ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತೊಮ್ಮೆ ಜೈಲು ಪಾಲಾಗಿದ್ದಾರೆ. ಜಾಮೀನು ರದ್ದಾಗಿದೆ. ಅಭಿಮಾನಿಗಳಿಗೆ ಒಂದು ಭಾವುಕ ಸಂದೇಶವನ್ನು ಕಳುಹಿಸಿದ್ದಾರೆ. ಈ ಸಂದೇಶವನ್ನು ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಂ ಮೂಲಕ ಹಂಚಿಕೊಂಡಿದ್ದಾರೆ.
ಎಲ್ಲರಿಗು ನಮಸ್ಕಾರ. ನಾನು ವಿಜಯಲಕ್ಷ್ಮಿ ದರ್ಶನ್. ನಿಮ್ಮ ಪ್ರೀತಿಯ ದರ್ಶನ್ ರವರು ನಿಮಗೆ ಕಳಿಸಿರುವ ಸಂದೇಶ.
ಕನ್ನಡ ಕಲಾಭಿಮಾನಿಗೆ ಹಾಗೂ ನನ್ನ ಸೆಲೆಬ್ರಿಟಿಗಳಿಗೆ ಈ ನಿಮ್ಮ ಪ್ರೀತಿಯ ದಾಸನ ಶಿರ ಸಾಷ್ಟಾಂಗ ನಮಸ್ಕಾರಗಳು. ನನ್ನ ಸುಖದಲ್ಲಿ ಭಾಗಿಯಾಗಿ, ಕಷ್ಟದಲ್ಲಿ ಬೆನ್ನೆಲುಬಾಗಿ ನಿಂತ ನಿಮ್ಮ ಪ್ರೀತಿ ಅಭಿಮಾನಕ್ಕೆ ನಾನು ಜೀವನ ಪರ್ಯಂತ ಆಭಾರಿ. ನಾನು ಎಲ್ಲೆ ಇದ್ದರು ಹೇಗೆ ಇದ್ದರು ನಿಮ್ಮಗಳ ಶ್ರೇಯೋಭಿಲಾಷೆಯನ್ನೆ ಬಯಸುತ್ತೇನೆ.
ಪ್ರಸಕ್ತ ವಿದ್ಯಮಾನ ಏನೇ ಇದ್ದರು, ನನ್ನ ನಂಬಿ ಕನಸು ಕಂಡಿರುವ ನಿರ್ದೇಶಕರ ಹಾಗು ನನ್ನ ಮೇಲೆ ಕೊಟ್ಯಂತರ ಹಣ ಹೂಡಿರುವ ನಿರ್ಮಾಪಕರ ಬೆಂಬಲವಾಗಿ ನಿಲ್ಲಬೇಕಾದ್ದು ನನ್ನ ಆದ್ಯ ಕರ್ತವ್ಯ , ಹಾಗಾಗಿ ನನ್ನ ” ದಿ ಡೆವಿಲ್ ” ಚಿತ್ರದ ಎಲ್ಲಾ ಕೆಲಸ ಕಾರ್ಯಗಳು ಯಾವುದೆ ಅಡೆತಡೆಇಲ್ಲದೆ ಸಾಗಲಿ ಎಂಬುಂದು ನನ್ನ ಆಶಯ, ಹಾಗಾಗಿ ಅದಕ್ಕೆ ನನ್ನ ಸಂಪೂರ್ಣಸಹಕಾರವಿದೆ ಎಂದು ಈ ಮೂಲಕ ತಿಳಿಸುತ್ತೇದ್ದೇನೆ. ಹಾಗು ಇದಕ್ಕೆ ನನ್ನ ಸೆಲೆಬ್ರಿಟಿಗಳ ಸಹಮತವಿದೆಯೆಂದು ಧೃಡವಾಗಿನಂಬಿದ್ದೇನೆ.
“ಸಿನಿಮಾ ಒಂದು ಮನರಂಜನೆಯ ಮಾಧ್ಯಮ ಅದನ್ನ ಕೇವಲ ಮನರಂಜನೆಯ ದೃಷ್ಟಿಯಿಂದ ಮಾತ್ರ ನೋಡಬೇಕು.
ನಿಮ್ಮ ಪ್ರೀತಿಯ ದಾಸ.
,ರಜನಿಕಾಂತ್ ‘ಕೂಲಿ’ ಬಾಕ್ಸ್ ಆಫೀಸ್ ದಾಖಲೆ: ಮೊದಲ ದಿನವೇ ವಿಶ್ವಾದ್ಯಂತ ₹130 ಕೋಟಿ ಕಲೆಕ್ಷನ್
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


