Monday, November 2, 2026
spot_img
More
    spot_img
    HomeBreaking Newsಬಿಜೆಪಿಯಿಂದಲೇ ಧರ್ಮಸ್ಥಳ ಕೇಸಿನ ಅನಾಮಿಕನನ್ನು ಸೃಷ್ಟಿಸಲಾಗಿದೆ.

    ಬಿಜೆಪಿಯಿಂದಲೇ ಧರ್ಮಸ್ಥಳ ಕೇಸಿನ ಅನಾಮಿಕನನ್ನು ಸೃಷ್ಟಿಸಲಾಗಿದೆ.

    ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿದ್ದೇನೆ ಎಂದು ದೂರು ನೀಡಿರುವಂತಹ ಅನಾಮಿಕ ವ್ಯಕ್ತಿಯನ್ನು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸೃಷ್ಟಿಸಿರುತ್ತದೆ. ಈ ಘಟನೆಯನ್ನು ರಾಜಕೀಯಗೊಳಿಸಲು ಬಿಜೆಪಿ ‘ಧರ್ಮಸ್ಥಳ ಚಲೋ’ ಹೋರಾಟ ಹಮ್ಮಿಕೊಂಡಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಆರೋಪ ಮಾಡಿದ್ದಾರೆ.

    ಬಿಜೆಪಿ ‘ಧರ್ಮಸ್ಥಳ ಚಲೋ’ ಹೋರಾಟ ಹಮ್ಮಿಕೊಂಡಿದೆ. ಈ ಘಟನೆಗೆ ರಾಜಕೀಯ ಬಣ್ಣ ಬಳಿಯುವ ಉದ್ದೇಶ ಕಾಂಗ್ರೆಸ್‌ಗಿಲ್ಲ, ಆದರೆ ಬಿಜೆಪಿ ತನ್ನ ಸ್ವಾರ್ಥಕ್ಕಾಗಿ ಇಂತಹ ರಾಜಕೀಯ ಮಾಡುತ್ತಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು. ಧಾರ್ಮಿಕ ಮತ್ತು ಆಧ್ಯಾತ್ಮಿಕ ವಿಷಯಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿಜವಾದ ಭಕ್ತಿ ಮತ್ತು ನಂಬಿಕೆಯಿದೆ. ದೇಶದ ಎಲ್ಲಾ ದೇವಾಲಯಗಳು, ಮಸೀದಿಗಳು, ಚರ್ಚ್‌ಗಳು ಮತ್ತು ಬೌದ್ಧ ವಿಹಾರಗಳು ಸೇರಿದಂತೆ ಎಲ್ಲ ಸಮುದಾಯಗಳ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಕಾಂಗ್ರೆಸ್ ಶ್ರಮಿಸಿದೆ ಎಂದು ಹೇಳಿದರು.

    ಧರ್ಮಸ್ಥಳ ಘಟನೆ ಕುರಿತು ದೂರು ಬಂದಿರುವುದನ್ನು ಗಮನಿಸಿ, ಅದರ ಸತ್ಯಾಸತ್ಯತೆ ಆಧಾರದ ಮೇಲೆ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು. ಈ ವಿಷಯದಲ್ಲಿ ಯಾರ ಮೇಲೂ ಕಳಂಕ ತರುವ ಉದ್ದೇಶ ನಮಗಿಲ್ಲ. ಆದರೆ, ಶವಗಳನ್ನು ಹೂತು ಹಾಕಿದ್ದೇನೆ ಎಂದು ದೂರು ನೀಡಿರುವಂತಹ ಅನಾಮಿಕ ವ್ಯಕ್ತಿಗಳನ್ನು ಭಾರತೀಯ ಜನತಾ ಪಾರ್ಟಿಯಿಂದ ಸೃಷ್ಟಿಸಿರುತ್ತದೆ. ನಂತರ ಅವರ ವಿರುದ್ಧ ತನಿಖೆಗೆ ಆಗ್ರಹಿಸಿ, ಬಳಿಕ ತನಿಖೆ ದಾರಿ ತಪ್ಪಿಸುವ ಕೆಲಸವನ್ನು ಬಿಜೆಪಿ ಮಾಡುತ್ತದೆ’ಎಂದು ಆರೋಪಿಸಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search