿವೆ. ಇದುವರೆಗೂ ಬಿಹಾರ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ. ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ ಆಧಾರ್ ಕಾರ್ಡ್ ಅನ್ನು ವಿರೋಧಿಸಿತ್ತು. ನರೇಗ ಹಾಗೂ 5 ಗ್ಯಾರಂಟಿಗಳ ವಿರುದ್ಧ ಮಾತನಾಡುತ್ತಿದ್ದರು. ಈಗ ಅವರೇ ಘೋಷಣೆ ಮಾಡಿದ್ದಾರೆ ಎಂದು ಬಿಹಾರದಲ್ಲಿ ಉಚಿತ ವಿದ್ಯುತ್ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿಕಾರಿದರು.
ಬಿಜೆಪಿಯವರು ನಮ್ಮ ಗ್ಯಾರಂಟಿಗಳನ್ನು ಅವಹೇಳನ ಮಾಡುತ್ತಿದ್ದರು. ಈಗ ಅವರೇ ಘೋಷಣೆ ಮಾಡಿದ್ದಾರೆ. ಜನಪರ ಕಾರ್ಯಕ್ರಮವಾಗಿರುವುದರಿಂದ ನಾವು ಗ್ಯಾರಂಟಿ ಕಾರ್ಯಕ್ರಮಗಳನ್ನು ಸ್ವಾಗತಿಸುತ್ತೇವೆ.
ಬಿಹಾರದಲ್ಲಿ ಚುನಾವಣೆ ಎದುರಾಗುವ ಹಿನ್ನೆಲೆಯಲ್ಲಿ ಗ್ಯಾರಂಟಿಯನ್ನು ಘೋಷಣೆ ಮಾಡಿದ್ದಾರೆ. ದೇಶದಲ್ಲಿ ನಮ್ಮ ರಾಜ್ಯ ಎರಡನೇ ಸ್ಥಾನದಲ್ಲಿರಲು ಗ್ಯಾರಂಟಿ ಯೋಜನೆಗಳೇ ಕಾರಣ. ವಾರ್ಷಿಕ 56 ಸಾವಿರ ಕೋಟಿ ರೂ. ಗ್ಯಾರಂಟಿಗಾಗಿ ಖರ್ಚಾಗುತ್ತದೆ. ಇದರಿಂದ ಜಿಎಸ್‍ಟಿ ಸಂಗ್ರಹವು ಆಗುತ್ತದೆ. ರಾಜ್ಯದ ಆದಾಯದ ಹೆಚ್ಚಳಕ್ಕೂ ಕಾರಣವಾಗಲಿದೆ ಎಂದು ಸಮರ್ಥಿಸಿಕೊಂಡರು.
ದೇಶದ ಸ್ವಚ್ಛ ನಗರಗಳ ಪಟ್ಟಿ ಪ್ರಕಟ; ಟಾಪ್ 10ರಲ್ಲಿ ಸ್ಥಾನ ಗಿಟ್ಟಿಸಿದ ಮೈಸೂರು
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


