Wednesday, November 4, 2026
spot_img
More
    spot_img
    HomeLatest newsಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಸಿಸಿಟಿವಿ ಕಡ್ಡಾಯಗೊಳಿಸಿ ಸುತ್ತೋಲೆ ಹೊರಡಿಸಿದ ಉನ್ನತ ಶಿಕ್ಷಣ ಇಲಾಖೆ

    ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಸಿಸಿಟಿವಿ ಕಡ್ಡಾಯಗೊಳಿಸಿ ಸುತ್ತೋಲೆ ಹೊರಡಿಸಿದ ಉನ್ನತ ಶಿಕ್ಷಣ ಇಲಾಖೆ

    ಬೆಂಗಳೂರು: ರಾಜ್ಯದ ಇಂಜಿನಿಯರಿಂಗ್ ಕಾಲೇಜ್‌ಗಳಲ್ಲಿ ಸಿಸಿಟಿವಿ ಅಳವಡಿಕೆಯನ್ನು ಈಗಾಗಲೇ ಕಡ್ಡಾಯ ಮಾಡಿರುವ ಉನ್ನತ ಶಿಕ್ಷಣ ಇಲಾಖೆಯು ಇದೀಗ ತನ್ನ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿ ಸಿಸಿಟಿವಿ ಅಳವಡಿಕೆಯನ್ನು ಕಡ್ಡಾಯಗೊಳಿಸಿ ಸುತ್ತೋಲೆ ಹೊರಡಿಸಿದೆ.

    ರಾಜ್ಯದ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮಾದಕ ದ್ರವ್ಯಗಳ ವ್ಯಸನಕ್ಕೆ ತುತ್ತಾಗುವುದು. ಹ್ಯಾಂಗಿಂಗ್ ಹಾಗೂ ಲೈಂಗಿಕ ದೌರ್ಜನ್ಯಕ್ಕೆ ತುತ್ತಾಗುವುದು, ಇನ್ನಿತರ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿರುವುದು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಆಕ್ರಮ, ಅನೈತಿಕ ಚಟುವಟಿಕೆಗಳನ್ನು ನಿಯಂತ್ರಿಸಲು ಸಿಸಿಟಿವಿ ಅಳವಡಿಕೆಗೆ ಇಲಾಖೆ ಮುಂದಾಗಿದೆ.

    ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ಸರ್ಕಾರಿ, ಅನುದಾನಿತ, ಖಾಸಗಿ ಕಾಲೇಜ್‌ಗಳು ಮತ್ತು ವಿಶ್ವವಿದ್ಯಾಲಯಗಳ ಪ್ರಾಂಶುಪಾಲರು ಸಿಸಿಟಿವಿ ಅಳವಡಿಕೆಯ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

    ಜತೆಗೆ ಈಗಾಗಲೇ ಸಿಸಿಟಿವಿ ಅಳವಡಿಕೆಯಾಗಿರುವ ಕಾಲೇಜುಗಳಲ್ಲಿ ಸಿಸಿಟಿವಿ ಅಳವಡಿಕೆ ಆಗಿರುವುದನ್ನು ಮತ್ತು ಆ ಸಿಸಿಟಿವಿಗಳು ಕಾರ್ಯನಿರ್ವಹಿಸುತ್ತಿರುವ ವಿವರಗಳನ್ನು ಮತ್ತು ಸರ್ಕಾರಿ ವಿದ್ಯಾರ್ಥಿಗಳಿಂದ ಸಂಗ್ರಹವಾಗಿ ಬಳಕೆಯಾಗದೇ ಉಳಿತಾಯ ಖಾತೆಗಳಲ್ಲಿ ಲಭ್ಯವಿರುವ ಮೊತ್ತದ ವಿವರಗಳನ್ನು ಇಲಾಖೆ ಜು.21ರೊಳಗೆ ಸಲ್ಲಿಸುವಂತೆ ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

    ಬೆಂಗಳೂರು: ಕಾರ್ಯಕ್ರಮಗಳಿಗೆ ಅತಿಥಿ ರೀತಿ ಬಂದು ಹಣ ಕದಿಯುತ್ತಿದ್ದವನ ಬಂಧನ

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search