ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ನಡೆದ ಸರಣಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ತಾನು ಧರ್ಮಸ್ಥಳದಲ್ಲಿ ಸ್ವಚ್ಛತಾ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿದ್ದಾಗ ಕೊಲ್ಲಲ್ಪಟ್ಟ ಹಾಗೂ ಅತ್ಯಾಚಾರವೆಸಗಿ ಹತ್ಯೆ ಮಾಡಲ್ಪಟ್ಟ ಹಲವು ಹೆಣಗಳನ್ನು ಹೂತುಹಾಕಿದ್ದೇನೆ ಎಂದು ಪೊಲೀಸ್ ಠಾಣೆಗೆ ಆಗಮಿಸಿದ್ದ.
ಅಲ್ಲದೇ ಈ ಕುರಿತು ಜುಲೈ 11ರಂದು ದೂರನ್ನೂ ಸಹ ದಾಖಲಿಸಿದ್ದ. ಅಲ್ಲದೇ ಅಸ್ತಿಪಂಜರವೊಂದನ್ನೂ ಸಹ ಪೊಲೀಸರಿಗೆ ಒಪ್ಪಿಸಿದ್ದ. ಹೀಗಿದ್ದರೂ ಸಹ ಪೊಲೀಸರು ಸ್ಥಳ ಮಹಜರು ನಡೆಸದೇ ಇರುವುದು ಸದ್ಯ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಈ ಕುರಿತು ಪ್ರತಿಕ್ರಿಯಿಸಿದ ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಡಾ. ಅರುಣ್ ಕೆ ದೂರು ಸಲ್ಲಿಸಿರುವ ವ್ಯಕ್ತಿ ಸ್ಥಳ ಮಹಜರು ನಡೆಸಿದ ಬಳಿಕ ತಲೆ ಮರೆಸಿಕೊಳ್ಳುವ ಸಾಧ್ಯತೆಯಿದೆ ಎಂದು ಸ್ಥಳೀಯ ವ್ಯಕ್ತಿಗಳ ಗುಪ್ತಚರ ಮಾಹಿತಿ ಬಂದಿದೆ ಎಂದು ತಿಳಿಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಸಮಾಧಿಗಳನ್ನು ಅಗೆಯುವ ಪ್ರಕ್ರಿಯೆಯನ್ನು ನಡೆಸಲು ಆತುರ ತೋರಿಸಲಾಗುತ್ತಿದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದು, ಸಮಾಧಿ ಅಗೆದ ಬಳಿಕ ದೂರುದಾರ ತಲೆ ಮರೆಸಿಕೊಳ್ಳುವ ಸಾಧ್ಯತೆಯಿದೆ, ಈ ವಿಷಯವನ್ನು ಸಾಕ್ಷಿದಾರರ ವಕೀಲರಿಗೂ ತಿಳಿಸಲಾಗಿದೆ, ಸಾಧ್ಯತೆಗಳನ್ನು ಪರಿಶೀಲಿಸಲಾಗುವುದು ಎಂದಿದ್ದಾರೆ.
ಈ ಬಗ್ಗೆ ತನಿಖಾಧಿಕಾರಿಗಳಿಗೆ ಇತ್ತೀಚೆಗೆ ಮಾಹಿತಿ ಬಂದಿದ್ದು, ಸಾಕ್ಷಿದಾರರ ಪರ ವಕೀಲರು ಇದನ್ನು ತನಿಖಾಧಿಕಾರಿಗಳ ಗಮನಕ್ಕೆ ತಂದಿರುವುದಿಲ್ಲ. ಸಾಕ್ಷಿ ದೂರುದಾರನು ಸಮ್ಮತಿಸಿದಲ್ಲಿ ಆತನ ಮಂಪರು ಪರೀಕ್ಷೆ, ಫಿಂಗರ್‌ಪ್ರಿಂಟ್ ಹಾಗೂ ನಾರ್ಕೊ ಪರೀಕ್ಷೆಗಳನ್ನು ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ವರದಿಯನ್ನು ಸಲ್ಲಿಸಿದ್ದಾರೆ.
ತನಿಖಾಧಿಕಾರಿ ತನಿಖೆಯ ಯಾವ ಸಂದರ್ಭದಲ್ಲಿ ಸಮಾಧಿ ಅಗೆಯುವ ಪ್ರಕ್ರಿಯೆ ಸೂಕ್ತವೆಂದು ಹೇಳುತ್ತಾರೋ ಆಗ ಸೂಕ್ತ ಕಾನೂನು ಪ್ರಕ್ರಿಯೆ ಅನುಸರಿಸಿಕೊಂಡು ಸಮಾಧಿ ಅಗೆಯುವ ಪ್ರಕ್ರಿಯೆಯನ್ನು ನಡೆಸಲಾಗುವುದು ಎಂದು ಎಸ್‌ಪಿ ಡಾ. ಅರುಣ್ ಕೆ ತಿಳಿಸಿದ್ದಾರೆ.
ಡಿ ಬಾಸ್ ಕೈನಲ್ಲಿನ ಮೊಬೈಲ್ ಬೆಲೆ ಕಂಡು ಹೌಹಾರಿದ ನೆಟ್ಟಿಗರು
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


